ಶ್ರೀನಗರ: ಭಾರೀ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರದ (Jammu Kashmir) ರಿಯಾಸಿ (Reasi) ಪ್ರದೇಶದಲ್ಲಿ ಭೂಕುಸಿತ ಉಂಟಾಗಿ, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ಹಾಗೂ ಅವರ ಪುತ್ರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ರಾಜಿಂದರ್ ಸಿಂಗ್ ರಾಣಾ (Rajinder Singh Rana) ಹಾಗೂ ಅವರ ಪುತ್ರ ಮೃತಪಟ್ಟಿದ್ದಾರೆ. ಅವರ ಪತ್ನಿ ಹಾಗೂ ಇನ್ನಿಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಶುಕ್ರವಾರ ಕುಟುಂಬ ಸಮೇತರಾಗಿ ಧರ್ಮರಿಯಿಂದ ಪಟ್ಟಿಯನ್‌ಗೆ ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ಈ ಅವಘಡ ಸಂಭವಿಸಿದೆ.ಇದನ್ನೂ ಓದಿ: ಬಿಹಾರ ಚುನಾವಣಾ ಕರಡು ಪಟ್ಟಿಯಲ್ಲಿ ನನ್ನ ಹೆಸರಿಲ್ಲ, ಚುನಾವಣೆಗೆ ಸ್ಪರ್ಧಿಸೋದು ಹೇಗೆ..?: ತೇಜಸ್ವಿ ಯಾದವ್ ಆರೋಪ
ಘಟನೆಯ ಬಗ್ಗೆ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ರಿಯಾಸಿಯ ಸಲೂಖ್ ಇಖ್ತರ್ ನಲ್ಲಾ ಎಂಬ ಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದಾಗ ಭೂಕುಸಿತ ಉಂಟಾಗಿದ್ದು, ಬೃಹತ್ ಬಂಡೆಯೊಂದು ಕಾರಿಗೆ ಅಪ್ಪಳಿಸಿದೆ. ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಾಯಾಳುವನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ರಿಯಾಸಿಯ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ರಾಜಿಂದರ್ ಸಿಂಗ್ ರಾಣಾ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಭೂಕುಸಿತದಲ್ಲಿ ಒಬ್ಬ ಅತ್ಯುತ್ತಮ ಅಧಿಕಾರಿಯನ್ನು ಕಳೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಇದೇ ರೀತಿ ಬೃಹತ್ ಬಂಡೆಯೊಂದು ವಾಹನಕ್ಕೆ ಅಪ್ಪಳಿಸಿ ಇಬ್ಬರು ಸೇನಾ ಸಿಬ್ಬಂದಿ ಸಾವನ್ನಪ್ಪಿದರು.ಇದನ್ನೂ ಓದಿ: ಚುನಾವಣಾ ಆಯೋಗ ಸಂಪೂರ್ಣ ಸತ್ತು ಹೋಗಿದ್ದು, ತನ್ನ ಸ್ವಾಯತ್ತತೆ ಕಳೆದುಕೊಂಡಿದೆ: ರಾಹುಲ್ ಗಾಂಧಿ