ಹಿಮಾಚಲ ಪ್ರದೇಶದಲ್ಲಿ ಸಿಎಂ ಪಟ್ಟ ಏರಲಿದ್ದಾರೆ ಜೈರಾಮ್ ಠಾಕೂರ್

Public TV
1 Min Read

ಶಿಮ್ಲಾ: ಹಿಮಾಚಲ ಪ್ರದೇಶದ ಬಿಜೆಪಿಯ ಶಾಸಕಾಂಗ ನಾಯಕರಾಗಿ ಜೈರಾಮ್ ಠಾಕೂರ್ ಆಯ್ಕೆಯಾಗಿದ್ದು, ಡಿ. 27ರಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದ ಬಿಜೆಪಿಯ ನೂತನ ಸದಸ್ಯರ ಶಾಸಕಾಂಗ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದ ಪ್ರೇಮ್ ಕುಮಾರ್ ಧುಮಾಲ್ ಅವರು ಚುನಾವಣೆಯಲ್ಲಿ ಸೋತಿದ್ದರು. ಹೀಗಾಗಿ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವುದರ ಬಗ್ಗೆ ಹಲವರ ಹೆಸರು ತೇಲಿ ಬಂದಿತ್ತು.

ಭಾನುವಾರ ನಡೆದ ಸಭೆಯಲ್ಲಿ ಪ್ರೇಮ್ ಕುಮಾರ್ ಅವರು ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಜೈರಾಮ್ ಠಾಕೂರ್ ಅವರ ಹೆಸರನ್ನು ಸೂಚಿಸಿದರು. ಸನತ್ ಕುಮಾರ್, ಜೆ.ಪಿ. ನಡ್ಡಾ, ಸುರೇಶ್ ಭಾರದ್ವಾಜ್ ಮತ್ತು ಮಹೇಂದರ್ ಸಿಂಗ್ ಸೇರಿದಂತೆ ಎಲ್ಲ ಶಾಸಕರು ಬೆಂಬಲ ಸೂಚಿಸಿದ ಪರಿಣಾಮ ಮುಖ್ಯಮಂತ್ರಿ ಪಟ್ಟವನ್ನು ಅಲಂಕರಿಸಲಿದ್ದಾರೆ.

ನೂತನ ಮುಖ್ಯಮಂತ್ರಿಯಾಗಿ ಡಿ.27ರಂದು ಜೈರಾಮ್ ಠಾಕೂರ್ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಗಹಿಸಲಿದ್ದಾರೆ. ವಿಧಾನಸಭಾ ಚುನಾವಣೆಯ ಒಟ್ಟು 68 ಸ್ಥಾನಗಳ ಪೈಕಿ ಬಿಜೆಪಿ 44, ಕಾಂಗ್ರೆಸ್ 21, ಪಕ್ಷೇತರರು 2, ಸಿಪಿಐ(ಎಂ)1 ಸ್ಥಾನವನ್ನು  ಗೆದ್ದುಕೊಂಡಿತ್ತು.

Share This Article
Leave a Comment

Leave a Reply

Your email address will not be published. Required fields are marked *