ಕಾಶ್ಮೀರದ ಪೂಂಚ್‌ನಲ್ಲಿ ವಾಯು ಸೇನೆಯ ಬೆಂಗಾವಲು ವಾಹನದ ಮೇಲೆ ಉಗ್ರರ ದಾಳಿ – ಓರ್ವ ಯೋಧ ಹುತಾತ್ಮ

Public TV
1 Min Read

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ (Poonch) ಜಿಲ್ಲೆಯಲ್ಲಿ ಭಾರತೀಯ ವಾಯುಪಡೆ ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ.

ಘಟನೆಯಲ್ಲಿ ಐವರು IAF ಅಧಿಕಾರಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ಸೈನಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಧಂಪುರದ ಕಮಾಂಡ್ ಆಸ್ಪತ್ರೆಗೆ ಹೆಲಿಕಾಪ್ಟರ್ ಮೂಲಕ ರವಾನೆ ಮಾಡಲಾಗಿದೆ. ಮೂಲಗಳ ಪ್ರಕಾರ, ಉಗ್ರರು ಸುಮಾರು 30 ಸುತ್ತು ಗುಂಡು ಹಾರಿಸಿದ್ದಾರೆ. ದಾಳಿ ನಡೆಸಿದ ಬಳಿಕ ಉಗ್ರರು ಸ್ಥಳದಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಕಿಡ್ನಾಪ್‌ ಕೇಸಲ್ಲಿ ಹೆಚ್‌.ಡಿ ರೇವಣ್ಣ ಅರೆಸ್ಟ್

ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಶಾಸಿತಾರ್ ಬಳಿಯ ಜನರಲ್ ಏರಿಯಾದಲ್ಲಿರುವ ವಾಯುನೆಲೆಯೊಳಗೆ ವಾಹನಗಳಿಗೆ ಭದ್ರತೆ ಒದಗಿಸಲಾಗಿದೆ. ಸೇನಾ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಭದ್ರತಾ ಪಡೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಓರ್ವ ಹುತಾತ್ಮ: ಗಾಯಗೊಂಡ ಸೈನಿಕರ ಪೈಕಿ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿದ್ದಾಗ ಕೊನೆಯುಸಿರೆಳೆದಿದ್ದಾರೆ. ಮತ್ತೊಬ್ಬ ಯೋಧನ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮುಂದುವರಿದ ಚಿಕಿತ್ಸೆ. ಉಳಿದ ಮೂವರು ಯೋಧರ ಆರೋಗ್ಯದಲ್ಲಿ ಸ್ಥಿರವಾಗಿದೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

Share This Article