Aditya L1 Launch: ಸೂರ್ಯ ಶಿಕಾರಿಗೆ ಹೊರಟ ಆದಿತ್ಯ

Public TV
2 Min Read

ಶ್ರೀಹರಿಕೋಟಾ: ಇಡೀ ವಿಶ್ವವೇ ತುದಿಗಾಲಲ್ಲಿ ನಿಂತು ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ-3 (Chandrayaan-3) ಯಶಸ್ವಿಯಾಗಿದೆ. ಈ ಬೆನ್ನಲ್ಲೆ ಈಗ ನಮ್ಮ ಇಸ್ರೋ (ISRO) ಸಂಸ್ಥೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಇದೀಗ ಶ್ರೀಹರಿಕೋಟಾದಲ್ಲಿ ಆದಿತ್ಯ ಎಲ್1 (Aditya L1) ಉಡಾವಣೆಯಾಗಿದೆ. ಈ ಮೂಲಕ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಭಾರತ ಇಂದು ಸಾಕ್ಷಿಯಾಯಿತು.

ಹೌದು. ಇಸ್ರೋ ಸಂಸ್ಥೆ ಸೂರ್ಯನನ್ನು ಅಧ್ಯಯನ ಮಾಡಲು ಆದಿತ್ಯ ಎಲ್‌-1 ಮಿಷನ್ ಅನ್ನು ಇಂದು ಸರಿಯಾಗಿ ಬೆಳಗ್ಗೆ 11.50 ಕ್ಕೆ ಶ್ರೀ ಹರಿಕೋಟಾದ ಸತೀಶ್ ಉಡಾವಣೆ ಕೇಂದ್ರದಿಂದ ಉಡಾವಣೆಯಾಗಿದೆ. ಈ ವೇಳೆ ಇಸ್ರೋ ಅಧ್ಯಕ್ಷ ಸೋಮನಾಥ್ ನೇತೃತ್ವದಲ್ಲಿ ವಿಜ್ಞಾನಿಗಳ ತಂಡ ಹಾಜರಿದ್ದರು. ಜೊತೆಗೆ ಆದಿತ್ಯ L1 ಉಡಾವಣೆಗೆ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಕೂಡ ಸಾಕ್ಷಿಯಾದರು. ಇಷ್ಟು ಮಾತ್ರವಲ್ಲದೆ ಅಪಾರ ಸಂಖ್ಯೆಯಲ್ಲಿ ಜನಸಾಗರವೇ ನೆರೆದಿತ್ತು.

ಆರಂಭದಲ್ಲಿ ಸೂರ್ಯಯಾನ ಶುರುವಾಗಿದ್ದು, ಕೇವಲ ಸೂರ್ಯನ ಅನ್ನೋ ಹೆಸರಲ್ಲಿ ಮಾತ್ರ. ಆ ಬಳಿಕ ಕೆಲವು ಅಧ್ಯಯನದ ನಂತರ ಎಲ್ 1 ಕಕ್ಷೆ ಹೋಗಲು ವಿಜ್ಞಾನಿಗಳ ತಂಡ ತೀರ್ಮಾನ ಮಾಡಿದ್ದು, ಅದರಂತೆ ಇಂದು ಯಶಸ್ವಿ ಉಡಾವಣೆ ಮಾಡಲಾಗಿದೆ. ಪಿಎಸ್‍ಎಲ್‍ವಿ ಸಿ 57 ಹೆಸರಿನ ಎಕ್ಸ್ಟ್ರಾ ಲಾರ್ಜ್ ರಾಕೆಟ್ ಬರೊಬ್ಬರಿ 1450 ಕೆ.ಜಿ ತೂಕವಿದ್ದು, ಒಟ್ಟು ಅಧ್ಯಯನಕ್ಕೆ ಬೇಕಾದ 7 ಉಪಕರಣಗಳನ್ನ ಹೊತ್ತೊಯ್ದಿದೆ. ಇದನ್ನೂ ಓದಿ: Aditya-L1: ಚಂದ್ರಯಾನ ಆಯ್ತು – ಈಗ ಸೂರ್ಯ ಸವಾರಿಯತ್ತ ಇಸ್ರೋ ಚಿತ್ತ

