ಬೇರೆ ಸಿನಿಮಾ ರಂಗದಿಂದ ಆಫರ್ ಬಂದಿದ್ದು ನಿಜ, ನನ್ನ ಮೊದಲ ಆದ್ಯತೆ ಕಾಂತಾರ 2 : ರಿಷಬ್

By
1 Min Read

ಕಾಂತಾರ ಸಿನಿಮಾ ಹಿಟ್ ಆಗುತ್ತಿದ್ದಂತೆಯೇ ಬೇರೆ ಸಿನಿಮಾ ರಂಗದಿಂದ ರಿಷಬ್ ಶೆಟ್ಟಿಗೆ (Rishabh Shetty) ಆಫರ್ ಬಂದಿದ್ದು ನಿಜವಂತೆ. ಈ ಕುರಿತು ರಿಷಬ್ ಶೆಟ್ಟಿ ಅವರೇ ಒಪ್ಪಿಕೊಂಡಿದ್ದಾರೆ. ‘ಬೇರೆ ಭಾಷೆಯ ಸಿನಿಮಾಗಳಲ್ಲಿ ನಟಿಸುವಂತೆ ಕರೆ ಬಂದಿದ್ದವು. ಆದರೆ, ನನ್ನ ಮೊದಲ ಆದ್ಯತೆ ಕಾಂತಾರ 2 (Kantara 2) ಸಿನಿಮಾವಾಗಿತ್ತು. ಹಾಗಾಗಿ ಆಫರ್ ನಯವಾಗಿಯೇ ತಿರಸ್ಕರಿಸಿ ನನ್ನ ಕೆಲಸದಲ್ಲಿ ತೊಡಗಿಕೊಂಡೆ’ ಅಂತಾರೆ.

ಕಾಂತಾರ ಪ್ರೀಕ್ವೆಲ್ ಬಗ್ಗೆ ಹಲವು ಮಾಹಿತಿಗಳನ್ನು(Update) ಹಂಚಿಕೊಂಡಿರುವ ರಿಷಬ್,  ಸದ್ಯ ಬರವಣಿಗೆಯ ಕೆಲಸ ಮುಗಿದಿದೆ. ಡೈಲಾಗ್ ಲಾಕ್ ಆಗಿದೆ. ಎರಡು ಹಂತದಲ್ಲಿ ಬರೆವಣಿಗೆ ಕೆಲಸ ಮುಗಿಸಿರುವೆ. ನಾನು ಮತ್ತು ನನ್ನ ತಂಡ ಸ್ಕ್ರಿಪ್ಟ್ ಮಾಡುವಾಗ ಹಲವಾರು ರೀತಿಯ ಆಯಾಮಗಳನ್ನು ಹುಡುಕಿಕೊಂಡು, ಸಂಶೋಧನೆ ಮಾಡಿ ಸ್ಕ್ರಿಪ್ಟ್ ಲಾಕ್ ಮಾಡಿದ್ದೇವೆ ಎಂದರು. ಇದನ್ನೂ ಓದಿ:‘ಸಂಜೆ ಮೇಲೆ ಸುಮ್ನೆ ಹಂಗೆ’ ಅಂತಿದ್ದಾರೆ ನೀನಾಸಂ ಸತೀಶ್: ಮ್ಯಾಟ್ನಿ ಹಾಡು ವೈರಲ್

ಲೋಕೇಶನ್ ಹುಡುಕಾಟದ ಜೊತೆ ಜೊತೆಗೆ ಕಲಾವಿದರ ಆಯ್ಕೆಯ ಕೆಲಸ ಕೂಡ ನಡೆದಿದೆಯಂತೆ. ಈ ಸಿನಿಮಾದ ಪಾತ್ರಕ್ಕಾಗಿ ಮತ್ತಷ್ಟು ಉದ್ದದ ಗಡ್ಡ ಬಿಡಬೇಕು. ಮಳೆಯಲ್ಲೇ ಚಿತ್ರೀಕರಣ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದೇನೆ. ಮುಹೂರ್ತ, ಶೂಟಿಂಗ್ ಮತ್ತಿತರ ಬಗ್ಗೆ ನಿರ್ಮಾಣ ಸಂಸ್ಥೆಯೇ (Hombale Films) ಮಾಹಿತಿ ನೀಡಲಿದೆ ಎಂದಿದ್ದಾರೆ ರಿಷಬ್ ಶೆಟ್ಟಿ.

 

ಸಿನಿಮಾಗಳ ಜೊತೆಗೆ ಸಮಾಜ ಸೇವೆಗೂ ರಿಷಬ್ ಅಂಡ್ ಟೀಮ್ ರೆಡಿಯಾಗಿದೆ. ಈ ಕುರಿತು ರಿಷಬ್ ಶೆಟ್ಟಿ ಸ್ನೇಹಿತ ಪ್ರಮೋದ್ ಶೆಟ್ಟಿ ಮಾತನಾಡುತ್ತಾ,  ಹಲವಾರು ವರ್ಷಗಳಿಂದ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅದರ ಜವಾಬ್ದಾರಿಯನ್ನು ರಿಷಬ್ ವಹಿಸುತ್ತಿದ್ದರು, ಆದರೆ ಯಾರಿಗೂ ಬಹಿರಂಗ ಪಡಿಸಿರಲಿಲ್ಲ’ ಎಂದು ರಿಷಬ್ ಶೆಟ್ಟಿ ಅವರ ಸಮಾಜಮುಖಿ ಕಾರ್ಯಗಳ ಬಗ್ಗೆ ವಿವರಣೆ ನೀಡಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್