‘ಜವಾನ್’ ಅಧಿಕೃತ ಬಾಕ್ಸ್ ಆಫೀಸ್ ಕಲೆಕ್ಷನ್ ಹಂಚಿಕೊಂಡ ಶಾರುಖ್ ಸಂಸ್ಥೆ

Public TV
1 Min Read

ಶಾರುಖ್ ಖಾನ್ ನಟನೆಯ ಜವಾನ್ ಸಿನಿಮಾದ ಕಲೆಕ್ಷನ್ (Collection) ಕುರಿತಾಗಿ ಸಾಕಷ್ಟು ಕುತೂಹಲವಿತ್ತು. ಒಂದೊಂದು ದಿನ ಒಂದೊಂದು ಕಲೆಕ್ಷನ್ ವರದಿ ಹೊರ ಬೀಳುತ್ತಿದ್ದವು. ಹಾಗಾಗಿ ಸಹಜವಾಗಿಯೇ ಅಭಿಮಾನಿಗಳಲ್ಲಿ ಇದು ಗೊಂದಲಕ್ಕೆ ಕಾರಣವಾಗಿತ್ತು. ಇದೀಗ ಅಧಿಕೃತವಾಗಿಯೇ ನಿರ್ಮಾಣ ಸಂಸ್ಥೆಯೇ ಕಲೆಕ್ಷನ್ ವಿವರವನ್ನು ಹಂಚಿಕೊಂಡಿದ್ದು, 15 ದಿನಕ್ಕೆ ವಿಶ್ವದಾದ್ಯಂತ ಬರೋಬ್ಬರಿ 937.61 ಕೋಟಿ ರೂಪಾಯಿ ಬಾಚಿಕೊಂಡಿದೆ. ಶೀಘ್ರದಲ್ಲೇ ಸಾವಿರ ಕೋಟಿ ರೂಪಾಯಿ ಕೂಡ ತಲುಪಲಿದೆ.

ಒಂದು ಕಡೆ ‘ಜವಾನ್’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಬೆನ್ನಲ್ಲೇ ಜವಾನ್ ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತುಗಳು ಕೂಡ ಕೇಳಿ ಬರುತ್ತಿವೆ. ಸಮಾರಂಭವೊಂದರಲ್ಲಿ ಸಿನಿಮಾದ ಕುರಿತು ಮಾತನಾಡಿರುವ ನಿರ್ದೇಶಕ ಅಟ್ಲಿ ತಮ್ಮ ಚಿತ್ರಕ್ಕೆ ಆಸ್ಕರ್ (Oscar) ಪ್ರಶಸ್ತಿ ಬರಬೇಕು. ಆ ಪ್ರಶಸ್ತಿ ಪಡೆಯಲು ಚಿತ್ರಕ್ಕೆ ಎಲ್ಲ ಅರ್ಹತೆಯೂ ಇದೆ ಎಂದು ಹೇಳಿಕೊಂಡಿದ್ದಾರೆ.

ಈ ನಡುವೆ ನಿರ್ದೇಶಕ ಅಟ್ಲಿ (Atlee) ತಮ್ಮ ಅಭಿಮಾನಿಗಳಿಗೆ ಭರ್ಜರಿ ಸುದ್ದಿಯೊಂದನ್ನು ನೀಡಿದ್ದಾರೆ. ‘ಜವಾನ್’ ಯಶಸ್ಸಿನ ಬೆನ್ನಲ್ಲೇ ಅವರು ‘ಜವಾನ್ 2’ (Jawan 2) ಸಿನಿಮಾ ಮಾಡಲು ಮುಂದಾಗಿದ್ದು, ಇದರ ಜೊತೆಗೆ ಶಾರುಖ್ ಖಾನ್ (Shahrukh Khan) ಅಭಿಮಾನಿಗಳಿಗೆ ಮತ್ತೊಂದು ಸರ್ ಪ್ರೈಸ್ ನೀಡಿದ್ದಾರೆ.

 

ಜವಾನ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ನೂರಾರು ಕೋಟಿ ಬ್ಯುಸಿನೆಸ್ ಮಾಡಿದೆ. ಭಾರತದಲ್ಲೇ 400 ಕೋಟಿಗೂ ಅಧಿಕ ಹಣ ಬಾಚಿದೆ. ವಿಶ್ವದಾದ್ಯಂತ 800 ಕೋಟಿಗೂ ಅಧಿಕ ಹಣ ನಿರ್ಮಾಪಕರಿಗೆ ಹರಿದು ಬಂದಿದೆ. ಈ ಖುಷಿಯಲ್ಲೇ ಅಟ್ಲಿ ಜವಾನ್ 2 ಸಿನಿಮಾ ಘೋಷಣೆ ಮಾಡಿದ್ದಾರೆ. ಜೊತೆಗೆ ಶಾರುಖ್ ಖಾನ್ ಮತ್ತು ವಿಜಯ್ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ ಮಾಡುವ ಆಲೋಚನೆಯನ್ನೂ ಅವರು ಹೇಳಿಕೊಂಡಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್