ಪಾದಯಾತ್ರೆ ಮೂಲಕ ಕಾಂಗ್ರೆಸ್ ಪಕ್ಷದಿಂದ ಭಂಡ ರಾಜಕಾರಣ: ಜಗದೀಶ್ ಶೆಟ್ಟರ್

Public TV
2 Min Read

ಧಾರವಾಡ: ಮೇಕೆದಾಟು ಪಾದಯಾತ್ರೆ ಮೂಲಕ ಕಾಂಗ್ರೆಸ್ ಪಕ್ಷದಿಂದ ಭಂಡ ರಾಜಕಾರಣ ಮಾಡುತ್ತಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಕಾಂಗ್ರೆಸ್ ಮೇಕೆದಾಟು ಯೋಜನೆ ಪಾದಯಾತ್ರೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾದಯಾತ್ರೆ ಮೂಲಕ ಕಾಂಗ್ರೆಸ್ ಭಂಡ ರಾಜಕಾರಣ ಮಾಡುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿ ಇಟ್ಟುಕೊಂಡು ಈ ಪಾದಯಾತ್ರೆ ಮಾಡುತ್ತಿದ್ದಾರೆ. ಅಂತಾರಾಜ್ಯ ಜಲ ವಿವಾದಗಳನ್ನು ಸೂಕ್ಷ್ಮವಾಗಿ ಬಗೆಹರಿಸಬೇಕಾಗುತ್ತದೆ. ಹೋರಾಟದ ಮೂಲಕ ಇದನ್ನು ಪರಿಹರಿಸೋಕೆ ಆಗಲ್ಲ. ವಿಧಾನಸಭೆ ಚುನಾವಣೆ ಇನ್ನೂ ಒಂದೂವರೆ ವರ್ಷವಿದ್ದು, ಅದನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಈಗಿನಿಂದಲೇ ರಾಜಕಾರಣ ಆರಂಭಿಸಿದೆ ಎಂದರು.

ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಯನ್ನು ಚುನಾವಣಾ ಅಸ್ತ್ರವಾಗಿ ಬಳಸುತ್ತಿದೆ. ಪಾದಯಾತ್ರೆ ಮಾಡುವ ಮೂಲಕ ಪರಿಸ್ಥಿತಿಯನ್ನು ಮತ್ತಷ್ಟು ಜಟಿಲಗೊಳ್ಳುವಂತೆ ಕಾಂಗ್ರೆಸ್ ಮಾಡುತ್ತಿದೆ. ನೀರಾವರಿ ಇರಲಿ ಯಾವುದೇ ಯೋಜನೆ ಇರಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅದರ ಬಗ್ಗೆ ಚಕಾರ ಎತ್ತಲ್ಲ. ಬಿಜೆಪಿ ಅಧಿಕಾರಕ್ಕೆ ಬಂದಾಗಲೇ ಇದಕ್ಕೊಂದು ಪರಿಹಾರ ಕೊಡುವ ಪ್ರಯತ್ನ ನಡೆದಿದೆ. ಇಷ್ಟು ವರ್ಷ ಸುಮ್ಮನೆ ಕುಳಿತು ಈಗ ಏಕೆ? ಕಾಂಗ್ರೆಸ್ ನವರು ಹೋರಾಟ ಮಾಡುತ್ತಿದ್ದಾರೆ. ವಿಪಕ್ಷ ನಾಯಕರಾದ ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗಲೇ ಮೇಕೆದಾಟು ಯೋಜನೆ ಆರಂಭಿಸ ಬಹುದಿತ್ತಲ್ಲವೇ. ಅಧಿವೇಶನದ ಸಂದರ್ಭದಲ್ಲಿ ಮೇಕೆದಾಟು ಯೋಜನೆ ಬಗ್ಗೆ ಕಾಂಗ್ರೆಸ್‍ನವರು ಗಂಭೀರ ಚರ್ಚೆ ಮಾಡುವ ಪ್ರಯತ್ನ ಮಾಡಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ, ಕಾಂಗ್ರೆಸ್, ಹೆಣ್ಣು-ಗಂಡೆಂಬ ಭೇದ ಕೊರೊನಾಗೆ ಇಲ್ಲ: ಆನಂದ್ ಸಿಂಗ್

ಚುನಾವಣೆ ಮತಬ್ಯಾಂಕ್ ರಾಜಕಾರಣಕ್ಕಾಗಿ ಈ ಪಾದಯಾತ್ರೆ ಮಾಡುತ್ತಿದ್ದಾರೆ. ಕೋವಿಡ್ ನಿಯಮಗಳಿದ್ದರೂ ಅದನ್ನು ಉಲ್ಲಂಘಿಸಿ ಹೋಗುತ್ತಿದ್ದಾರೆ ಎಂದರೆ ನಾಚಿಕೆಗೇಡಿನ ವಿಷಯ ಇದು, ಇಡೀ ದೇಶದಲ್ಲಿ ಕೋವಿಡ್ ಮೂರನೇ ಅಲೆ ಏಳುತ್ತಿದೆ. ಕಫ್ರ್ಯೂ ವಿಧಿಸಿದ ಸಂದರ್ಭದಲ್ಲಿಯೂ ಇವರು ಪಾದಯಾತ್ರೆ ಮಾಡುತ್ತಿದ್ದಾರೆ. ಇವರಿಗೆ ರಾಜಕೀಯ ಹಿತಾಸಕ್ತಿಯೇ ಮುಖ್ಯ ಹೊರತು ರಾಜ್ಯದ ಹಿತಾಸಕ್ತಿ ಅಲ್ಲ ಎಂದು ಸಿಡಿದರು.ಇದನ್ನೂ ಓದಿ: ವಾಮಾಚಾರ ನಡೆಸಿ ಮನೆಯ ಬೆಡ್ ರೂಂನ ಮಣ್ಣಿನಡಿಯಲ್ಲಿ ನಿಧಿಗಾಗಿ ಶೋಧ – ಇಬ್ಬರ ಬಂಧ

ಕೈ ಪಕ್ಷವು ಇಲ್ಲಿಯವರೆಗೂ ಬರೀ ರಾಜಕಾರಣ, ದೇಶ ಮತ್ತು ರಾಜ್ಯವನ್ನು ಲೂಟಿ ಮಾಡಿಕೊಂಡು ಬಂದಿದ್ದಾರೆ. ಮೇಕೆದಾಟು ಪಾದಯಾತ್ರೆ ಕೇವಲ ರಾಜಕೀಯ ಪ್ರಹಸನ ಕಾನೂನು ಉಲ್ಲಂಘಿಸಿದರೆ ನಮಗೆ ಹೆಚ್ಚು ಮತ ಸಿಗುತ್ತೆ ಅಂತ ಕಾಂಗ್ರೆಸ್‍ನವರು ಅಂದುಕೊಂಡಿದ್ದಾರೆ. ಆದರೆ ಇದಕ್ಕೆ ಜನತೆಯೇ ತಕ್ಕ ಪಾಠ ಕಲಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *