ಬೆಂಗಳೂರು: ಬಿಜೆಪಿ ಮುಖಂಡ ವಿಕಾಸ್ ಪುತ್ತೂರು (Vikas Putturu) ಅವರಿಗೆ ದ್ವೇಷ ಭಾಷಣ ಮಸೂದೆಯ ಅಡಿ ಪೊಲೀಸರು ನೋಟಿಸ್ ನೀಡಿದ್ದು ತಪ್ಪು ಎಂದು ಗೃಹ ಸಚಿವ ಪರಮೇಶ್ವರ್ (Parameshwar) ಹೇಳಿದ್ದಾರೆ.
ಮಾಧ್ಯಮಗಳು ದ್ವೇಷ ಭಾಷಣ ಮಸೂದೆಯ ಅಡಿಯಲ್ಲಿ ಪೊಲೀಸರು ನೋಟಿಸ್ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರವಾಗಿ ಮಾಹಿತಿ ತರಿಸಿಕೊಳ್ಳುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಕಾಯ್ದೆಯಾಗದೇ ಇದ್ರೂ ದ್ವೇಷ ಭಾಷಣ ಮಸೂದೆ ಹೆಸರಿನಲ್ಲಿ ಪೊಲೀಸರಿಂದ ನೋಟಿಸ್ – ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

