ಕುತ್ತಿಗೆ, ಎದೆ ಭಾಗಕ್ಕೆ ಇರಿದು. ಕೊಚ್ಚಿ ಜೆಡಿಎಸ್ ಮುಖಂಡನ ಬರ್ಬರ ಕೊಲೆ

Public TV
1 Min Read

ರಾಮನಗರ: ಜೆಡಿಎಸ್ ಪಕ್ಷದ ರಾಜ್ಯ ಎಸ್.ಸಿ. ಹಾಗು ಎಸ್.ಟಿ. ಘಟಕದ ಪ್ರಧಾನ ಕಾರ್ಯದರ್ಶಿಯನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದಲ್ಲಿ ನಡೆದಿದೆ.

ಆರ್.ಟಿ ರಾಜಗೋಪಾಲ್ ಕೊಲೆಯಾದ ಜೆಡಿಎಸ್ ಮುಖಂಡ. ಕನಕಪುರದ ರಾಮನಗರ ರಸ್ತೆಯಲ್ಲಿನ ಜನನಿ ಆಸ್ಪತ್ರೆ ಬಳಿ ಬಳಿ ಟೀ ಕುಡಿಯುತ್ತಿದ್ದ ವೇಳೆ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕುತ್ತಿಗೆ ಹಾಗೂ ಎದೆ ಭಾಗಕ್ಕೆ ಇರಿದು, ಕೊಚ್ಚಿ ಕೊಲೆ ಮಾಡಿದ್ದಾರೆ. ಮೂಲತಃ ಜಿಲ್ಲೆಯ ಪಿ.ರಾಂಪುರ ಗ್ರಾಮದ ನಿವಾಸಿಯಾಗಿದ್ದ ರಾಜಗೋಪಾಲ್ ಕನಕಪುರದಲ್ಲಿ ವಾಸ ಮಾಡುತ್ತಿದ್ದರು.

ಇಂದು ಸಾಯಂಕಾಲ ರಾಜ್‍ಗೋಪಾಲ್ ಮತ್ತು ಕೆಲವರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಗಲಾಟೆ ಬಳಿಕ ರಾಜ್‍ಗೋಪಾಲ್ ಟೀ ಕುಡಿಯಲು ಆಗಮಿಸಿದ್ದರು. ಈ ವೇಳೆ ರಾಜ್‍ಗೋಪಾಲರನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ದುಷ್ಕರ್ಮಿಗಳ ಗುರುತು ಪತ್ತೆಯಾಗಿಲ್ಲ. ಘಟನೆ ಬಳಿಕ ಮಿಂಚಿನ ವೇಗದಲ್ಲಿ ಎಲ್ಲ ನಾಲ್ವರು ಪರಾರಿಯಾಗಿದ್ದಾರೆ.

ಘಟನೆ ಸಂಬಂಧ ಕನಕಪುರ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Share This Article
Leave a Comment

Leave a Reply

Your email address will not be published. Required fields are marked *