ಕುಮಾರಸ್ವಾಮಿಗೆ ಅಂತಹ ದಾರಿದ್ರ್ಯ ಬರೋದೂ ಬೇಡ – ಸಿ.ಟಿ ರವಿ ತಿರುಗೇಟು

Public TV
2 Min Read

ಚಿತ್ರದುರ್ಗ: ಬಿಜೆಪಿ (BJP) ಜೊತೆ ಮೈತ್ರಿ ಮಾಡಿಕೊಳ್ಳುವಂತಹ ದಾರಿದ್ರ್ಯ ಕುಮಾರಸ್ವಾಮಿ ಅವರಿಗೆ ಬರೋದು ಬೇಡ. ಅಂತಹ ದಾರಿದ್ರ್ಯ ಬರೋದು ಒಳ್ಳೆಯದಲ್ಲ ಎಂದು ಮಾಜಿ ಶಾಸಕ ಸಿ.ಟಿ ರವಿ (CT Ravi) ತಿರುಗೇಟು ನೀಡಿದ್ದಾರೆ.

ಚಿತ್ರದುರ್ಗದ (Chitradurga) ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಪಡೆಯತ್ತಿರುವ ಸಂತ್ರಸ್ತರನ್ನ ಭೇಟಿಯಾದ ಸಿ.ಟಿ ರವಿ ಸಂತ್ರಸ್ತರ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ನಮಗೆ ಬಂದಿಲ್ಲ ಎಂಬ ಹೆಚ್‌ಡಿಕೆ (HD Kumaraswamy) ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಇದೇ ವೇಳೆ ಸಂತ್ರಸ್ತರ ಕುರಿತು ಮಾತನಾಡಿ, ಕಾವಾಡಿಗರಹಟ್ಟಿ ಮಾದರಿಯ ಪ್ರಕರಣಗಳು ರಾಜ್ಯದ ಹಲವೆಡೆ ನಡೆದಿವೆ. ರಾಯಚೂರಿನ ಮೊಳಕಾಲ್ಮೂರಿನಲ್ಲೂ ಇಂತಹ ಪ್ರಕರ‌ಣಗಳು ಈ ಹಿಂದೆ‌ ನಡೆದಿದ್ದವು. ಆದ್ರೆ ರಾಜ್ಯ ಸರ್ಕಾರ ಈವರೆಗೆ ಎಚ್ಚೆತ್ತುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಲುಷಿತ ನೀರು ಸೇವಿಸಿ ಐವರು ಸಾವು – ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ವಿತರಣೆ

ಜನರ ಸಾವಿಗೆ ಪರಿಹಾರ ಕೊಡುವುದು ಒಂದು ಭಾಗ. ಆದ್ರೆ ಈ ರೀತಿಯ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಕೊಡಬೇಕು, ಜೊತೆಗೆ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ದಲಿತಕೇರಿಯಲ್ಲಿ ಮಾತ್ರ ಈ ರೀತಿ ನಡೆದಿದೆ: ಕಲುಷಿತ ನೀರು ಸೇವಿಸಿ ಐವರ ಸಾವಿನ ಬಗ್ಗೆ ಚೇತನ್‌ ಪ್ರತಿಕ್ರಿಯೆ

ಸಾವು ಸಂಭವಿಸುವವರೆಗೆ ಗಂಭೀರವಾಗಿ ಪರಿಗಣಿಸದಿರುವ ಮಾನಸಿಕತೆ ಒಳ್ಳೆಯದಲ್ಲ. ಈ ಬಗ್ಗೆ ಜಿಲ್ಲಾಡಳಿತ ಹಾಗೂ ಸರ್ಕಾರ ಎಚ್ಚೆತ್ತುಕೊಂಡು ಮುಂಜಾಗ್ರತಾ ಕ್ರಮವಹಿಸಬೇಕು‌ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಕಲುಷಿತ ನೀರು ಸೇವಿಸಿ ಮಡಿದವರ ಕುಟುಂಬಸ್ಥರಿಗೆ 25 ಲಕ್ಷ ಪರಿಹಾರ, ಸರ್ಕಾರಿ ನೌಕರಿ ಕೊಡಿ: ಸಿ.ಟಿ. ರವಿ ಆಗ್ರಹ

ಈ ವೇಳೆ ‌ಚಿತ್ರದುರ್ಗ‌ದ ವಿಧಾನಪರಿಷತ್‌ ಸದಸ್ಯ ನವೀನ್, ಮಾಜಿ ಸಚಿವ ಬಿ.ಸಿ ನಾಗೇಶ್‌ ಹಾಗೂ ಮಾಜಿ ಶಾಸಕ‌ ತಿಪ್ಪಾರೆಡ್ಡಿ ಮೊದಲಾದವರು ಇದ್ದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್