ಸಾಲ ಮಾಡಿ ಅದ್ಧೂರಿ ಮದುವೆ ಮಾಡೋದು ಅನಾರೋಗ್ಯಕಾರಿ: ಸಿದ್ದರಾಮಯ್ಯ

By
2 Min Read

– ಮಹದೇಶ್ವರ ಬೆಟ್ಟದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 37 ನವಜೋಡಿ

ಚಾಮರಾಜನಗರ: ಪ್ರಸಿದ್ಧ ಯಾತ್ರಾ ಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿಂದು (Male Mahadeshwara Hills) ನಡೆದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ 37 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಮಲೆಮಹದೇಶ್ವರನ ತಪೋ ಭೂಮಿಯಲ್ಲಿ 37 ಮಂದಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನವಜೋಡಿಗಳಿಗೆ ಮಂಗಳಸೂತ್ರ ವಿತರಿಸಿ ಶುಭ ಹಾರೈಸಿದರು‌. ಇದನ್ನೂ ಓದಿ: ಸ್ವದೇಶಿ ಆಯುಧ ನಿರ್ಮಾಣ ತಂತ್ರಜ್ಞಾನದಲ್ಲಿ ಭಾರತದ ಸಾಧನೆ; ಶತ್ರುಗಳ ನಿದ್ದೆಗೆಡಿಸಲಿದೆ ಧ್ರುವಾಸ್ತ್ರ

ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಸಾಲ ಮಾಡಿ ಅದ್ಧೂರಿ ಮದುವೆ (Marriage) ಮಾಡುವುದು ಅನಾರೋಗ್ಯಕಾರಿ. ಮೊದಲು ವ್ಯವಸಾಯಕ್ಕೆಂದು ಸಾಲ ಮಾಡಿ, ಮದುವೆ ಮಾಡುವುದನ್ನ ನಿಲ್ಲಿಸಿ ಎಂದು ಕರೆ ನೀಡಿದರು.

ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ಧೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಎಂದು ಹೇಳಿದರು. ಇದನ್ನೂ ಓದಿ: ಈಶಾನ್ಯ ರಾಜ್ಯವನ್ನು ‘ಯುದ್ಧಭೂಮಿಯಾಗಿ’ ಪರಿವರ್ತಿಸಲಾಗಿದೆ: ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಮಹದೇಶ್ವರನ ಬೆಟ್ಟ ಆಧ್ಯಾತ್ಮಿಕ ಮಹತ್ವ ಇರುವ ಪುಣ್ಯ ಸ್ಥಳ. ಶೂದ್ರರು, ಶ್ರಮಿಕರು, ಬಡವರು, ಎಲ್ಲಾ ಜಾತಿಯವರ ಆಧ್ಯಾತ್ಮಿಕ ಕೇಂದ್ರವಾಗಿದೆ. ಈ ಕಾರಣಕ್ಕೇ ನನಗೆ ಈ ಕ್ಷೇತ್ರದ ಬಗ್ಗೆ ಅತ್ಯಂತ ಶ್ರದ್ಧೆ ಮತ್ತು ಗೌರವ ಇದೆ. ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಈಗ ಪ್ರಾಧಿಕಾರದ ಆದಾಯವೂ ಹೆಚ್ಚಾಗಿದೆ. ಶಕ್ತಿ ಯೋಜನೆಯ ಪರಿಣಾಮ ಭಕ್ತರು, ಅದರಲ್ಲೂ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಹದೇಶ್ವರನ ದರ್ಶನ ಪಡೆಯುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮುಂದಿನ 5 ವರ್ಷಗಳಲ್ಲಿ ಮಲೆ ಮಹದೇಶ್ವರ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸ್ತೀವಿ ಎಂದ ಸಿಎಂ, ಇಲ್ಲಿ ಕುಡಿಯುವ ನೀರು ಮತ್ತು ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಷ್ಟ್ರಪತಿ ಭವನ ಇನ್ಮುಂದೆ ತಪೋಭವನ: ಮಲೆ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನದ ಹೆಸರು ಬದಲಾಗಿದೆ. ಇನ್ನು ಮುಂದೆ ಇದು ತಪೋಭವನ. ಮಹದೇಶ್ವರ ತಪಸ್ಸು ಮಾಡಿದ ಶಕ್ತಿ ಕೇಂದ್ರ ಇದು, ಆದ್ದರಿಂದ ಇದನ್ನು ನಾವು ತಪೋಭವನ ಎಂದು ಕರೆಯಬೇಕು. ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಯ ಸಲಹೆಯಂತೆ ತಪೋ ಭವನ ಎಂದು ಬದಲಾಯಿಸಿದ್ದೇವೆ ಎಂದು ಹೇಳಿದರು.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್