ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಜ್ಜು – ಇದೇ ತಿಂಗಳಲ್ಲಿ ಪರೀಕ್ಷಾರ್ಥ ಉಡಾವಣೆ

Public TV
2 Min Read

ನವದೆಹಲಿ: ಸೂರ್ಯಯಾನ, ಚಂದ್ರಯಾನದ ನಂತರ ಇಸ್ರೋ (ISRO) ಮತ್ತೊಂದು ಮೈಲುಗಲ್ಲಿಗೆ ಸಜ್ಜಾಗಿದೆ. ಮಾನವ ಸಹಿತ ಗಗನಯಾನಕ್ಕೆ (Gaganyaan) ಇಸ್ರೋ ಸಜ್ಜಾಗಿದ್ದು, ಇದೇ ತಿಂಗಳಲ್ಲಿ ಪರೀಕ್ಷಾರ್ಥ ಉಡಾವಣೆ  ನಡೆಯಲಿದೆ.

ಭಾರತೀಯ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋ ಈಗಾಗಲೇ ಚಂದ್ರಯಾನ, ಸೂರ್ಯಯಾನ ಯೋಜನೆಗಳನ್ನು ಯಶಸ್ವಿಗೊಳಿಸಿ ನಭೋಮಂಡಲದಲ್ಲಿ ಇತಿಹಾಸ ನಿರ್ಮಿಸಿದೆ. ಇದೀಗ ಮತ್ತೊಂದು ಇತಿಹಾಸ ನಿರ್ಮಿಸಲು ಸಜ್ಜಾಗಿದ್ದು, ಮಾನವ ಸಹಿತ ಗಗನಯಾನದ ಯೋಜನೆ ಸಿದ್ಧ ಮಾಡಿದೆ. ಈ ಗಗನಯಾನಕ್ಕೂ ಮುನ್ನ ಪರೀಕ್ಷಾರ್ಥ ಉಡಾವಣೆಯನ್ನು (Test Launch) ಈ ತಿಂಗಳಾಂತ್ಯಕ್ಕೆ ನಡೆಸಲಾಗುವುದು ಎಂದು ಇಸ್ರೋ ಕೆಲ ಚಿತ್ರಗಳನ್ನು ಸಹ ಬಿಡುಗಡೆ ಮಾಡಿದೆ. ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ – ದೆಹಲಿಯಲ್ಲಿ ಇಬ್ಬರು ಅಭ್ಯರ್ಥಿಗಳನ್ನ ಕಣಕ್ಕಿಳಿಸಲು ಹೈಕಮಾಂಡ್ ಉತ್ಸುಕ

ಮನುಷ್ಯನನ್ನು ಬಾಹ್ಯಾಕಾಶಕ್ಕೆ ಕಳಿಸುವ ಮುನ್ನ ಕೆಲವು ಅಂತರಾಷ್ಟ್ರೀಯ ಪ್ರಕ್ರಿಯೆ ಪಾಲಿಸಬೇಕಾಗುತ್ತದೆ. ಮನುಷ್ಯನನ್ನು ಆಕಾಶಕ್ಕೆ ಕರೆದುಕೊಂಡು ಹೋಗುವ ಯೂನಿಟ್‌ಗೆ ಪ್ಯಾಡ್ ಅಬಾಟ್ ಎಂದು ಕರೆಯಲಾಗುತ್ತದೆ. ಈ ಪ್ಯಾಡ್ ಅಬಾಟ್ ಅನ್ನು ರಾಕೆಟ್ ಇರಿಸಿ ಪ್ರಯೋಗ ಮಾಡಲಾಗುತ್ತಿದೆ. ಇದನ್ನೇ ಗಗನಯಾನ ‘ಟಿವಿ-ಡಿ1’ (Test Vehicle Development) ಬಾಹ್ಯಾಕಾಶನೌಕೆ ಉಡ್ಡಯನ ಎನ್ನಲಾಗುತ್ತದೆ. ಇದನ್ನೂ ಓದಿ: 2024ಕ್ಕೆ ಮಾನವ ಬಾಹ್ಯಾಕಾಶಕ್ಕೆ – ಭಾರತದ ಗಗನಯಾನ ನೌಕೆ ಮೊದಲ ಚಿತ್ರ ರಿಲೀಸ್‌

ಈ ಪರೀಕ್ಷೆಗಳು ಯಾಕೆ?
ಸುರಕ್ಷತೆಯ ಖಾತ್ರಿ: ವಿವಿಧ ಪರೀಕ್ಷೆಗಳನ್ನು ಕೈಗೊಳ್ಳುವುದರಿಂದ, ಕ್ರ‍್ಯೂ ಎಸ್ಕೇಪ್ ಸಿಸ್ಟಮ್ ಸೇರಿದಂತೆ ಎಲ್ಲಾ ವ್ಯವಸ್ಥೆಗಳು ಉದ್ದೇಶಿತ ರೀತಿಯಲ್ಲಿ ಕಾರ್ಯಾಚರಿಸುತ್ತವೆಯೇ ಎನ್ನುವುದು ಖಾತ್ರಿಯಾಗಲಿದೆ. ಇದು ಗಗನಯಾತ್ರಿಗಳ ಸುರಕ್ಷತೆಯನ್ನು ಖಚಿತಪಡಿಸುತ್ತದೆ.

