ಹುಡ್ಗಿ ಚೆನ್ನಾಗಿದ್ದರೆ ಎಲ್ಲರೂ ಇಷ್ಟಪಡ್ತಾರೆ, ಹಾಗೇ ಬಿಜೆಪಿ ಕೂಡ ಬರ್ತಾ ಇದೆ: ಸಿ.ಎಂ ಇಬ್ರಾಹಿಂ

Public TV
2 Min Read

– ಬೆಂಗಳೂರಿನಲ್ಲಿಂದು ಜೆಡಿಎಸ್ ಮಹಾಸಭೆ

ಬೆಂಗಳೂರು: ಹುಡ್ಗಿ ಚೆನ್ನಾಗಿದ್ದರೆ ಎಲ್ಲರೂ ಇಷ್ಟ ಪಡ್ತಾರೆ. ಹಾಗೇ ಬಿಜೆಪಿ (BJP) ಕೂಡ ಬರುತ್ತಿದೆ. ಮೈತ್ರಿ ವಿಚಾರ ಚರ್ಚೆ ಹಂತದಲ್ಲಿದ್ದು, ಭಾನುವಾರ (ಇಂದು) ಕಾರ್ಯಕರ್ತರ ಮುಂದೆ ಚರ್ಚಿಸುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ (CM Ibrahim) ಹೇಳಿದ್ದಾರೆ.

ಬೆಂಗಳೂರು ಅರಮನೆ ಮೈದಾನದಲ್ಲಿಂದು ಜೆಡಿಎಸ್ (JDS) ಪಕ್ಷದ ಮಹತ್ವದ ಸಭೆ ನಡೆಯುತ್ತಿದ್ದು, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (HD Devegowda) ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಜೆಡಿಎಸ್ ಹಾಲಿ, ಮಾಜಿ ಶಾಸಕರು, ಜಿಲ್ಲಾ, ತಾಲೂಕು, ಬೂತ್‌ ಮಟ್ಟದ ಅಧ್ಯಕ್ಷರು, ಕಾರ್ಯದರ್ಶಿಗಳು ಪ್ರಮುಖರು ಸಭೆಯಲ್ಲಿ ಭಾಗಿಯಾಗುತ್ತಿದ್ದಾರೆ. ಇದೇ ಸಭೆಯಲ್ಲಿ ಬಿಜೆಪಿ ಜೊತೆಗಿನ ಮೈತ್ರಿ (BJP-JDS Alliance) ವಿಷಯವನ್ನ ಚರ್ಚಿಸಲು ವರಿಷ್ಟರು ಮುಂದಾಗಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಇಬ್ರಾಹಿಂ, ಇವತ್ತಿನ ಸಮಾವೇಶದಲ್ಲಿ ಪಕ್ಷ ಬಲ ಪಡಿಸುವ ಬಗ್ಗೆ ಚರ್ಚೆ ಮಾಡ್ತೀವಿ. ಪಕ್ಷದ ಮಟ್ಟದಲ್ಲಿ ದೋಸ್ತಿ ಬಗ್ಗೆ ಈವರೆಗೆ ಚರ್ಚೆ ಆಗಿಲ್ಲ. ನಮ್ಮ ಪಕ್ಷ ಉಳಿಯಬೇಕು. ರಾಜ್ಯಕ್ಕೆ 3ನೇ ಶಕ್ತಿ ಬೇಕು. ಬಡ ವರ್ಗ, ದಲಿತ ವರ್ಗಕ್ಕೆ ಒಂದು ಪಕ್ಷ ಬೇಕು. ಅದಕ್ಕಾಗಿ ಜಿಲ್ಲಾ ತಾಲೂಕು ಮಟ್ಟದ ಮುಖಂಡರು ಇವತ್ತಿನ ಸಭೆಗೆ ಹಾಜರಾಗುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಪ್ರಾಪ್ತರಿಗೆ ಮದ್ಯ ಸಪ್ಲೈ – ಬೆಂಗಳೂರಿನ 510 ಪಬ್, ಬಾರ್‌ಗಳ ಮೇಲೆ ಸಿಸಿಬಿ ದಾಳಿ

ಮೈತ್ರಿ ಬಗ್ಗೆ ಎಲ್ಲರೂ ಹೇಳ್ತಿದ್ದಾರೆ. ನಾವ್ಯಾರೂ ಇನ್ನೂ ಅದರ ಬಗ್ಗೆ ನಿರ್ಧಾರ ಮಾಡಿಲ್ಲ. ಪಕ್ಷದ ಪ್ರತಿಯೊಬ್ಬರಿಂದಲೂ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಮಾಡ್ತೀವಿ. ಬಿಜೆಪಿ ಅವರು ನಮಗೆ ಆಫರ್ ಕೊಡ್ತಿದ್ದಾರೆ. 4 ಸೀಟು ಅಂತ ನಾವು ಹೇಳಿಲ್ಲ, ಅವರೇ ಹೇಳ್ತಿದ್ದಾರೆ. ಆದ್ರೆ ದೋಸ್ತಿ ಬಗ್ಗೆ ನಾನು, ಕುಮಾರಸ್ವಾಮಿ ತೀರ್ಮಾನ ಮಾಡೋಕೆ ಸಾಧ್ಯವಿಲ್ಲ. ದೇವೇಗೌಡರು ಇದ್ದಾರೆ, ಕೋರ್ ಕಮಿಟಿ ಇದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತೀರ್ಮಾನ ಮಾಡುತ್ತೇವೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಜೆಡಿಎಸ್-ಬಿಜೆಪಿ ಮೈತ್ರಿ ಮಾತುಕತೆ ಆರಂಭಿಕ ಹಂತದಲ್ಲಿದೆ: ಹೆಚ್.ಡಿ.ಕುಮಾರಸ್ವಾಮಿ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್