ಪಾಕ್ ಶೆಲ್ ದಾಳಿಗೆ ಜಮ್ಮು ಕಾಶ್ಮೀರದ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು

Public TV
1 Min Read

ಶ್ರೀನಗರ: ರಾಜೌರಿ(Rajouri) ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿರುವ ಜಿಲ್ಲಾಧಿಕಾರಿಗಳ ನಿವಾಸದ ಮೇಲೆ ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜ್ ಕುಮಾರ್ ಥಾಪ್ಪಾ(Raj Kumar Thapa) ಮತ್ತು ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಅವರ ನಿಧನಕ್ಕೆ ಜಮ್ಮು ಮತ್ತು ಕಾಶ್ಮೀರದ ಸಿಎಂ ಒಮರ್ ಅಬ್ದುಲ್ಲಾ(Omar Abdullah) ಅವರು ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: Video | ರಾಜಸ್ಥಾನದ ಪೋಖ್ರಾನ್‌ ಮೇಲೆ ಪಾಕ್‌ ಬಳಸಿದ ಬೃಹತ್‌ ಮಿಸೈಲ್‌ ಉಡೀಸ್‌!

ರಾಜೌರಿಯಿಂದ ಆಘಾತಕಾರಿ ಸುದ್ದಿಯೊಂದು ಬಂದಿದೆ. ನಾವು ಜಮ್ಮು ಮತ್ತು ಕಾಶ್ಮೀರ(Jammu and Kashmir) ಆಡಳಿತ ಸೇವೆಗಳ ಅಧಿಕಾರಿಯನ್ನು ಕಳೆದುಕೊಂಡಿದ್ದೇವೆ. ನಿನ್ನೆಯಷ್ಟೇ ಅವರು ಜಿಲ್ಲೆಯಾದ್ಯಂತ ಉಪ ಮುಖ್ಯಮಂತ್ರಿಯೊಂದಿಗೆ ಇದ್ದರು. ಅಲ್ಲದೇ ನಾನು ಅಧ್ಯಕ್ಷತೆ ವಹಿಸಿದ್ದ ಆನ್‌ಲೈನ್ ಸಭೆಯಲ್ಲಿ ಭಾಗವಹಿಸಿದ್ದರು. ಇಂದು ಅಧಿಕಾರಿಯ ನಿವಾಸದ ಮೇಲೆ ಪಾಕ್ ಶೆಲ್ ದಾಳಿ ನಡಿಸಿದ್ದು, ನಮ್ಮ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜ್ ಕುಮಾರ್ ಥಾಪ್ಪಾ ಸಾವನ್ನಪ್ಪಿದ್ದಾರೆ. ಈ ಭೀಕರ ಜೀವಹಾನಿಯಿಂದ ನನಗೆ ಆಘಾತವಾಗಿದೆ. ಈ ದುಃಖವನ್ನು ವ್ಯಕ್ತಪಡಿಸಲು ನನಗೆ ಪದಗಳಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಒಮರ್ ಅಬ್ದುಲ್ಲಾ ತಮ್ಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Share This Article