ಜಮ್ಮು & ಕಾಶ್ಮೀರ | ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ

Public TV
0 Min Read

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಸೊಪೋರ್ ಪ್ರದೇಶದಲ್ಲಿ (Sopore Encounter) ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು (Indian Army) ಹೊಡೆದುರುಳಿಸಿವೆ.

ಉಗ್ರರು ಸೂಪೋರ್‌ ಪ್ರದೇಶದಲ್ಲಿ ಅಡಗಿರುವ ನಿಖರ ಮಾಹಿತಿಯ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ. ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರು ಸೇನೆಯ ಗುಂಡಿಗೆ ಬಲಿಯಾಗಿದ್ದಾರೆ.

ಈ ಭಾಗದಲ್ಲಿ ಸೇನೆ ಗುರುವಾರ ರಾತ್ರಿಯಿಂದ ಕಾರ್ಯಾಚರಣೆ ಆರಂಭಿಸಿತ್ತು. ಇನ್ನೂ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹತ್ಯೆಗೀಡಾದ ಭಯೋತ್ಪಾದಕರಿಂದ ಶಸ್ತ್ರಾಸ್ತ್ರಗಳು ಮತ್ತು ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

Share This Article