ತಂತ್ರಜ್ಞಾನದ ಖಚಿತತೆ: ಪರೀಕ್ಷೆಗಳನ್ನು ನಡೆಸುವ ಮೂಲಕ ಮಾನವ ಸಹಿತ ಗಗನಯಾತ್ರೆ ಕೈಗೊಳ್ಳಲು ಅವಶ್ಯಕವಾದ ಜೀವ ಬೆಂಬಲ ವ್ಯವಸ್ಥೆ ಹಾಗೂ ಬಾಹ್ಯಾಕಾಶ ಕ್ಯಾಪ್ಸೂಲ್ ಸೇರಿದಂತೆ ವಿವಿಧ ಆಧುನಿಕ ತಂತ್ರಜ್ಞಾನಗಳ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯ.

ಅಪಾಯಗಳನ್ನು ತಗ್ಗಿಸುವುದು: ಸಮರ್ಪಕವಾಗಿ ಪರೀಕ್ಷೆಗಳನ್ನು ಕೈಗೊಳ್ಳುವುದರಿಂದ ಸಂಭಾವ್ಯ ಸಮಸ್ಯೆಗಳು ಹಾಗೂ ಅಪಾಯಗಳನ್ನು ಗುರುತಿಸಿ, ನೈಜ ಮಾನವ ಸಹಿತ ಯೋಜನಾ ಜಾರಿಗೂ ಮುನ್ನವೇ ಅದನ್ನು ಸರಿಪಡಿಸಲು ಸಾಧ್ಯ.

ಸಿಬ್ಬಂದಿ ತರಬೇತಿ: ಸಂಪೂರ್ಣ ಪರೀಕ್ಷೆಗಳನ್ನು ನಡೆಸುವುದರಿಂದ, ಗಗನಯಾತ್ರಿಗಳು ಮತ್ತು ಭೂ ಸಿಬ್ಬಂದಿಗೆ ಪರಿಪೂರ್ಣ ತರಬೇತಿ ಲಭಿಸುತ್ತದೆ. ಎಲ್ಲಾ ಉಪಕರಣಗಳನ್ನು, ಕಾರ್ಯಾಚರಣೆಗಳನ್ನು ಸರಿಯಾಗಿ ಅರ್ಥೈಸಿಕೊಳ್ಳಲು ಸಾಧ್ಯ.

ಯೋಜನಾ ಯಶಸ್ಸು: ಎಲ್ಲಾ ವ್ಯವಸ್ಥೆಗಳು ಸರಿಯಾದ ರೀತಿಯಲ್ಲಿ ಕಾರ್ಯಾಚರಿಸುತ್ತಿವೆ ಎಂದು ಖಾತ್ರಿಪಡಿಸಿಕೊಳ್ಳುವುದರಿಂದ ಯೋಜನೆಯ ಯಶಸ್ಸು ಸಾಧಿಸುವ ಸಾಧ್ಯತೆಗಳು ಹೆಚ್ಚಾಗಿ, ಗಗನಯಾನ ಯೋಜನೆಯ ಗುರಿಗಳನ್ನು ಸಾಧಿಸಲು ನೆರವಾಗುತ್ತದೆ.

ಈ ಮಾನವಸಹಿತ ಗಗನಯಾನಕ್ಕೂ ಮುನ್ನ ಮೂರು ಟೆಸ್ಟ್‌ಗಳಿದ್ದು, ಮುಂದಿನ ವರ್ಷ ಮತ್ತೊಂದು ಪರೀಕ್ಷಾರ್ಥ ಉಡಾವಣೆ ನಡೆಸಲಾಗುವುದು. ‘ವ್ಯೋಮ ಮಿತ್ರ’ ಹೆಸರಿನ ಮಹಿಳಾ ರೊಬೋಟ್ ಅನ್ನು ಕಳುಹಿಸಲಾಗುವುದು ಎಂದು ಇಸ್ರೋ ಹೇಳಿದೆ. ನಂತರ ಗಗನಯಾನಿಯನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಪ್ಲಾನ್ ಮಾಡಿದೆ. ಇದನ್ನೂ ಓದಿ: ಭಾರತದಲ್ಲಿ ಇರಬೇಕೆಂದರೆ ಭಾರತ್ ಮಾತಾ ಕಿ ಜೈ ಎನ್ನಬೇಕು: ಕೇಂದ್ರ ಸಚಿವ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್