ಇಡಿ ತನ್ನ ಹೆಸರನ್ನು ‘ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ’ ಅಂತ ಬದಲಾಯಿಸಿಕೊಳ್ಳುವುದು ಸೂಕ್ತ: ದಿನೇಶ್ ಗುಂಡೂರಾವ್

Public TV
2 Min Read

-ಬಿಜೆಪಿಯೇತರ ನಾಯಕರ ಮೇಲೆ ದಾಳಿ ಮಾಡುವುದು ಇಡಿ ವೈಶಿಷ್ಟ್ಯ 

ಬೆಂಗಳೂರು: ಕಾಂಗ್ರೆಸ್ ನಾಯಕರನ್ನೇ ನಿರ್ದಿಷ್ಟವಾಗಿ ಗುರಿಯಾಗಿಸಿಕೊಂಡು ದಾಳಿ ನಡೆಸುವ ‘ಜಾರಿ ನಿರ್ದೇಶನಾಲಯ’ ತನ್ನ ಹೆಸರನ್ನು ‘ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ’ ಎಂದು ಬದಲಾಯಿಸಿಕೊಳ್ಳುವುದು ಸೂಕ್ತ. ಯಾಕೆಂದರೆ ಜಾರಿ ನಿರ್ದೇಶನಾಲಯದ ಪ್ರೈಮ್ ಟಾರ್ಗೆಟ್ ಕಾಂಗ್ರೆಸ್ ನಾಯಕರೇ ಹೊರತು ಬಿಜೆಪಿಯವರಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಇಡಿ ವಿರುದ್ಧ ಕಿಡಿಕಾರಿದ್ದಾರೆ.

ಬಳ್ಳಾರಿ ಕಾಂಗ್ರೆಸ್ ಶಾಸಕರು, ಸಂಸದರ ಮನೆಯಲ್ಲಿ ಇಡಿ ದಾಳಿ ನಡೆಸಿದ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಬಿಜೆಪಿ ಹಾಗೂ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಧಾರವಾಡದಲ್ಲಿ ವರುಣನ ಆರ್ಭಟ – ಬೆಣ್ಣಿ ಹಳ್ಳದಲ್ಲಿ ಸಿಲುಕಿ ಕುಟುಂಬ ಪರದಾಟ

 

ಎಕ್ಸ್‌ನಲ್ಲಿ ಏನಿದೆ?
ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಜಾರಿ ನಿರ್ದೇಶನಾಲಯ ಮತ್ತೆ ದಾಳಿ ನಡೆಸಿದೆ. ಜಾರಿ ನಿರ್ದೇಶನಾಲಯದ ವೈಶಿಷ್ಟ್ಯವೇನೆಂದರೆ ಅದು ದಾಳಿ ಮಾಡುವುದು ಬಿಜೆಪಿಯೇತರ ನಾಯಕರ ಮೇಲೆ ಮಾತ್ರ. ಇಲ್ಲಿಯವರೆಗೂ ಇಡಿ ಬಿಜೆಪಿ ನಾಯಕರ ತಂಟೆಗೆ ಹೋಗಿಲ್ಲ, ಹೋಗುವುದು ಇಲ್ಲ. ಇದೊಂದು ವಿಸ್ಮಯ. ಇದನ್ನೂ ಓದಿ: `ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ

ಇತ್ತೀಚೆಗಷ್ಟೆ ತಮಿಳುನಾಡಿನ ಟಿಎಎಸ್‌ಎಂಎಸಿ ಹಗರಣದಲ್ಲಿ ಇಡಿ ನಡೆಯನ್ನು ಸುಪ್ರೀಂ ಕೋರ್ಟ್ ಕಟು ಮಾತುಗಳಲ್ಲಿ ಟೀಕಿಸಿದೆ. ಇಡಿ ಎಲ್ಲಾ ಮಿತಿಗಳನ್ನು ಮೀರುತ್ತಿದೆ ಎಂದು ಸುಪ್ರೀಂ ಎಚ್ಚರಿಕೆ ನೀಡಿದೆ. ಆದರೂ ಇಡಿ ಅಧಿಕಾರಿಗಳು ಬಿಜೆಪಿ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ – ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

ಸಾಂವಿಧಾನಿಕ ತನಿಖಾ ಸಂಸ್ಥೆಯಾದ ಇಡಿಯನ್ನು ಮೋದಿ ಸರ್ಕಾರ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ಇಡಿ ರಾಜಕೀಯ ಪಕ್ಷವೊಂದರ ಆಜ್ಞಾಪಾಲಕರಾದರೆ ಆ ಸಂಸ್ಥೆಗೆ ಸಾಂವಿಧಾನಿಕ ಪಾವಿತ್ರ‍್ಯತೆ ಇರಲು ಹೇಗೆ ಸಾಧ್ಯ? ಆ ಸಂಸ್ಥೆಯಿಂದ ಪ್ರಜಾಪ್ರಭುತ್ವದ ಮೌಲ್ಯ ಉಳಿಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮೋದಿ 11 ವರ್ಷದಲ್ಲಿ ಸಾಧನೆಗಳನ್ನ ಕಡಿದು ಕಟ್ಟೆ ಹಾಕಿದ್ದಾರೆ – ದೇಶದ ಭದ್ರತೆ, ರೈತರ ವಿಚಾರದಲ್ಲಿ ಕೇಂದ್ರ ಫೇಲ್: ಪ್ರದೀಪ್‌ ಈಶ್ವರ್‌

Share This Article