ಜಮ್ಮು-ಕಾಶ್ಮೀರ: ಭಯೋತ್ಪಾದಕರ ವಿರುದ್ಧದ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನಾ ಕ್ಯಾಪ್ಟನ್‌ ಹುತಾತ್ಮ

Public TV
1 Min Read

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬುಧವಾರ ನಡೆದ ಭಯೋತ್ಪಾದಕರ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನೆಯ ಕ್ಯಾಪ್ಟನ್ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೋಡಾ ಜಿಲ್ಲೆಯ ಆಪ್ ಅಸ್ಸಾರ್‌ನಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ 48 ರಾಷ್ಟ್ರೀಯ ರೈಫಲ್ಸ್‌ನ ಭಾರತೀಯ ಸೇನೆಯ ಕ್ಯಾಪ್ಟನ್ ಹುತಾತ್ಮರಾಗಿದ್ದಾರೆ.

ಅಸ್ಸಾರ್ ಪ್ರದೇಶದಲ್ಲಿ ಮಂಗಳವಾರ ಆರಂಭವಾದ ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ. ನಂತರ ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶೋಧ ಕಾರ್ಯಾಚರಣೆ ಭಾಗವಾಗಿದ್ದಾರೆ. ಭಾರಿ ಗುಂಡಿನ ಚಕಮಕಿಯ ನಡುವೆ ಭಯೋತ್ಪಾದಕರಿಗಾಗಿ ಶೋಧ ಮುಂದುವರಿದಿದೆ. ಶೋಧ ತಂಡವನ್ನು ಮುನ್ನಡೆಸುತ್ತಿರುವ ಒಬ್ಬ ಅಧಿಕಾರಿ ಗಾಯಗೊಂಡಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ ಸಂಬಂಧಿತ ಘಟನೆಗಳ ಕುರಿತು ಇಂದು ಬೆಳಗ್ಗೆ ಮಹತ್ವದ ಸಭೆ ನಡೆಸಿದ್ದರು. ರಕ್ಷಣಾ ಕಾರ್ಯದರ್ಶಿ ಗಿರಿಧರ್ ಅರಮನೆ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ-ಲೆಫ್ಟಿನೆಂಟ್ ಜನರಲ್ ಪ್ರತೀಕ್ ಶರ್ಮಾ ಮತ್ತು ಭದ್ರತಾ ಸಂಬಂಧಿತ ಏಜೆನ್ಸಿಗಳ ಮುಖ್ಯಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.

Share This Article