ಆದಿತ್ಯ ಮಿಷನ್‌ ಉಡಾವಣೆಯಾದ ದಿನವೇ ಇಸ್ರೋ ಮುಖ್ಯಸ್ಥ ಸೋಮನಾಥ್‌ಗೆ ಕ್ಯಾನ್ಸರ್‌

By
2 Min Read

– ಮಾಧ್ಯಮದ ಜೊತೆ ಕ್ಯಾನ್ಸರ್‌ ಅನುಭವ ಹಂಚಿಕೊಂಡ ಸೋಮನಾಥ್‌

ನವದೆಹಲಿ: ಆದಿತ್ಯ-ಎಲ್1 (Aditya-L1) ಮಿಷನ್ ಉಡಾವಣೆಯಾದ ದಿನವೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮುಖ್ಯಸ್ಥ ಎಸ್ ಸೋಮನಾಥ್ (Somnath) ಅವರಿಗೆ ಕ್ಯಾನ್ಸರ್ (Cancer) ಇರುವುದು ಪತ್ತೆಯಾಗಿತ್ತು.

ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಅವರು, ಚಂದ್ರಯಾನ-3 ಮಿಷನ್ (Chandrayaan-3 mission) ಉಡಾವಣೆ ಸಮಯದಲ್ಲಿ ಕೆಲವು ಆರೋಗ್ಯ ಸಮಸ್ಯೆಗಳಿದ್ದವು. ಆದರೆ ಆ ಸಮಯದಲ್ಲಿ ನನಗೆ ಸ್ಪಷ್ಟವಾದ ಮಾಹಿತಿ ಇರಲಿಲ್ಲ. ಆದಿತ್ಯ-ಎಲ್1 ಮಿಷನ್ ಉಡಾವಣೆಯಾದ ದಿನ ಸ್ಕ್ಯಾನಿಂಗ್‌ ಮಾಡಿದಾಗ ಕ್ಯಾನ್ಸರ್‌ ಇರುವುದು ದೃಢಪಟ್ಟಿತು ಎಂದು ತಿಳಿಸಿದರು. ಇದನ್ನೂ ಓದಿ: ಕ್ಯಾನ್ಸರ್‌ ಭಯ ಬೇಡ – ಕಿಮೋಥೆರಪಿ ಎಂದರೇನು? ಅದು ಹೇಗೆ ಕೆಲಸ ಮಾಡುತ್ತೆ?

ಕ್ಯಾನ್ಸರ್‌ ಇರುವುದು ದೃಢಪಡುತ್ತಿದ್ದಂತೆ ನನಗೆ ಮಾತ್ರವಲ್ಲ ಈ ಸವಾಲಿನ ಅವಧಿಯಲ್ಲಿ ನನ್ನ ಕುಟುಂಬ ಮತ್ತು ಸಹೋದ್ಯೋಗಿಗಳಿಗೂ ಆಘಾತವಾಯಿತು ಎಂದು ಹೇಳಿದರು. ಇದನ್ನೂ ಓದಿ: ಕೇವಲ 100 ರೂ. ಕ್ಯಾನ್ಸರ್‌ಗೆ ಚಿಕಿತ್ಸೆ – ಟಾಟಾ ಸಂಸ್ಥೆಯಿಂದ ಮಾತ್ರೆ ಅಭಿವೃದ್ಧಿ

ಆದಿತ್ಯ ಎಲ್ 1, ಸೂರ್ಯನನ್ನು ಅಧ್ಯಯನ ಮಾಡಲು ತನ್ನ ಪ್ರಯಾಣವನ್ನು ಪ್ರಾರಂಭಿಸಿದಾಗ ಬಳಿಕ ಸೋಮನಾಥ್‌ ರೂಟಿನ್‌ ಸ್ಕ್ಯಾನ್‌ಗೆ ಒಳಗಾದರು. ಈ ವೇಳೆ ಕ್ಯಾನ್ಸರ್‌ ಇರುವುದು ದೃಢಪಡುತ್ತಿದ್ದಂತೆ ಹೆಚ್ಚಿನ ಚಿಕಿತ್ಸೆಗೆ ಚೆನ್ನೈಯ ಆಸ್ಪತ್ರಗೆ ದಾಖಲಾದರು. ಈ ಕ್ಯಾನ್ಸರ್‌ ಅನುವಂಶೀಯತೆಯಿಂದ ಕ್ಯಾನ್ಸರ್‌ ಬಂದಿರುವುದು ಗೊತ್ತಾಯಿತು. ಸೋಮನಾಥ್ ಅವರಿಗೆ ಶಸ್ತ್ರಚಿಕಿತ್ಸೆಯ ನಂತರ ಕಿಮೊಥೆರಪಿ ಮಾಡಲಾಯಿತು.

ಆಸ್ಪತ್ರೆಯಲ್ಲಿ ಕೇವಲ ನಾಲ್ಕು ದಿನಗಳನ್ನು ಕಳೆದ ನಂತರ ಸೋಮನಾಥ್‌ ಮತ್ತೆ ಇಸ್ರೋದಲ್ಲಿ ತಮ್ಮ ಕರ್ತವ್ಯಕ್ಕೆ ಹಾಜರಾದರು. ಐದನೇ ದಿನದಿಂದ ಯಾವುದೇ ನೋವು ಇಲ್ಲದೆ ಕೆಲಸ ಮಾಡಲಾರಂಭಿಸಿದರು.

ನಾನು ನಿಯಮಿತವಾಗಿ ತಪಾಸಣೆ ಮತ್ತು ಸ್ಕ್ಯಾನ್‌ಗೆ ಒಳಗಾಗುತ್ತೇನೆ. ಈಗ ನಾನು ಸಂಪೂರ್ಣವಾಗಿ ಗುಣಮುಖನಾಗಿದ್ದೇನೆ ಮತ್ತು ನನ್ನ ಕರ್ತವ್ಯವನ್ನು ಪುನರಾರಂಭಿಸಿದ್ದೇನೆ ಎಂದು ಸೋಮನಾಥ್ ಹೇಳಿದರು.

ಚಂದ್ರಯಾನ-3 (Chandrayaan-3) ಯೋಜನೆಯ ಯಶಸ್ಸಿನ ನಂತರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸೂರ್ಯನನ್ನು ಅಧ್ಯಯನ ಮಾಡಲು ಸೆಪ್ಟೆಂಬರ್ 3 ರಂದು ಅದಿತ್ಯ ಎಲ್‌1 ಮಿಷನ್‌ ಆರಂಭಿಸಿತ್ತು. ಆದಿತ್ಯ-ಎಲ್1 ಭೂಮಿಯಿಂದ ಸುಮಾರು 1.5 ಮಿಲಿಯನ್ ಕಿಲೋಮೀಟರ್ ದೂರದಲ್ಲಿರುವ ಸೂರ್ಯನ ಹೊರಗಿನ ಪದರಗಳು (ಕರೋನಾ) ಮತ್ತು ಎಲ್-1 (ಸೂರ್ಯ-ಭೂಮಿಯ ಲಗ್ರಾಂಜಿಯನ್ ಪಾಯಿಂಟ್) ಅಧ್ಯಯನ ಮಾಡುತ್ತಿದೆ.

 

Share This Article