ಈ ಅಧ್ಯಯನದ ಪ್ರಮುಖ ಅಂಶ ಸೌರ ಚಟುವಟಿಕೆ ಮತ್ತು ಬಾಹ್ಯಕಾಶ ವಾತಾವರಣದ ಮೇಲಿನ ಪರಿಣಾಮವನ್ನ ಅಧ್ಯಯನ ಮಾಡೋದು. ಉಡಾವಣೆ ಬಳಿಕ ನಿರ್ದಿಷ್ಟ ಸ್ಥಳವಾದ ಎಲ್ 1 ಪಾಯಿಂಟ್ ತಲುಪೋಕೆ ಬರೊಬ್ಬರಿ 120 ದಿನಗಳನ್ನ ತೆಗೆದುಕೊಳ್ಳಲಿದೆ. ಕಕ್ಷೆಯನ್ನ ತಲುಪಿದ ಬಳಿಕ ರಾಕೆಟ್ ಹೊತ್ತೊಯ್ದ 8 ಉಪಕರಣಗಳ ಸ್ವಿಚ್ ಪ್ರೋಗ್ರಾಂಮಿಂಗ್ ಮೂಲಕ ತಮ್ಮ ಕಾರ್ಯವನ್ನ ಆರಂಭಿಸಲಿವೆ. ಮುಖ್ಯವಾಗಿ ಎಲ್ 1 ಕಕ್ಷೆಯಲ್ಲೇ ಇ ಎಲ್ಲಾ ಕಾರ್ಯಗಳು ಸರಾಗವಾಗಿ ಆಗೋದಕ್ಕೆ ಸಾಧ್ಯ ಇರೋದು. ಆ ಕಾರಣಕ್ಕೆ ಸದ್ಯ ಇಸ್ರೋ ಕೂಡ ಇದೇ ಪಾಯಿಂಟ್ ನ್ನ ಆಯ್ಕೆ ಮಾಡಿದೆ. ಇದನ್ನೂ ಓದಿ: ಆದಿತ್ಯ ಎಲ್ 1 ಉಡಾವಣೆಗೂ ಮುನ್ನ ತಿರುಪತಿಗೆ ಭೇಟಿ ನೀಡಿದ ಇಸ್ರೋ ಮುಖ್ಯಸ್ಥ

ಭೂಮಿಯಿಂದ 15 ಲಕ್ಷ ಕಿ.ಮೀ ದೂರದಲ್ಲಿರುವ ಈ ಕಕ್ಷೆಯಲ್ಲಿ, ಭೂಮಿ ಮತ್ತು ಸೂರ್ಯನ ಗುರುತ್ವಾಕರ್ಷಣೆಯ ಸಮನಾಗಿರುತ್ತದೆ. ಇಲ್ಲಿ ಯಾವುದೇ ಉಪಗ್ರಹ ನಿಯೋಜಿಸಿದರು ಯಾವುದೇ ಅಡ್ಡಿ ಆತಂಕ ಇರೋದಿಲ್ಲ. ಜೊತೆಗೆ ಗ್ರಹಣದಂತ ಅಡ್ಡಿ ಆತಂಕ ಇಲ್ಲದೆ ಅಧ್ಯಯನ ಸರಾಗವಾಗಿ ಸಾಗುವು ಮೂಲಕ ಹೆಚ್ಚು ಇಂಧನ ವ್ಯರ್ಥವಾಗದ ಕಾರಣ ಈ ಜಾಗ ಅಧ್ಯಯನಕ್ಕೆ ಸೂಕ್ತವಾಗಿದ್ದು, ಬರೊಬ್ಬರಿ ನಾಲ್ಕೂವರೆ ವರ್ಷಗಳ ಕಾಲ ಕಕ್ಷೆಯಲ್ಲಿ ಅಧ್ಯಯನ ನಡೆಸಲಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್