ಶ್ರೀನಗರ: ಇಲ್ಲಿನ ನೌಗಮ್ ಪೊಲೀಸ್ ಠಾಣೆಯಲ್ಲಿ ಸಂಭವಿಸಿದ್ದ ಸ್ಫೋಟ (Nowgam Police Station Blast) ಕೇವಲ ಆಕಸ್ಮಿಕ ಘಟನೆ. ಸಂಗ್ರಹಿಸಿದ್ದ ಸ್ಫೋಟಕದಿಂದ ಮಾದರಿಯನ್ನ ಹೊರ ತೆಗೆಯುವಾಗ ಸ್ಫೋಟ ಸಂಭವಿಸಿದೆ. ಇದರ ಹಿಂದೆ ಯಾವುದೇ ಭಯೋತ್ಪಾದನೆ ಪಿತೂರಿ ಇಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಹಾಗೂ ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ನಳಿನ್ ಪ್ರಭಾತ್ (Nalin Prabhat) ಸ್ಪಷ್ಟಪಡಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿಮಾತನಾಡಿದ ಡಿಜಿಪಿ ನಳಿನ್ ಪ್ರಭಾತ್, ಪೊಲೀಸ್ ಠಾಣೆಯಲ್ಲಿ ನಡೆದ ಸ್ಫೋಟವು ಯಾವುದೇ ಭಯೋತ್ಪಾದಕರ ಸಂಚು ಅಥವಾ ದಾಳಿಯಲ್ಲ. ವಿಧಿವಿಜ್ಞಾನ ಪ್ರಯೋಗಾಲಯ (FSL) ತಂಡವು ಮಾದರಿಗಳನ್ನು ಸಂಗ್ರಹಿಸುತ್ತಿದ್ದಾಗ ಸಂಭವಿಸಿದ ಅಪಘಾತ. ಘಟನೆಯಲ್ಲಿ 6 ಪೊಲೀಸರು ಸೇರಿ 9 ಮಂದಿ ಮೃತಪಟ್ಟಿದ್ದಾರೆ, 27 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಭೀಕರ ಸ್ಫೋಟ – ಇಬ್ಬರು ಅಧಿಕಾರಿಗಳು ಸೇರಿ 9 ಮಂದಿ ಸಾವು
ಫರಿದಾಬಾದ್‌ನಿಂದ ವಶಪಡಿಸಿಕೊಂಡ ಸ್ಫೋಟಕಗಳ ಮಾದರಿ ಪರೀಕ್ಷೆಯು ಕಳೆದ 2 ದಿನಗಳಿಂದ ನಡೆಯುತ್ತಿದೆ. ಇದರ ಭಾಗವಾಗಿಯೇ ರಾತ್ರಿ 11:20ರ ಸುಮಾರಿಗೆ ಪರೀಕ್ಷೆಗಾಗಿ ಮಾದರಿ ಸಂಗ್ರಹಿಸುವಾಗ ಘಟನೆ ಸಂಭವಿಸಿದೆ. ಇದು ದುರಾದೃಷ್ಟಕರ, ಒಟ್ಟಿನಲ್ಲಿ ಘಟನೆ ಸಂಬಂಧಿಸಿದಂತೆ ಪೂರ್ಣ ತನಿಖೆ ನಡೆಯುತ್ತಿದೆ. ಇನ್ನೂ ಘಟನಾ ಸ್ಥಳದಿಂದ 6 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಅವು ಗುರುತಿಸಲಾಗದ ಸ್ಥಿತಿಯಲ್ಲಿದೆ. ಮೃತದೇಹಗಳನ್ನು ಶ್ರೀನಗರದಲ್ಲಿರುವ ಪೊಲೀಸ್ ಕಂಟ್ರಲ್ ರೂಮ್‌ಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾದ ಎಜ್ರಾ ಸ್ಟ್ರೀಟ್ ಬಳಿ ಬೆಂಕಿ ಅವಘಡ- 20 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡು
ಭಯೋತ್ಪಾದಕ ಪಿತೂರಿ ಅಲ್ಲ; ಗೃಹ ಸಚಿವಾಲಯ
ಇನ್ನೂ ನೌಗಮ್ ಠಾಣೆಯಲ್ಲಿ ಉಂಟಾದ ಸ್ಫೋಟದ ಕುರಿತು ಗೃಹ ಸಚಿವಾಲಯ ಕೂಡ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ಆಕಸ್ಮಿಕ ಘಟನೆ ಎಂದು ಹೇಳಿದೆ. ಇದನ್ನೂ ಓದಿ: ದೆಹಲಿ ಸ್ಫೋಟ ಬೆನ್ನಲ್ಲೇ ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ – 500 ಕಡೆ ದಾಳಿ, 600 ಮಂದಿ ವಶಕ್ಕೆ
