ಚಿತ್ರದುರ್ಗ: ಕೋರ್ಟ್ ತೀರ್ಪಿಗೆ ಯಾರೇ ಆದರೂ ತಲೆ ಬಾಗಬೇಕಾಗುತ್ತದೆ ಎಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.
ಹಿರಿಯೂರು ತಾಲೂಕಿನ ಮಸ್ಕಲ್ ಬಳಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಸೆಷನ್ ಕೋರ್ಟ್‍ನಲ್ಲಿ ಆದೇಶ ಪ್ರಕಟಗೊಂಡಿದೆ. ಕೋರ್ಟ್ ತೀರ್ಪಿನ ಬಗ್ಗೆ ಹೆಚ್ಚಿನ ವಿಶ್ಲೇಷಣೆಯ ಅಗತ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕಾಲೇಜಲ್ಲಿ ನಾನು ಮೆರಿಟ್ ವಿದ್ಯಾರ್ಥಿ, ಶಿಕ್ಷೆ ಕೊಡುವಾಗ ನನ್ನ ಕುಟುಂಬವನ್ನ ಪರಿಗಣಿಸಿ: ಕೋರ್ಟಲ್ಲಿ ಪ್ರಜ್ವಲ್ ರೇವಣ್ಣ ಕಣ್ಣೀರು
ಪ್ರಜ್ವಲ್ ಮೇಲೆ ಆರೋಪ ಬಂದ ತಕ್ಷಣ ಪಕ್ಷದಿಂದ ಅಮಾನತು ಮಾಡಲಾಗಿತ್ತು. ನಮ್ಮ ಪಕ್ಷದ ವರಿಷ್ಠರು ಪಕ್ಷದಿಂದ ಅಮಾನತಿನಲ್ಲಿಟ್ಟಿದ್ದರು. ಆಗ ಅಪರಾಧಿನೋ, ಅಲ್ಲವೋ ಎಂಬ ತೀರ್ಪು ಬಂದಿರಲಿಲ್ಲ. ವರಿಷ್ಠರ ತೀರ್ಮಾನದ ಸ್ಪಷ್ಟತೆ ಅರ್ಥ ಮಾಡಿಕೊಳ್ಳಬೇಕಾಗುತ್ತದೆ. ಇದಕ್ಕಿಂತ ಹೆಚ್ಚಾಗಿ ಈ ವಿಷಯದ ಬಗ್ಗೆ ನಾನು ಪ್ರಯಿಕ್ರಿಯಿಸಲ್ಲ ಎಂದಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಕೇಸಲ್ಲಿ ಅಪರಾಧಿ; ತೀರ್ಪು ಪ್ರಕಟವಾಗುತ್ತಿದ್ದಂತೆ ಕೋರ್ಟ್‌ನಲ್ಲಿ ಕಣ್ಣೀರಿಟ್ಟ ಪ್ರಜ್ವಲ್ ರೇವಣ್ಣ