ಇಸ್ರೇಲ್‌ ಮತ್ತೆ ಸರಣಿ ವಾಯುದಾಳಿ – ಗಾಜಾದಲ್ಲಿ ಕನಿಷ್ಠ 70 ಮಂದಿ ಪ್ಯಾಲೆಸ್ತೀನಿಯರು ಸಾವು!

Public TV
1 Min Read

– 3 ದಿನಗಳ ಅಂತರದಲ್ಲಿ ಇಸ್ರೇಲ್‌ 2ನೇ ಬಾರಿ ದಾಳಿ

ಗಾಜಾ: ಕದನ ವಿರಾಮ ಘೋಷಣೆಯಾದ ಬಳಿಕವೂ ಇಸ್ರೇಲ್‌ ತನ್ನ ವಾಯುದಾಳಿಯನ್ನು (Israel Airstrikes) ಮುಂದುವರಿಸಿದೆ. ಗುರುವಾರ ಗಾಜಾದಲ್ಲಿ (Gaza Strip) ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 70 ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

Israel

ಗಾಜಾಪಟ್ಟಿಯ ಉತ್ತರ ಮತ್ತು ದಕ್ಷಿಣ ಪ್ರದೇಶಗಳಲ್ಲಿ ಹಲವು ಮನೆಗಳು ಹಾಗೂ ಮೂಲ ಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ಸೇನೆ ವಾಯುದಾಳಿ ನಡೆಸಿದೆ. ಈ ದಾಳಿಯಲ್ಲಿ ಹಲವು ಹಮಾಸ್‌ ನಾಯಕರೂ ಹತ್ಯೆಗೀಡಾಗಿದ್ದಾರೆ. ಕಳೆದ ಜನವರಿ 19ರಂದು ಕದನ ವಿರಾಮ ಘೋಷಣೆಯಾದ ಬಳಿಕ ಮೂರು ದಿನಗಳ ಅಂತರದಲ್ಲಿ ಇಸ್ರೇಲ್‌ ನಡೆಸಿದ 2ನೇ ವಾಯುದಾಳಿ ಇದಾಗಿದೆ. ಇದನ್ನೂ ಓದಿ: ಇಸ್ರೇಲ್‌ ಭೀಕರ ವಾಯುದಾಳಿ – ಗಾಜಾದಲ್ಲಿ 300ಕ್ಕೂ ಅಧಿಕ ಮಂದಿ ಸಾವು

Israel 3

ಕಳೆದ ಎರಡು ದಿನಗಳ ಹಿಂದೆಯಷ್ಟೇ ಭೀಕರ ವೈಮಾನಿಕ ದಾಳಿ ನಡೆಸಿದ್ದ ಇಸ್ರೇಲ್‌, ಗಾಜಾದಲ್ಲಿ 400ಕ್ಕೂ ಅಧಿಕ ಮಂದಿಯನ್ನ ಹತ್ಯೆ ಮಾಡಿತ್ತು. ಗಾಜಾ ಪಟ್ಟಿಯಲ್ಲಿದ್ದ ಹಮಾಸ್‌ನ ಆಂತರಿಕ ಭದ್ರತಾ ಸೇವೆಗಳ ಮುಖ್ಯಸ್ಥ ಮಹಮೂದ್ ಅಬು ವತ್ಫಾ ಕೂಡ ಇಸ್ರೇಲ್‌ ದಾಳಿಗೆ ಬಲಿಯಾಗಿದ್ದ. ಇದನ್ನೂ ಓದಿ: ಹಮಾಸ್‌ ಉಗ್ರರಿಗೆ ಬೆಂಬಲ – ಭಾರತದ ಸಂಶೋಧಕ ಅಮೆರಿಕದಲ್ಲಿ ಅರೆಸ್ಟ್‌, ಶೀಘ್ರವೇ ಗಡೀಪಾರು

ಕದನ ವಿರಾಮ ಘೋಷಣೆಯ ಬಳಿಕ ಒಪ್ಪಂದದ ಪ್ರಕಾರ ಬಾಕಿಯಿರುವ 59 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್‌ ನಿರಾಕರಿಸಿದ ನಂತರ ಇಸ್ರೇಲ್‌ ದಾಳಿ ನಡೆಸಿರುವುದಾಗಿ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದರು. ಇದನ್ನೂ ಓದಿ: ಯುರೋಪ್‌ನಿಂದ ಹೆಚ್ಚಿನ ವಾಯು ರಕ್ಷಣೆ ಪಡೆಯಲು ಝೆಲೆನ್ಸ್ಕಿಗೆ ಟ್ರಂಪ್ ಸಹಾಯ: ಶ್ವೇತಭವನ ಮಾಹಿತಿ

Share This Article