ನವೆಂಬರ್ 14ರ ರಾತ್ರಿ 11:20ಕ್ಕೆ ಜಮ್ಮು ಮತ್ತು ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯೊಳಗೆ ಆಕಸ್ಮಿಕ ಘಟನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಇತ್ತೀಚೆಗೆ ಭಯೋತ್ಪಾದಕ ಮಾಡ್ಯೂಲ್ ಭೇದಿಸಿದ್ದ ಪೊಲೀಸರು ಫರಿದಾಬಾದ್‌ನಲ್ಲಿ ಕಾರ್ಯಾಚರಣೆ ವೇಳೆ ಬೃಹತ್ ಪ್ರಮಾಣದ ಸ್ಫೋಟಕಗಳನ್ನ ವಶಪಡಿಸಿಕೊಂಡಿದ್ದರು. ಇದನ್ನ ಪೊಲೀಸ್ ಠಾಣೆಯ ತೆರೆದ ಪ್ರದೇಶದಲ್ಲಿ ಸುರಕ್ಷಿತವಾಗಿ ಇರಿಸಲಾಗಿತ್ತು. ಅಲ್ಲದೇ ವಶಪಡಿಸಿಕೊಳ್ಳಲಾದ ರಾಸಾಯನಿಕ ಮತ್ತು ಸ್ಫೋಟಕಗಳ ಮಾದರಿಯನ್ನ ವಿಧಿವಿಜ್ಞಾನ ಮತ್ತು ರಾಸಾಯನಿಕ ಪರೀಕ್ಷೆ ಕಳಿಸಲಾಗುತ್ತಿತ್ತು. ಈ ಪ್ರಕ್ರಿಯೆ ಕಳೆದ 2 ದಿನಗಳಿಂದ ನಡೆಯುತ್ತಿತ್ತು. ತಜ್ಞರು ಎಚ್ಚರಿಕೆಯಿಂದಲೇ ನಿರ್ವಹಿಸುತ್ತಿದ್ದರು. ಆದಾಗ್ಯೂ ಪ್ರಕ್ರಿಯೆ ಸಮಯದಲ್ಲಿ ಆಕಸ್ಮಿಕ ಸ್ಫೋಟ ಸಂಭವಿಸಿದೆ. ಇದು ನಿಜಕ್ಕೂ ದುರಾದೃಷ್ಟಕರ. ಘಟನೆಯಲ್ಲಿ 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 27 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರು ಕಂದಾಯ ಅಧಿಕಾರಿಗಳು ಹಾಗೂ ಮೂವರು ನಾಗರಿಕರೂ ಇದ್ದಾರೆ. ಗಾಯಾಳುಗಳನ್ನ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನೂ ಪೊಲೀಸ್ ಠಾಣೆಯ ಕಟ್ಟಡಕ್ಕೆ ತೀವ್ರ ಹಾನಿಯಾಗಿದೆ. ಠಾಣೆಯ ಸುತ್ತಲಿನ ಕಟ್ಟಡಗಳಿಗೂ ಹಾನಿಯಾಗಿದೆ. ಅಪಘಾತ ಪ್ರಕರಣವನ್ನ ತನಿಖೆ ಮಾಡಲಾಗುತ್ತಿದೆ. ಇದರ ಹೊರತಾಗಿ ಯಾವುದೇ ಊಹಾಪೋಹಗಳು ಅನಗತ್ಯ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಕರಾಳ ರಾತ್ರಿಯಲ್ಲಿ ನಡೆದಿದ್ದೇನು?
ಜಮ್ಮು ಮತ್ತು ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ವೈಟ್ ಕಾಲರ್ ಭಯೋತ್ಪಾದನೆಗೆ ಸಂಬಂಧಿಸಿದಂತೆ ಫರೀದಾಬಾದ್‌ನಲ್ಲಿ ಇತ್ತೀಚೆಗೆ ವಶಪಡಿಸಿಕೊಳ್ಳಲಾಗಿದ್ದ ಸ್ಫೋಟಕಗಳ ಸಂಗ್ರಹದಿಂದ ಮಾದರಿಯನ್ನು ಹೊರತೆಗೆಯುವ ಸಂದರ್ಭದಲ್ಲಿ ಸ್ಪೋಟ ಸಂಭವಿಸಿದ್ದು, 6 ಪೊಲೀಸರು ಸೇರಿ 9 ಮಂದಿ ಮೃತಪಟ್ಟಿದ್ದಾರೆ. 27 ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಶುಕ್ರವಾರ ರಾತ್ರಿ ಶಂಕಿತ ಉಗ್ರ ಡಾ. ಮುಜಮ್ಮಿಲ್ ಗನಿಯ ಅವರ ಬಾಡಿಗೆ ಮನೆಯಿಂದ ವಶಪಡಿಸಿಕೊಳ್ಳಲಾಗಿದ್ದ 360 ಕಿ.ಲೋ ಸ್ಪೋಟಕಗಳ ಪರಿಶೀಲನೆ ನಡೆಸುವ ವೇಳೆ ಘಟನೆ ಸಂಭವಿಸಿತ್ತು. ಬಳಿಕ ಇದು ಭಯೋತ್ಪಾದನಾ ಪಿತೂರಿ ಎಂದು ಹೇಳಲಾಗುತ್ತಿತ್ತು. ಅಷ್ಟರಲ್ಲಿ ಡಿಜಿಪಿ ಇದು ಆಕಸ್ಮಿಕ ಘಟನೆ ಎಂದು ಸ್ಪಷ್ಟನೆ ನೀಡಿದ್ದಾರೆ.


