‘ಜವಾನ್’ ಬಾಕ್ಸ್ ಆಫೀಸ್ ಕಲೆಕ್ಷನ್: ಈವರೆಗೂ ಹರಿದು ಬಂದ ಹಣವೆಷ್ಟು?

Public TV
2 Min Read

ಶಾರುಖ್ ಖಾನ್ ನಟನೆಯ ಜವಾನ್ ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಸಿನಿಮಾ ರಿಲೀಸ್ ಆಗಿ ಇಂದಿಗೆ ಆರು ದಿನಗಳು ಕಳೆದಿವೆ. ಅಷ್ಟೂ ದಿನಗಳು ಕೂಡ ಬಾಕ್ಸ್ ಆಫೀಸಿಗೆ ಕೋಟಿ ಕೋಟಿ ಹಣ ಹರಿದು ಬರುತ್ತಿದೆ. ಬಾಕ್ಸ್ ಆಫೀಸಿನ ಲೆಕ್ಕಾಚಾರ ಪಂಡಿತರ ಪ್ರಕಾರ ವಿಶ್ವದಾದ್ಯಂತ ಜವಾನ್ ಸಿನಿಮಾ 500 ಕೋಟಿ ರೂಪಾಯಿಗೂ ಹೆಚ್ಚು ಹರಿದು ಬಂದಿದೆ. ಭಾರತದಾದ್ಯಂತ 300 ಕೋಟಿ ರೂಪಾಯಿಗೂ ಹೆಚ್ಚು ಹಣ ಸಂದಾಯವಾಗಿದೆ.

ಅತೀ ವೇಗದಲ್ಲಿ ನೂರು, ಇನ್ನೂರು ಮತ್ತು ಮುನ್ನೂರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ಸಿನಿಮಾ ಎನ್ನುವ ಹೆಗ್ಗಳಿಕೆಗೂ ಈ ಸಿನಿಮಾ ಪಾತ್ರವಾಗಿದೆ. ವೀಕೆಂಡ್ ಮಾತ್ರವಲ್ಲ, ಸಾಮಾನ್ಯ ದಿನಗಳಲ್ಲೂ ಬಾಕ್ಸ್ ಆಫೀಸ್ (Box Office) ತುಂಬುತ್ತಿರುವುದು ಸಹಜವಾಗಿಯೇ ಬಾಲಿವುಡ್ ಸಿನಿಮಾ ರಂಗಕ್ಕೆ ಟಾನಿಕ್ ನೀಡಿದೆ. ಈ ಗೆಲುವನ್ನು ದಕ್ಷಿಣದ ಗೆಲುವು ಎಂದೇ ಬಿಂಬಿಸಲಾಗುತ್ತಿದೆ. ಕಾರಣ, ಈ ಚಿತ್ರದ ನಿರ್ದೇಶಕ ಅಟ್ಲಿ, ತಮಿಳು ಚಿತ್ರರಂಗದ ನಿರ್ದೇಶಕ ಎನ್ನುವುದಾಗಿದೆ.

ಜವಾನ್ 2

ಶಾರುಖ್ ಖಾನ್ (Sharukh Khan) ನಟನೆಯ ‘ಜವಾನ್’ (Jawan) ಸಿನಿಮಾ ಚಿತ್ರಮಂದಿರಲ್ಲಿ ಸಕ್ಸಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಜವಾನ್ 2 (Jawan 2) ಬರುವ ಬಗ್ಗೆ ಗುಡ್ ನ್ಯೂಸ್ ಸಿಕ್ಕಿದೆ. ಶಾರುಖ್- ವಿಜಯ್ ಸೇತುಪತಿ (Vijay Sethupathi) ಜುಗಲ್‌ಬಂದಿ ಜವಾನ್ ಸಿನಿಮಾದಲ್ಲಿ ವರ್ಕೌಟ್ ಆಗಿದೆ. ಸದಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಇರುವ ಶಾರುಖ್‌ಗೆ ‘ಜವಾನ್’ ಚಿತ್ರದ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಅವರ ಉತ್ತರ ಜವಾನ್ 2 ಬರುವ ಬಗ್ಗೆ ಸೂಚನೆ ಕೊಟ್ಟಿದೆ. ಇದನ್ನೂ ಓದಿ:ಕಾಗೆ ಮೇಲಿನ ಕಥೆಯ ಮೂಲಕ ಮತ್ತೆ ಚಿತ್ರರಂಗಕ್ಕೆ ಬಂದ ದಿಲೀಪ್

ಅಭಿಮಾನಿಯೊಬ್ಬರು, ಸರ್, ನೀವೇಕೆ ಕಾಳಿ ವಿಜಯ್ ಸೇತುಪತಿ ಜೊತೆಗೆ ಡೀಲ್ ಮಾಡಿಕೊಳ್ಳಲಿಲ್ಲ? ನಾನು ವಿಜಯ್ ಸೇತುಪತಿ ಸರ್‌ಗೆ ದೊಡ್ಡ ಅಭಿಮಾನಿ ಎಂದು ಟ್ವೀಟ್ ಮಾಡಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಶಾರುಖ್ ಖಾನ್, ನಾನು ಕೂಡ ವಿಜಯ್ ಸರ್‌ಗೆ ದೊಡ್ಡ ಅಭಿಮಾನಿ. ನಾನು ಈಗಾಗಲೇ ಕಾಳಿಯ ಕಪ್ಪು ಹಣವನ್ನು ತೆಗೆದುಕೊಂಡು ಬಂದಿದ್ದೇನೆ. ಈಗ ಬೇರೆಯವರ ಕಪ್ಪು ಹಣವನ್ನು ಹೊರ ತೆಗೆಯುವುದಕ್ಕೆ ಕಾಯುತ್ತಿದ್ದೇನೆ. ವೀಸಾಗಾಗಿ ಕಾಯುತ್ತಿದ್ದೇನೆ ಎಂದು ಟ್ಟೀಟ್ ಮಾಡಿದ್ದಾರೆ. ಈ ಟ್ವೀಟ್ ಜವಾನ್ 2 ಬರುವ ಬಗ್ಗೆ ಸೂಚನೆ ನೀಡುತ್ತಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ.

 

ಜವಾನ್‌ನಲ್ಲಿ ಕ್ಲೈಮ್ಯಾಕ್ಸ್‌ನಲ್ಲಿ ಮುಗಿದ ಮೇಲೆ ಪಾರ್ಟ್ 2 ಬರುವ ರೀತಿಯಲ್ಲಿ ಒಂದು ಸೀನ್ ಇಡಲಾಗಿದೆ. ಅದಕ್ಕೆ ತಕ್ಕಂತೆ ಶಾರುಖ್ ಟ್ವೀಟ್ ಕೂಡ ಹೋಲಿಕೆಯಾಗುತ್ತಿದೆ. ಜವಾನ್ ಸೀಕ್ವೆಲ್ ಬಂದೇ ಬರುತ್ತೆ ಅಂತಾ ಫ್ಯಾನ್ಸ್ ಸಂಭ್ರಮದಲ್ಲಿದ್ದಾರೆ. ‘ಜವಾನ್ 2’ ಬರುವ ಬಗ್ಗೆ ಈ ಮೂಲಕ ನಟ ಸುಳಿವು ನೀಡಿದ್ರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್