ಬೆಂಗಳೂರು: ಕಾಂಗ್ರೆಸ್‌ನ (Congress) ಎಲ್ಲಾ ಶಾಸಕರಿಗೆ ಮಂತ್ರಿಯಾಗುವ ಅರ್ಹತೆಗಳು ಇವೆ. ಆದರೆ ಎಲ್ಲರನ್ನೂ ಮಂತ್ರಿ ಮಾಡೋಕೆ ಆಗುವುದಿಲ್ಲ ಎಂದು ಮಾಜಿ ಸಚಿವ ಆರ್.ವಿ ದೇಶಪಾಂಡೆ (RV Deshpande) ಪರೋಕ್ಷವಾಗಿ ಸಚಿವ ಸ್ಥಾನ ಸಿಗದ್ದಕ್ಕೆ ಅಸಮಾಧಾನ ಹೊರಹಾಕಿದ್ದಾರೆ.ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅರ್ಧನಾರೇಶ್ವರರನ್ನ ಹುಡುಕಿಕೊಳ್ಳಲಿ: ಹರಿಪ್ರಸಾದ್
ಶಾಸಕರ ಜೊತೆ ಸುರ್ಜೇವಾಲಾ ಸಭೆ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನು ಇವತ್ತು ಸುರ್ಜೇವಾಲಾ ಅವರನ್ನು ಭೇಟಿ ಮಾಡುತ್ತೇನೆ. ಏನು ಚರ್ಚೆ ಮಾಡಲ್ಲ, ಯಾವುದೇ ವಿಚಾರ ಚರ್ಚೆ ಮಾಡಲ್ಲ. ಅವರು ಆರಾಮಾಗಿದ್ದಾರೆ, ನಾವು ಆರಾಮವಾಗಿದ್ದೇವೆ ಎಂದು ಹೇಳುತ್ತೇನೆ ಎಂದರು.
ನೀವು ಸಚಿವ ಸ್ಥಾನ ಕೇಳ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲರೂ ಸಚಿವರು ಆಗಲು ಸಾಧ್ಯನಾ? 224 ಸದಸ್ಯರಿದ್ದಾರೆ. 30 ರಿಂದ 35 ಜನರು ಸಚಿವರಾಗಬಹುದು. ಮಂತ್ರಿ ಆಗಬೇಕು ಎಂಬ ಆಸೆ ಇದ್ರೆ ತಪ್ಪಿಲ್ಲ. ಅರ್ಹತೆ ಎಲ್ಲರಿಗೂ ಇದೆ, ಆದರೆ ಎಲ್ಲರೂ ಆಗಲು ಸಾಧ್ಯವಿಲ್ಲ. ಸುರ್ಜೇವಾಲಾ ನನ್ನನ್ನು ಕರೆದಿದ್ದಾರೆ. ಏನು ಹೇಳುತ್ತಾರೆ ಗೊತ್ತಿಲ್ಲ. ಏನಾದರೂ ಇದ್ದರೆ ಕಿವಿಯಲ್ಲಿ ಹೇಳಬಹುದು ಅದು ಗೊತ್ತಿಲ್ಲ ಎಂದು ಹಾಸ್ಯ ಮಾಡಿದರು.ಇದನ್ನೂ ಓದಿ: ರಾಜಮೌಳಿ ಸಿನಿಮಾ ರಿಜೆಕ್ಟ್ ಮಾಡಿದ ನಟ ವಿಕ್ರಂ – ಕಾರಣ ಏನ್ ಗೊತ್ತಾ?