ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ರದ್ದು – ದರ್ಶನಕ್ಕೆ ಭಕ್ತರಿಗೆ ಅವಕಾಶ

Public TV
1 Min Read

ಚಾಮರಾಜನಗರ: ಪ್ರಸಿದ್ಧ ಯಾತ್ರಾ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ವೇಳೆ ಭಕ್ತಾದಿಗಳಿಗೆ ದರ್ಶನಕ್ಕೆ ಮಾತ್ರ ಅವಕಾಶ ನೀಡಿ ಜಾತ್ರೆ, ರಥೋತ್ಸವ, ತೆಪ್ಪೋತ್ಸವ ನಡೆಸದಿರಲು ನಿರ್ಧರಿಸಲಾಗಿದೆ.

ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದಲ್ಲಿ ನಡೆಸಲಾಗುವ ದೀಪಾವಳಿ ಹಬ್ಬದ ಆಚರಣೆ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿಸಿ ಡಾ. ಎಂ.ಆರ್. ರವಿ ಅಧ್ಯಕ್ಷತೆಯಲ್ಲಿ ಹಾಗೂ ಸಾಲೂರು ಮಠದ ಶಾಂತಮಲ್ಲಿಕಾರ್ಜುನಸ್ವಾಮಿ, ಶಾಸಕರಾದ ಆರ್. ನರೇಂದ್ರ, ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದನ್ನೂ ಓದಿ: ದೆಹಲಿಗೆ ಸಮೀಪವಿರುವ 14 ಜಿಲ್ಲೆಗಳಲ್ಲಿ ಪಟಾಕಿ ನಿಷೇಧಿಸಿದ ಹರಿಯಾಣ

ಸರ್ಕಾರದ ನಿರ್ದೇಶನ ಅನುಸಾರ ಜಾತ್ರೆ, ಮೆರವಣಿಗೆ ಇತ್ಯಾದಿ ನಡೆಸಲು ನಿರ್ಬಂಧ ಇದೆ. ಆದರೆ ದರ್ಶನಕ್ಕೆ ಅವಕಾಶವಿರುವ ಹಿನ್ನೆಲೆ ಭಕ್ತಾದಿಗಳ ದರ್ಶನಕ್ಕೆ ಮಾತ್ರ ಅವಕಾಶ ಮಾಡಿಕೊಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು. ಹಬ್ಬದ ಸಂದರ್ಭದಲ್ಲಿ ಹಾಲರವಿ ಉತ್ಸವವನ್ನು ಸಾಂಪ್ರದಾಯಿಕವಾಗಿ ಸೀಮಿತ ಸಂಖ್ಯೆಗೆ ನಿಗದಿಪಡಿಸಿ ನೆರವೇರಿಸಬಹುದೆಂಬ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: ಬಾಲಿವುಡ್‌ ನಟಿ ಊರ್ಮಿಳಾ ಮಾತೋಂಡ್ಕರ್‌ಗೆ ಕೋವಿಡ್‌-19 ದೃಢ

ಹಬ್ಬದ ಸಂದರ್ಭದಲ್ಲಿ ಕ್ಷೇತ್ರಕ್ಕೆ ಆಗಮಿಸುವವರಿಗೆ ಸಮರ್ಪಕವಾಗಿ ಕೆಎಸ್‍ಆರ್‍ಟಿಸಿ ವತಿಯಿಂದ ಬಸ್ಸುಗಳ ನಿಯೋಜನೆ, ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಚಿಕಿತ್ಸೆ ನೀಡಲು ತಾತ್ಕಾಲಿಕ ಕ್ಯಾಂಟಿನ್‍ಗಳನ್ನು ತೆರೆಯಬೇಕೆಂದು ಡಿಸಿ ಮತ್ತು ಶಾಸಕರು ನಿರ್ದೇಶನ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *