ಜಮ್ಮು ಕಾಶ್ಮೀರ ಚುನಾವಣೆ: ಇಂದು ಬೆಳಗ್ಗೆ ಬಿಡುಗಡೆ ಮಾಡಿದ್ದ ಮೊದಲ ಪಟ್ಟಿ ಹಿಂಪಡೆದ ಬಿಜೆಪಿ

Public TV
1 Min Read

ನವದೆಹಲಿ: ದಿಢೀರ್ ಬೆಳವಣಿಗೆಯಲ್ಲಿ ಜಮ್ಮು ಕಾಶ್ಮೀರ (Jammu Kashmir) ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಪ್ರಕಟಿಸಿದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಹಿಂದಕ್ಕೆ ಪಡೆದಿದೆ.

ಒಟ್ಟು 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆ ಇಂದು ಬೆಳಗ್ಗೆ ಬಿಜೆಪಿ (BJP) 44 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು(Candidate List) ಘೋಷಿಸಿತ್ತು. ಇದೀಗ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹಿಂಪಡೆದಿದ್ದು, ಪರಿಷ್ಕೃತ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.ಇದನ್ನೂ ಓದಿ: ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ : ಬಿಜೆಪಿಯಿಂದ 44 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಒಟ್ಟು 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಸೆ.18, 25, ಹಾಗೂ ಅ.1 ರಂದು ಮೂರು ಹಂತಗಳಲ್ಲಿ ನಡೆಯಲಿದೆ ಮತ್ತು ಅ.4 ರಂದು ಮತ ಎಣಿಕೆ ನಡೆಯಲಿದೆ.

ಬಿ

ನಿನ್ನೆ (ಆ.25) ದೆಹಲಿಯಲ್ಲಿ (Delhi) ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವರನ್ನೊಳಗೊಂಡ ಕೇಂದ್ರ ಚುನಾವಣೆ ಸಮಿತಿ ಸಭೆ ನಡೆಸಲಾಗಿತ್ತು. ಸಭೆ ನಡೆದ ಬೆನ್ನಲ್ಲೆ ಇಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿತ್ತು ಆದರೆ ಇದೀಗ ಪಟ್ಟಿಯನ್ನು ಹಿಂಪಡೆದಿದೆ ಮತ್ತು ಪರಿಷ್ಕೃತ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.ಇದನ್ನೂ ಓದಿ: ಕೃಷ್ಣಾ ನದಿ ತೀರದಲ್ಲಿ ಮತ್ತೆ ಪ್ರವಾಹ ಭೀತಿ – ಬಸವಸಾಗರ ಜಲಾಶಯದಿಂದ ಭಾರಿ ಪ್ರಮಾಣದ ನೀರು ಬಿಡುಗಡೆ

Share This Article