ಶಿವಣ್ಣನ ಮನೆಯಲ್ಲಿ ‘ಜೈಲರ್’ ಗೆಲುವಿನ ಸಂಭ್ರಮಾಚರಣೆ

Public TV
2 Min Read

ದೇ ಮೊದಲ ಬಾರಿಗೆ ಶಿವರಾಜ್ ಕುಮಾರ್ ತಮಿಳಿನ ‘ಜೈಲರ್’ ಸಿನಿಮಾದಲ್ಲಿ ನಟಿಸಿದ್ದರು. ರಜನಿಕಾಂತ್ ಜೊತೆ ತೆರೆ ಹಂಚಿಕೊಂಡು ಕುತೂಹಲ ಮೂಡಿಸಿದ್ದರು. ತೆರೆಯ ಮೇಲೆ ಶಿವಣ್ಣ ಕಡಿಮೆ ಅವಧಿಯಲ್ಲಿ ಕಂಡರೂ, ಪಾತ್ರಕ್ಕೆ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಕನ್ನಡದ ಅಭಿಮಾನಿಗಳು ಮಾತ್ರವಲ್ಲ, ತಮಿಳಿನ ಅಭಿಮಾನಿಗಳೂ ಕೂಡ ಶಿವಣ್ಣನ ಪಾತ್ರಕ್ಕೆ ಫಿದಾ ಆಗಿದ್ದಾರೆ. ಅದರ ಜೊತೆಗೆ ಮೊದಲ ತಮಿಳು ಸಿನಿಮಾದಲ್ಲೇ ಶಿವಣ್ಣ ಗೆಲುವಿನ ನಗೆ ಬೀರಿದ್ದಾರೆ.

ಈ ಸಂಭ್ರಮವನ್ನು ಹಂಚಿಕೊಳ್ಳುವುದಕ್ಕಾಗಿ ಕರ್ನಾಟಕದ ವಿತರಕರಾದ ಮೋಹನ್ ಮತ್ತು ಜಯಣ್ಣ ಇಂದು ಶಿವರಾಜ್ ಕುಮಾರ್ ಅವರ ಮನೆಗೆ ತೆರಳಿ, ನೆನಪಿನ ಕಾಣಿಕೆಯನ್ನು ನೀಡಿ ಶುಭಾಶಯ ತಿಳಿಸಿದ್ದಾರೆ. ಎನ್.ಎಸ್. ರಾಜಕುಮಾರ್ ಕೂಡ ಈ ಸಂಭ್ರಮಕ್ಕೆ ಸಾಕ್ಷಿಯಾಗಿದ್ದಾರೆ. ಕರ್ನಾಟಕದಲ್ಲೂ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಇದನ್ನೂ ಓದಿ:ಗ್ಲ್ಯಾಮರ್ ಡಾಲ್‌ನಂತೆ ಕಂಗೊಳಿಸಿದ ಮೇಘಾ ಶೆಟ್ಟಿ

ನೂರು ಕೋಟಿ ಕ್ಲಬ್ ಸೇರಿದ ಜೈಲರ್

ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಮತ್ತು ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಜೈಲರ್ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಿನಿಮಾ ರಿಲೀಸ್ ಆಗಿ ಕೇವಲ ಎರಡೇ ದಿನಕ್ಕೆ ಜೈಲರ್ ನೂರು ಕೋಟಿ ರೂಪಾಯಿ ಕ್ಲಬ್ ಸೇರಿದೆ. ಈ ಮೂಲಕ ಮತ್ತೆ ಸೂಪರ್ ಸ್ಟಾರ್ ಅಬ್ಬರಿಸಿದ್ದಾರೆ. ಬರೀ ಸೋಲುಗಳ ಸುಳಿಯಲ್ಲೇ ತಿರುಗುತ್ತಿದ್ದ ರಜನಿಗೆ ಜೈಲರ್ ಕೈ ಹಿಡಿದಿದೆ.

ಜೈಲರ್ ಸಿನಿಮಾ ವಿಶ್ವದಾದ್ಯಂತ ಬಿಡುಗಡೆ ಆಗಿದ್ದು, ಏಳು ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಬಹುತೇಕ ಎಲ್ಲ ರಾಷ್ಟ್ರಗಳಲ್ಲೂ ಗ್ರ್ಯಾಂಡ್ ಓಪನಿಂಗ್ ಪಡೆದುಕೊಂಡಿದೆ. ಹಾಗಾಗಿ ಮೊದಲನೇ ದಿನ 72 ಕೋಟಿ ರೂಪಾಯಿ ಬಾಚಿದ್ದರೆ, ಎರಡನೇ ದಿನದ ಅಂತ್ಯಕ್ಕೆ 100 ಕೋಟಿ ರೂಪಾಯಿ ದಾಟಿದೆ (Hundred Crore Club) ಎಂದು ಹೇಳಲಾಗುತ್ತಿದೆ. ಸಾಲು ಸಾಲು ರಜೆಗಳು  ಇರುವುದರಿಂದ ನಾಲ್ಕು ದಿನದ ಗಳಿಕೆ ಇನ್ನೂ ನೂರು ಕೋಟಿ ಆಗಲಿದೆ ಎಂದು ಅಂದಾಜಿಸಲಾಗಿದೆ.

‘ಜೈಲರ್’ (Jailer) ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿತ್ತು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ‌ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್‌ ದಿಗ್ಗಜರು‌ ಜೈಲರ್ ಸಿನಿಮಾದ ಭಾಗವಾಗಿದ್ದಾರೆ. ಕಾವಾಲಾಯ್ಯ ಹಾಡಿನ ಮೂಲಕ ಭಾರೀ ಸೆನ್ಸೇಷನ್ ಸೃಷ್ಟಿಸಿದ್ದ ಈ ಚಿತ್ರ ಆಗಸ್ಟ್ 10ಕ್ಕೆ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ.

 

ಸನ್ ಪಿಕ್ಚರ್ ನಿರ್ಮಾಣ ಮಾಡಿರುವ ಈ ಸಿನಿಮಾವನ್ನು ನೆಲ್ಸನ್ ದಿಲೀಪ್ ಕುಮಾರ್ (Nelson Dilip Kumar) ನಿರ್ದೇಶಿಸಿದ್ದಾರೆ. ಇದೇ ಮೊದಲ ಬಾರಿಗೆ ರಜನಿಕಾಂತ್ ಜೊತೆ ಶಿವರಾಜ್‌ಕುಮಾರ್ (Shivaraj Kumar) ವಿಶೇಷ ಪಾತ್ರದಲ್ಲಿ ನಟಿಸಿರೋದು ಕುತೂಹಲ ಕೆರಳಿಸಿತ್ತು. ಇನ್ನು ಬಾಲಿವುಡ್‌ ನಟ ಜಾಕಿ ಶ್ರಾಫ್, ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ (Mohanlal), ಟಾಲಿವುಡ್ ನಟ ಸುನಿಲ್, ನಾಗಬಾಬು, ನಟಿ ರಮ್ಯಾ ಕೃಷ್ಣ, ತಮನ್ನಾ ಭಾಟಿಯಾ ನಟಿಸಿದ್ದು, ಸಿನಿಪ್ರಿಯರಿಗೆ ಇವರೆಲ್ಲರನ್ನೂ ಒಂದೇ ಸಿನಿಮಾದಲ್ಲಿ ನೋಡುವ ಭಾಗ್ಯ ಸಿಕ್ಕಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್