ಸಚಿವ ಪರಮೇಶ್ವರ್ ಆಪ್ತ, ಕಾಂಗ್ರೆಸ್ ನಾಯಕನ ಮನೆ ಮೇಲೆ ಬೆಳ್ಳಂಬೆಳಗ್ಗೆ ಐಟಿ ದಾಳಿ!

By
1 Min Read

ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್ (G Parameshwara) ಆಪ್ತ ಹಾಗೂ ಕಾಂಗ್ರೆಸ್ ನಾಯಕರೂ ಆಗಿರುವ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಸಿ ವೇಣುಗೋಪಾಲ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ (IT Raid) ನಡೆಸಿದೆ.

ಇಲ್ಲಿನ ಜೆ.ಪಿನಗರದಲ್ಲಿರುವ ವೇಣುಗೋಪಾಲ್ (MC Venugopal) ಅವರ ಮನೆ ಮೇಲೆ 15 ಅಧಿಕಾರಿಗಳ ತಂಡ ದಾಳಿ ನಡೆಸಿದೆ. 3 ಇನ್ನೋವಾ ಕಾರಿನಲ್ಲಿ ಬಂದಿದ್ದ ಐಟಿ ಅಧಿಕಾರಿಗಳು ಬೆಳಗ್ಗೆ 6 ಗಂಟೆಯಿಂದಲೇ ದಾಳಿ ನಡೆಸಿ, ವಿವಿಧ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: SIT ವಿಚಾರಣೆ ಎದುರಿಸಿ, ಕಾನೂನು ಹೋರಾಟ ಮಾಡಿ – ಹೈಕಮಾಂಡ್ ಖಡಕ್ ವಾರ್ನಿಂಗ್

ಬೆಳಗ್ಗೆಯಿಂದ ಸ್ವಲ್ಪವೂ ಬಿಡುವು ಮಾಡಿಕೊಳ್ಳದ ಅಧಿಕಾರಿಗಳು, ಅಲ್ಲಿಗೇ ತಿಂಡಿ ತರಿಸಿಕೊಂಡು ಕೆಲಸ ಮುಂದುವರಿಸಿದ್ದಾರೆ. ವಿವಿಧ ದಾಖಲೆ ಪತ್ರಗಳನ್ನ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಮನೆಯಲ್ಲೇ ಇದ್ದ ವೇಣುಗೋಪಾಲ್ ಅಧಿಕಾರಿಗಳಿಗೆ ಸಹಕರಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ – ಹಾಸ್ಯನಟ ಶ್ಯಾಮ್ ರಂಗೀಲಾ 

Share This Article