ಬೆಂಗಳೂರು, ಮೈಸೂರು ಸೇರಿ ರಾಜ್ಯದ 30ಕ್ಕೂ ಹೆಚ್ಚು ಕಡೆ ಐಟಿ ದಾಳಿ

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.

ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ 30ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದನ್ನೂ ಓದಿ: Delhi Election 2025 | ಕೊರೆವ ಚಳಿ ಲೆಕ್ಕಿಸದೇ ಬೆಳ್ಳಂಬೆಳಗ್ಗೆ ಸಂಸದ ರಾಹುಲ್‌ ಗಾಂಧಿ ಮತದಾನ

ಮೈಸೂರಿನಲ್ಲೇ ಎಂ ಪ್ರೋ ಪ್ಯಾಲೇಸ್, ಹೋಟೆಲ್, ಕಲ್ಯಾಣ ಮಂಟಪದ ಸೇರಿದಂತೆ 10ಕ್ಕೂ ಹೆಚ್ಚಿ ಕಡೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ. ಮೂರು ಕಾರುಗಳಲ್ಲಿ ಬಂದ ಐಟಿ ಅಧಿಕಾರಿಗಳ ತಂಡ ಸ್ಥಳಕ್ಕೆ ಬರುತ್ತಿದ್ದಂತೆ ಸೆಕ್ಯುರಿಟಿ ಗಾರ್ಡ್ ಫೋನ್‌ ಕಿತ್ತುಕೊಂಡಿದ್ದಾರೆ. ಮೈಸೂರಿನ ದೇವೇಗೌಡ ವೃತ್ತದ ಬಳಿ ಇರುವ ಎಂ ಪ್ರೋ ಪ್ಯಾಲೇಸ್‌ ಸೇರಿದಂತೆ ವಿವಿಧೆಡೆ 3 ಗಂಟೆಯಿಂದ ಶೋಧ ನಡೆಸುತ್ತಿದ್ದಾರೆ.

ಕಂಟ್ರಾಕ್ಟರ್ ಮನೆ ಮೇಲೂ ಐಟಿ ದಾಳಿ:
ಇನ್ನೂ ಮೈಸೂರಿನಲ್ಲಿ ರಾಮಕೃಷ್ಣನಗರದಲ್ಲಿರುವ ಗುತ್ತಿಗೆದಾರ ರಾಮಕೃಷ್ಣೇಗೌಡ ಅವರ ಮನೆ ಮೇಲೂ ಐಟಿ ದಾಳಿ ನಡೆದಿದೆ. ರಾಮಕೃಷ್ಣೇಗೌಡ ಇಟ್ಟಿಗೆ ಫ್ಯಾಕ್ಟರ್ ಸೇರಿದಂತೆ ಇನ್ನಿತರ ವ್ಯವಹಾರ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

Share This Article