ಮಕ್ಕಳಿಗೆ ಇಷ್ಟವಾಗುವ ಬೆಲ್ಲದ ದೋಸೆ ಮಾಡುವುದು ಹೇಗೆ ಗೊತ್ತಾ?

Public TV
1 Min Read

ನಾವು ಬೆಳಗಿನ ತಿಂಡಿ  ಏನು ಅಂತ ಯೋಚನೆ ಮಾಡುವುದು ಸಹಜ. ಆದರೆ ಅದಕ್ಕೆ ಉತ್ತರ ನಮ್ಮ ಪಾಕವಿಧಾನದಲ್ಲಿದೆ. ಉದಾಹರಣೆಗೆ ದೋಸೆಯಲ್ಲಿ ಎಷ್ಟೆಲ್ಲಾ ವಿಧದ ದೋಸೆ ಮಾಡಬಹುದು ಎಂಬುದು ಏಣಿಸಲು ಸಾಧ್ಯವಿಲ್ಲ. ಹೌದು, ನೀವು ಹೆಚ್ಚು ಮಸಾಲೆ ದೋಸೆ, ಸೆಟ್​ ದೋಸೆ ಈರುಳ್ಳಿ ದೋಸೆ ಮಾಡುತ್ತೇವೆ. ದೋಸೆಗಳನ್ನು ಮಾಡಲು ಹಿಂದಿನ ದಿನ ಅಕ್ಕಿಯನ್ನು ನೆನಸಿ ಮಾಡಬೇಕಾಗುತ್ತದೆ. ಆದರೆ ಈ ದೋಸೆ ಮಾಡಲು ಕೇವಲ 10 ನಿಮಿಷ ಸಾಕು. ಫಟ್​ ಅಂತ ತಯಾರಾಗುವ ಈ ಸರಳ ದೋಸೆ ಮಾಡುವ ವಿಧಾನ ಇಲ್ಲಿದೆ.

ಬೇಕಾಗುವ ಸಾಮಗ್ರಿಗಳು:
* ಅಕ್ಕಿ ಹಿಟ್ಟು- 1 ಕಪ್
* ಗೋಧಿ ಹಿಟ್ಟು- 2 ಕಪ್
* ಬೆಲ್ಲದ ಪುಡಿ- ಕಪ್
* ತೆಂಗಿನ ತುರಿ – ಅರ್ಧ ಕಪ್
* ಏಲಕ್ಕಿ ಪುಡಿ- ಸ್ವಲ್ಪ
* ರುಚಿಗೆ ತಕ್ಕಷ್ಟು ಉಪ್ಪು
* ಅಡುಗೆ ಸೋಡ- ಸ್ವಲ್ಪ
* ತುಪ್ಪ- ಅರ್ಧ ಕಪ್

ಮಾಡುವ ವಿಧಾನ:
* ಮೊದಲಿಗೆ ಪಾತ್ರೆಯೊಂದಕ್ಕೆ ಬೆಲ್ಲವನ್ನು ಹಾಕಿ, ಕಾಯಿಸಿ ಶೋಧಿಸಿಟ್ಟುಕೊಂಡಿರಬೇಕು. ಇದನ್ನೂ ಓದಿ: ಫಟ್​ ಅಂತ ಮಾಡಬಹುದು ಮೈದಾ ದೋಸೆ

* ಪಾತ್ರೆಗೆ ಗೋಧಿ ಹಿಟ್ಟು, ಅಕ್ಕಿ ಹಿಟ್ಟು, ಬೆಲ್ಲದ ನೀರು, ಏಲಕ್ಕಿ ಪುಡಿ, ಚಿಟಿಕೆಯಷ್ಟು ಉಪ್ಪು, ಅಡುಗೆ ಸೋಡ ಎಲ್ಲವನ್ನು ಹಾಕಿ ಮಿಶ್ರಣ ಮಾಡಿಕೊಳ್ಳಿ.

* ನಂತರ ದೋಸೆ ಮಿಶ್ರಣಕ್ಕೆ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿಕೊಳ್ಳಿ. ಇದನ್ನೂ ಓದಿ:  ನೀವೂ ಮಾಡಿ ಗರಿಗರಿಯಾದ ಚಿಕನ್ ಪಕೋಡಾ

* ತವಾವನ್ನು ಬಿಸಿ ಮಾಡಿ ದೋಸೆ ಆಕಾರದಲ್ಲಿ ಮಿಶ್ರಣವನ್ನು ಹಾಕಿ ಬೇಯಿಸಿದರೆ ರುಚಿಯಾದ ದೋಸೆ ಸವಿಯಲು ಸಿದ್ಧವಾಗುತ್ತದೆ. ಇದನ್ನೂ ಓದಿ:  ನಾಲಿಗೆ ಚಪ್ಪರಿಸಿ ತಿನ್ನುವ ಶುಂಠಿ ಉಪ್ಪಿನಕಾಯಿ ಮಾಡುವ ವಿಧಾನ

Share This Article
Leave a Comment

Leave a Reply

Your email address will not be published. Required fields are marked *