ಬಿಡುಗಡೆಗೂ ಮುನ್ನ ‘ಜವಾನ್’ ಚಿತ್ರದ ವಿಡಿಯೋ ಲೀಕ್: ಪೊಲೀಸ್ ಠಾಣೆ ಮೆಟ್ಟಿಲೇರಿದ ತಂಡ

By
2 Min Read

ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ನಟನೆಯ ಜವಾನ್ ಸಿನಿಮಾ ಇನ್ನಷ್ಟೇ ಬಿಡುಗಡೆಯಾಗಬೇಕಿದೆ. ರಿಲೀಸ್ ಗೂ ಮುನ್ನ ಚಿತ್ರತಂಡಕ್ಕೆ ಭರ್ಜರಿ ಶಾಕ್ ಕೊಟ್ಟಿದೆ ಮೈಕ್ರೋ ಬ್ಲಾಗ್ ವೊಂದು ಚಿತ್ರದ ವಿಡಿಯೋ (Video) ತುಣಕೊಂದನ್ನು ಪೋಸ್ಟ್ ಮಾಡಿದ್ದು, ಅದರಿಂದಾಗಿ ಸಿನಿಮಾದ ಹಲವು ವಿಷಯಗಳು ಬಹಿರಂಗವಾಗಿವೆಯಂತೆ. ಹಾಗಾಗಿ ಚಿತ್ರತಂಡದ ಪ್ರದೀಪ್ ನಿಮಾನಿ ಮುಂಬೈನ ಸಾಂತಾಕ್ರೂಜ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಎಫ್.ಐ.ಆರ್ ಕೂಡ ದಾಖಲಾಗಿದೆ.

ಶಾರುಖ್ ಖಾನ್ (Shahrukh Khan) ಅಭಿನಯದ ‘ಪಠಾಣ್’ ಚಿತ್ರವು ಜಗತ್ತಿನಾದ್ಯಂತ 1000 ಕೋಟಿ ರೂ. ಗಳಿಕೆ ಮಾಡುವ ಮೂಲಕ ಬ್ಲಾಕ್ಬಸ್ಟರ್ ಆಗಿತ್ತು. ಇದರಿಂದ ಸಹಜವಾಗಿಯೇ ಅವರ ಮುಂದಿನ ಚಿತ್ರ ‘ಜವಾನ್’ (Jawana) ಮೇಲೆ ಸಾಕಷ್ಟು ನಿರೀಕ್ಷೆಗಳು ಹೆಚ್ಚಾಗಿವೆ. ಈ ಚಿತ್ರದ ಹಕ್ಕುಗಳನ್ನು ತಮ್ಮದಾಗಿಸಿಕೊಳ್ಳುವುದಕ್ಕೆ ಹಲವು ಪ್ರತಿಷ್ಠಿತ ಸಂಸ್ಥೆಗಳು ಮುಂದಾಗಿದ್ದು, ಈ ಪೈಕಿ ಚಿತ್ರದ ಆಡಿಯೋ (Audio) ಹಕ್ಕುಗಳು ದಾಖಲೆಯ 36 ಕೋಟಿ ರೂ. ಮೊತ್ತಕ್ಕೆ ಮಾರಾಟವಾಗಿರುವ ಸುದ್ದಿ ಬಂದಿದೆ. ಇದನ್ನೂ ಓದಿ:ಎಡಗೈ ಬಳಕೆದಾರರಿಗೆಂದೇ ವಿಶೇಷವಾದ ಹೆಲ್ಮೆಟ್ ಲಾಂಚ್- ದಿಗಂತ್‌ & ಟೀಮ್‌ ಸಾಥ್

‘ಜವಾನ್’ ಚಿತ್ರದ ಆಡಿಯೋ ಹಕ್ಕುಗಳನ್ನು ಭಾರತದ ಖ್ಯಾತ ಆಡಿಯೋ ಸಂಸ್ಥೆಯಾದ ಟಿ-ಸೀರೀಸ್ ತನ್ನದಾಗಿಸಿಕೊಂಡಿದ್ದು, 36 ಕೋಟಿ ರೂ.ಗಳನ್ನು ಕೊಟ್ಟು ಹಕ್ಕುಗಳನ್ನು ಪಡೆದಿದೆ ಎಂದು ಹೇಳಲಾಗಿದೆ. ಚಿತ್ರಕ್ಕೆ ತಮಿಳಿನ ಜನಪ್ರಿಯ ಸಂಗೀತ ನಿರ್ದೇಶಕರಾದ ಅನಿರುದ್ಧ್ ರವಿಚಂದರ್ (Aniruddha Ravichandran), ಈ ಚಿತ್ರದ ಮೂಲಕ ಬಾಲಿವುಡ್ಗೆ ಎಂಟ್ರಿ ಕೊಟ್ಟಿದ್ದಾರೆ.

ಈ ವರ್ಷದ ಅತೀ ನಿರೀಕ್ಷಿತ ಮತ್ತು ದುಬಾರಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಜವಾನ್’ ಚಿತ್ರವನ್ನು ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಸಂಸ್ಥೆಯಡಿ ಶಾರುಖ್ ಖಾನ್ ಅವರ ಪತ್ನಿ ಗೌರಿ ಖಾನ್ ನಿರ್ಮಿಸುತ್ತಿದ್ದು, ದಕ್ಷಿಣ ಭಾರತದ ಜನಪ್ರಿಯ ನಿರ್ದೇಶಕರಾದ ಅಟ್ಲಿ ನಿರ್ದೇಶನ ಮಾಡಿದ್ದಾರೆ.

 

‘ಜವಾನ್’ ಒಂದು ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಶಾರುಖ್ ಖಾನ್ ಜೊತೆಗೆ ನಯನತಾರಾ, ವಿಜಯ್ ಸೇತುಪತಿ, ಪ್ರಿಯಾಮಣಿ, ಯೋಗಿ ಬಾಬು, ಸುನೀಲ್ ಗ್ರೋವರ್, ಸಾನ್ಯಾ ಮಲ್ಹೋತ್ರಾ ಸೇರಿದಂತ ಹಲವು ಜನಪ್ರಿಯ ಕಲಾವಿದರು ಅಭಿನಯಿಸಿದ್ದಾರೆ. ದೀಪಿಕಾ ಪಡುಕೋಣೆ, ಸಂಜಯ್ ದತ್ ಮತ್ತು ವಿಜಯ್ ಅತಿಥಿ ಕಲಾವಿದರಾಗಿ ನಟಿಸಿದ್ದಾರೆ ಎಂದು ಹೇಳಲಾಗುತ್ತಿದೆ.‘ಜವಾನ್’ ಚಿತ್ರವು ಸೆಪ್ಟೆಂಬರ್ 7ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್