ಶ್ರೀಹರಿಕೋಟಾದಿಂದ ಸಿಂಗಾಪುರದ 7 ಉಪಗ್ರಹಗಳ ಉಡಾವಣೆ – ಯಶಸ್ವಿಯಾಗಿ ಕಕ್ಷೆ ಸೇರಿಸಿದ ISRO ರಾಕೆಟ್‌

By
1 Min Read

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ISRO) ಭಾನುವಾರ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪ್ರಾಥಮಿಕ ಉಪಗ್ರಹ ಡಿಎಸ್-ಎಸ್‌ಎಆರ್, 6 ಸಹ-ಪ್ರಯಾಣಿಕ ಉಪಗ್ರಹಗಳು ಸೇರಿದಂತೆ 7 ಉಪಗ್ರಹಗಳನ್ನು ಹೊತ್ತ ಪಿಎಸ್‌ಎಲ್‌ವಿ-ಸಿ 56 ರಾಕೆಟ್‌ನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.

ಇಂದು ಬೆಳಗ್ಗೆ 6:30ಕ್ಕೆ ಉಡಾವಣೆ ಮಾಡಲಾಯಿತು. ಎಲ್ಲ ಏಳು ಉಪಗ್ರಹಗಳನ್ನು ಪಿಎಸ್‌ಎಲ್‌ವಿ-ಸಿ 56 ರಾಕೆಟ್‌ ನಿಖರವಾಗಿ ಅವುಗಳ ಕಕ್ಷೆಗೆ ಸೇರಿಸಿದೆ. ಇದನ್ನೂ ಓದಿ: Instagram ಪ್ರಿಯಕರನನ್ನ ಭೇಟಿಯಾಗಲು ಪಾಕಿಸ್ತಾನಕ್ಕೆ ಹೊರಟಿದ್ದ ರಾಜಸ್ಥಾನದ 16ರ ಹುಡುಗಿ ಅರೆಸ್ಟ್‌

ಡಿಎಸ್‌-ಎಸ್‌ಎಆರ್‌ ಮತ್ತು ಉಳಿದ 6 ಉಪಗ್ರಹಗಳು ಸಿಂಗಾಪುರಕ್ಕೆ ಸೇರಿದ್ದವಾಗಿವೆ. ಸಿಂಗಾಪುರದ ಎಸ್‌ಟಿ ಇಂಜಿನಿಯರಿಂಗ್‌ ಸಂಸ್ಥೆಗಾಗಿ ಇಸ್ರೋದ ವಾಣಿಜ್ಯ ವಿಭಾಗವಾದ ನ್ಯೂಸ್ಪೇಸ್‌ ಇಂಡಿಯಾ ಲಿಮಿಟೆಡ್‌ ಈ ಕಾರ್ಯಾಚರಣೆ ನಡೆಸಿದೆ.

ಡಿಎಸ್‌-ಎಸ್‌ಎಆರ್‌ ಉಪಗ್ರಹವನ್ನು ಡಿಎಸ್‌ಟಿಎ (ಸಿಂಗಾಪೂರ್ ಸರ್ಕಾರವನ್ನು ಪ್ರತಿನಿಧಿಸುತ್ತದೆ) ಮತ್ತು ಎಸ್‌ಟಿ ಇಂಜಿನಿಯರಿಂಗ್ ನಡುವಿನ ಪಾಲುದಾರಿಕೆಯ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. ಇದನ್ನೂ ಓದಿ: ಮನೆಗೆ ತೆರಳಿದ್ದ ಯೋಧನ ಕಿಡ್ನ್ಯಾಪ್ – ಸೇನೆಯಿಂದ ತೀವ್ರ ಹುಡುಕಾಟ

ಡಿಎಸ್‌-ಎಸ್‌ಎಆರ್‌ ಎಲ್ಲಾ ಹವಾಗುಣದಲ್ಲಿ ಹಗಲು-ರಾತ್ರಿ ಸೇವೆ ಒದಗಿಸುತ್ತದೆ. ಪೂರ್ಣ ಧ್ರುವೀಯತೆಯಲ್ಲಿ 1m-ರೆಸಲ್ಯೂಶನ್‌ನಲ್ಲಿ ಚಿತ್ರಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್