ಮಂಗಳೂರು: ಆರ್‌ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ರೂಪೇಶ್ ಶೆಟ್ಟಿ ನಿರ್ದೇಶನದ ಜೈ ಸಿನಿಮಾ ಭಾರತ್ ಸಿನಿಮಾಸ್‌ನಲ್ಲಿ ಶುಕ್ರವಾರ ಬಿಡುಗಡೆಗೊಂಡಿತು.
ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಪ್ರದರ್ಶನಕ್ಕೆ ಚಾಲನೆ ನೀಡಿದರು. ಬಳಿಕ ಮಾತಾಡಿದ ಹಿರಿಯ ರಂಗಕರ್ಮಿ ಡಾ.ದೇವದಾಸ್ ಕಾಪಿಕಾಡ್, ರೂಪೇಶ್ ಶೆಟ್ಟಿ ನಿರ್ದೇಶನದಲ್ಲಿ ಜೈ ಸಿನಿಮಾ ಬಹಳ ಚೆನ್ನಾಗಿ ಮೂಡಿಬಂದಿದೆ. ಪ್ರತಿಯೊಂದು ತುಳು ಸಿನಿಮಾಕ್ಕೂ ಬೆಂಬಲ ನೀಡಬೇಕಾದ್ದು ನಮ್ಮೆಲ್ಲರ ಕರ್ತವ್ಯ. ತುಳುವರು ಸಿನಿಮಾ ನೋಡುವ ಮೂಲಕ ಚಿತ್ರತಂಡವನ್ನು ಪ್ರೋತ್ಸಾಹಿಸಬೇಕು ಎಂದರು.
ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಮಾತಾಡಿ, ತುಳು ಸಿನಿಮಾಗಳಿಗೆ ಇಂದು ನಿರ್ದಿಷ್ಟ ಥಿಯೇಟರ್‌ಗಳಿವೆ. ಹೀಗಾಗಿ ಸಿನಿಮಾಕ್ಕೆ ಬಂಡವಾಳ ಹಾಕಿದ ನಿರ್ಮಾಪಕರು ಗೆಲ್ಲಬೇಕಾದರೆ ತುಳುವರು ಥಿಯೇಟರ್‌ಗಳಿಗೆ ಹೋಗಿ ಸಿನಿಮಾ ನೋಡಬೇಕು. ಜೈ ಸಿನಿಮಾ ಜನರ ನಿರೀಕ್ಷೆ ಹೆಚ್ಚಿಸಿದ್ದು ಸಿನಿಮಾ ಗೆಲ್ಲಲಿ ಎಂದು ಶುಭ ಹಾರೈಸಿದರು.
ವೇದಿಕೆಯಲ್ಲಿ ನಟ ನಿರ್ದೇಶಕ ರೂಪೇಶ್ ಶೆಟ್ಟಿ, ಬಿಗ್ ಸಿನೆಮಾಸ್‌ನ ಬಾಲಕೃಷ್ಣ ಶೆಟ್ಟಿ, ಭೋಜರಾಜ್ ವಾಮಂಜೂರ್, ಬಾಳ ಜಗನ್ನಾಥ ಶೆಟ್ಟಿ, ನಾಯಕಿ ಅದ್ವಿತಿ ಶೆಟ್ಟಿ, ರಾಜ್ ದೀಪಕ್ ಶೆಟ್ಟಿ, ತಮ್ಮ ಲಕ್ಷ್ಮಣ, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಪ್ರಸನ್ನ ಶೆಟ್ಟಿ ಬೈಲೂರು, ಉಮೇಶ್ ಮಿಜಾರ್, ಸಚಿನ್ ಉಪ್ಪಿನಂಗಡಿ, ನವೀನ್ ಶೆಟ್ಟಿ, ಪ್ರೇಮ್ ಶೆಟ್ಟಿ, ಶೋಭಾ ಶೆಟ್ಟಿ, ಸುಜಾತ ಶಕ್ತಿನಗರ, ಜಯಶೀಲ ಮತ್ತಿತರರು ಉಪಸ್ಥಿತರಿದ್ದರು. ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರೂಪಿಸಿದರು.
ʼಜೈʼ ಸಿನಿಮಾ ಕುರಿತು
ರೂಪೇಶ್ ಶೆಟ್ಟಿ ಸಿನಿಮಾದ ನಿರ್ದೇಶಕರಾಗಿದ್ದು, ಕತೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ಚಿತ್ರಕತೆ ರೂಪೇಶ್ ಶೆಟ್ಟಿ ಮತ್ತು ವೇಣು ಹಸ್ರಳ್ಳಿ. ಕ್ಯಾಮರಾ ವಿನುತ್ ಕೆ, ಸಂಗೀತ ಲೊಯ್ ವೆಲೆಂಟಿನ್ ಸಲ್ದಾನ, ಸಂಕಲನ ರಾಹುಲ್ ವಸಿಷ್ಠ, ನೃತ್ಯ ಹಾಗೂ ಎಕ್ಸಿಕ್ಯೂಟಿವ್ ಪ್ರೊಡ್ಯುಸರ್ ನವೀನ್ ಶೆಟ್ಟಿ ಆರ್ಯನ್ಸ್.
ಜೈ ಸಿನಿಮಾದಲ್ಲಿ ಸುನೀಲ್ ಶೆಟ್ಟಿ, ಡಾ ದೇವದಾಸ್ ಕಾಪಿಕಾಡ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ಮನೋಜ್ ಚೇತನ್ ಡಿ ಸೋಜ ಇನ್ನಿತರರು ಅಭಿನಯಿಸಿದ್ದಾರೆ. ನಾಯಕಿಯಾಗಿ ಅದ್ವಿತಿ ಶೆಟ್ಟಿ ಬಣ್ಣಹಚ್ಚಿದ್ದಾರೆ.
ಜೈ ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಪಿವಿಆರ್, ಭಾರತ್ ಸಿನಿಮಾಸ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಭಾರತ್ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್, ಕುಂದಾಪುರದಲ್ಲಿ ಭಾರತ್ ಸಿನಿಮಾಸ್, ದೇರಳಕಟ್ಟೆಯಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಪುತ್ತೂರಿನಲ್ಲಿ ಭಾರತ್ ಸಿನಿಮಾ್ ನಲ್ಲಿ ಸ ತೆರೆ ಕಂಡಿದೆ. ಸಂಪೂರ್ಣ ಮನರಂಜನೆಯ ಚಿತ್ರವಾಗಿದ್ದು, ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.
