ಹುಟ್ಟಿ ಬೆಳೆದ ಊರಿಗೆ ಬರೋದು, ಅಭಿವೃದ್ಧಿಗೊಳಿಸೋದು ನನ್ನ ಕರ್ತವ್ಯ- ಬಿಎಸ್‍ವೈ

Public TV
1 Min Read

ಮಂಡ್ಯ: ಹುಟ್ಟಿ ಬೆಳೆದ ಊರಿಗೆ ನನು ಬರುವುದು ಹಾಗೂ ಈ ಊರಿನ ಅಭಿವೃದ್ಧಿ ಕಡೆ ಯೋಚನೆ ಮಾಡುವುದು ನನ್ನ ಆದ್ಯ ಕರ್ತವ್ಯ ಎಂದು ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.

ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ ಹುಟ್ಟೂರು ಬೂಕನಕೆರೆಗೆ ಇಂದು ಆಗಮಿಸಿದ್ದಾರೆ. ಹೆಲಿಪ್ಯಾಡ್ ಮೂಲಕ ತೂಬಿನಕೆರೆಗೆ ಬಂದ ಬಿಎಸ್‍ವೈ ಮಾಧ್ಯಮಗಳೊಂದಿಗೆ ಮಾತನಾಡಿದರು. ನಿನ್ನೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದೇನೆ. ನಂತರ ಇಂದು ಮನೆ ದೇವರಿಗೆ ಪೂಜೆ ಸಲ್ಲಿಸಲು ಬಂದಿದ್ದೇನೆ. ಅಲ್ಲಿಂದ ಮೇಲುಕೋಟೆಯ ಚೆಲುವನಾರಾಯಣಸ್ವಾಮಿಗೆ ಪೂಜೆ ಸಲ್ಲಿಸಲಿದ್ದೇನೆ. ಆ ಬಳಿಕ ಬೆಂಗಳೂರಿಗೆ ತೆರಳುವುದಾಗಿ ಹೇಳಿದರು.

ಇದೇ ವೇಳೆ ನಾನು ಹುಟ್ಟಿ ಬೆಳೆದ ನಮ್ಮ ಊರಿಗೆ ಬರುವುದು ಹಾಗೂ ಅದರ ಅಭಿವೃದ್ಧಿ ಬಗ್ಗೆ ಯೋಚನೆ ಮಾಡುವುದು ನನ್ನ ಕರ್ತವ್ಯವಾಗಿದೆ ಎಂದರು. ಶುಕ್ರವಾರ ರಾತ್ರಿ ಧವಳಗಿರಿ ನಿವಾಸಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ ಅವರಿಗೆ ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದ್ದರು. ನಿವಾಸದೆದುರು ಡೊಳ್ಳು ಕುಣಿತ, ವೀರಗಾಸೆ ಕುಣಿತ ಅಬ್ಬರ ಜೋರಾಗಿತ್ತು. ಬಿಎಸ್‍ವೈ ಪುತ್ರ ಬಿ.ವೈ ರಾಘವೇಂದ್ರರನ್ನ ಅಭಿಮಾನಿಗಳು ಮೇಲಕ್ಕೆ ಎತ್ತಿ ಜೈಕಾರ ಕೂಗಿದ್ದರು.

ಹಲವು ಪ್ರಯತ್ನಗಳ ಬಳಿಕ ಕೊನೆಗೂ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರವನ್ನು ಉರುಳಿಸಿ ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದ್ದಾರೆ. ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬೆನ್ನಲ್ಲೇ ಬಿಎಸ್‍ವೈ ಅವರು ರೈತರು ಹಾಗೂ ನೇಕಾರರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ರಾಜ್ಯದಲ್ಲಿ ಮಳೆ ಇಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು, ನೇಕಾರರು, ಮೀನುಗಾರರ ಸಂಕಷ್ಟವನ್ನು ಪರಿಹರಿಸಲು ವಿಶೇಷ ಗಮನ ಹರಿಸುತ್ತೇನೆ. ಈ ಸಂಬಂಧ ಕ್ಯಾಬಿನೆಟ್ ಸಭೆಯಲ್ಲಿ ಎರಡು ನಿರ್ಧಾರಗಳನ್ನು ಕೈಗೊಂಡಿದ್ದೇವೆ. ಪ್ರಧಾನ ಮಂತ್ರಿ ಸಮ್ಮಾನ್ ಯೋಜನೆಗೆ ಈಗಾಗಲೇ ಆಯ್ಕೆ ಮಾಡಲಾದ ರೈತರಿಗೆ ರಾಜ್ಯ ಸರ್ಕಾರದಿಂದಲೂ 4 ಸಾವಿರ ರೂ. ಅನ್ನು ಎರಡು ಕಂತುಗಳಲ್ಲಿ ನೀಡಲು ನಿರ್ಧರಿಸಿದ್ದೇವೆ. ನೇಕಾರರ 100 ಕೋಟಿ ರೂ. ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುತ್ತೇವೆ ಎಂದು ತಿಳಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *