ಕೈಗಾರಿಕೆಗಳ ಸ್ಥಾಪನೆಗೆ ಅವಕಾಶ ನೀಡಿ: ಶೆಟ್ಟರ್ ಮನವಿ

Public TV
1 Min Read

ಹುಬ್ಬಳ್ಳಿ: ನೂತನ ಕೈಗಾರಿಕೆಗಳ ಸ್ಥಾಪನೆಗೆ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಯ (KIADB) ಅಧಿಕಾರಿಗಳು ಅವಕಾಶ ಮಾಡಿಕೊಡಬೇಕು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಮನವಿ ಮಾಡಿದ್ದಾರೆ.

ತಮ್ಮ ಗೃಹ ಕಚೇರಿಯಲ್ಲಿ ಕರ್ನಾಟಕ ಕೈಗಾರಿಕ ಪ್ರದೇಶಗಳ ಅಭಿವೃದ್ಧಿ ಮಂಡಳಿ ಮತ್ತು ಕೈಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು. ಈ ವೇಳೆ ಅವರು, ಎಫ್.ಎಂ.ಜಿ.ಸಿ. ಕ್ಲಸ್ಟರ್ ಹಾಗೂ ಇತರ ಕೈಗಾರಿಕೆಗಳನ್ನು ಸ್ಥಾಪಿಸಲು ಅಗತ್ಯವಿರುವ ಖಾಲಿ ಪ್ರದೇಶಗಳನ್ನು ಕೈಗಾರಿಕೋದ್ಯಮಿಗಳಿಗೆ ಒದಗಿಸಬೇಕು. ಈ ಮೂಲಕ ಕೈಗಾರಿಕೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ನೀವೇನಾದರೂ ಆಪರೇಷನ್‌ ಅಂತ ಕೈ ಹಾಕಿದ್ರೆ, ಮುಟ್ಟಿ ನೋಡ್ಕೋಬೇಕು ಹಾಗೆ ಮಾಡ್ತೀವಿ: ಸಿ.ಟಿ. ರವಿ

ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಇರುವ ಸವಲತ್ತು ಮತ್ತು ಅನುಕೂಲಗಳನ್ನು ಅಧಿಕಾರಿಗಳು ಮಾಡಿಕೊಡಬೇಕು. ಜಿಲ್ಲೆಯಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡಬೇಕು. ಇದರಿಂದ ನಗರ ಅಭಿವೃದ್ಧಿ ಹೊಂದಲಿದೆ ಎಂದು ಅವರು ತಿಳಿಸಿದ್ದಾರೆ.

ಸಭೆಯಲ್ಲಿ ಕೆಐಎಡಿಬಿ ಅಭಿವೃದ್ಧಿ ಅಧಿಕಾರಿಗಳಾದ ಬಿ.ಟಿ ಪಾಟೀಲ್, ನವೀನ್ ಹುಲ್ಲೂರ್, ಉಪ ಅಭಿವೃದ್ಧಿ ಅಧಿಕಾರಿ ಗೋವಿಂದ್ ಭಜಂತ್ರಿ, ಇಂಜಿನಿಯರ್ ಎಸ್.ಎಂ ಕಣಬೂರ ಹಾಗೂ ಇತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಅಧಿಕಾರ, ಹಣದ ಆಸೆಗೆ ಓಡೋಗಿದ್ದ ಹೆಬ್ಬಾರ್ ಈಗ್ಯಾಕೆ ಕಾಂಗ್ರೆಸ್‍ಗೆ ಬರ್ತಾರೆ ಹೇಳಲಿ: ಕೈ ಶಾಸಕ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್