ಬೆಂಗಳೂರು, ಹೈದರಾಬಾದ್‌ನಲ್ಲೂ ಇಂದಿನಿಂದ ಜಿಯೋ ಟ್ರೂ 5G ಲಭ್ಯ

Public TV
2 Min Read

ಬೆಂಗಳೂರು: 1 ಜಿಬಿಪಿಎಸ್+ ವೇಗದಲ್ಲಿ ಜಿಯೋ ಟ್ರೂ 5ಜಿ (Jio True 5G) ಸೇವೆ ಬೆಂಗಳೂರು (Bengaluru) ಹಾಗೂ ಹೈದರಾಬಾದ್‌ನಲ್ಲಿ (Hyderabad) ನವೆಂಬರ್ 10ರಿಂದ ಆರಂಭವಾಗಿದೆ.

ಮುಂಬೈ, ದೆಹಲಿ, ಕೋಲ್ಕತ್ತಾ, ಚೆನ್ನೈ, ವಾರಾಣಸಿ ಮತ್ತು ನಾಥದ್ವಾರ ಹೀಗೆ 6 ನಗರಗಳಲ್ಲಿ ಜಿಯೋ ಟ್ರೂ 5ಜಿ ಸೇವೆಗಳ ಯಶಸ್ವಿ ಬೀಟಾ ಅನಾವರಣದ ನಂತರದಲ್ಲಿ ಇದೀಗ ಜಿಯೋ (Jio) ಹೆಚ್ಚಿನ ನಗರಗಳಲ್ಲಿ ಜಿಯೋ ಟ್ರೂ 5ಜಿ ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ. ಬೆಂಗಳೂರು ಮತ್ತು ಹೈದರಾಬಾದ್‌ನಲ್ಲೂ ಈಗ ಜಿಯೋ ಟ್ರೂ 5ಜಿ ದೊರೆಯುತ್ತಿದೆ. ಜಿಯೋ ಟ್ರೂ 5ಜಿಯು ಈ ಎರಡೂ ತಂತ್ರಜ್ಞಾನ ಕೇಂದ್ರಿತ ನಗರಗಳಲ್ಲಿ ಮಾನವೀಯತೆಗೆ ಸೇವೆ ಸಲ್ಲಿಸುವ ಮತ್ತು ಭಾರತೀಯರ ಜೀವನದ ಗುಣಮಟ್ಟ ಸುಧಾರಿಸುವ ಕೆಲವು ಇತ್ತೀಚಿನ ತಂತ್ರಜ್ಞಾನಗಳ ನಿಜವಾದ ಸಾಮರ್ಥ್ಯವನ್ನು ಅರಿಯುವುದಕ್ಕೆ ಸಹಾಯ ಮಾಡುತ್ತದೆ.

ಅತ್ಯುತ್ತಮ ಗ್ರಾಹಕ ಅನುಭವ ಖಚಿತ ಮಾಡಿಕೊಳ್ಳಲು ಜಿಯೋದಿಂದ ಸುಧಾರಿತ ಟ್ರೂ 5ಜಿ ಸೇವೆಗಳನ್ನು ಹಂತ ಹಂತವಾಗಿ ಹೊರತರುತ್ತಿದೆ. ಜಿಯೋ ಟ್ರೂ 5ಜಿ ಅನುಭವವನ್ನು ಈಗಾಗಲೇ 6 ನಗರಗಳಲ್ಲಿ ಲಕ್ಷಗಟ್ಟಲೆ ಬಳಕೆದಾರರು ಪಡೆಯುತ್ತಿದ್ದಾರೆ. ಇದಕ್ಕೆ ದೊರೆಯುತ್ತಿರುವ ಪ್ರತಿಕ್ರಿಯೆ ಅತ್ಯಂತ ಧನಾತ್ಮಕವಾಗಿದೆ ಮತ್ತು ಭರವಸೆ ನೀಡುತ್ತದೆ. ಜಿಯೋ ಜಾಗತಿಕವಾಗಿ ಅತ್ಯಾಧುನಿಕ 5ಜಿ ನೆಟ್‌ವರ್ಕ್ ಅನ್ನು ರೂಪಿಸುವುದಕ್ಕೆ ಗ್ರಾಹಕರ ಒಳನೋಟಗಳು ಮತ್ತು ಪ್ರತಿಕ್ರಿಯೆಯು ಸಹಾಯ ಮಾಡುತ್ತಿದೆ.

 

ಜಿಯೋ ಬಳಕೆದಾರರು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿ 500 ಎಂಬಿಪಿಎಸ್ ನಿಂದ 1 ಜಿಬಿಪಿಎಸ್ ವರೆಗೆ ಎಲ್ಲಿಯಾದರೂ ವೇಗದ ಅನುಭವವನ್ನು ಪಡೆಯುತ್ತಿದ್ದಾರೆ ಹಾಗೂ ಅತಿ ಹೆಚ್ಚು ಪ್ರಮಾಣದಲ್ಲಿ ಡೇಟಾ ಬಳಸುತ್ತಿದ್ದಾರೆ. ಇದಕ್ಕೆ ಕಾರಣ ಆಗಿರುವುದು ಜಿಯೋ ಟ್ರೂ 5ಜಿಯ 3 ಪಟ್ಟು ಅನುಕೂಲಗಳು. ಆದ್ದರಿಂದಲೇ ಇದು ಭಾರತದಲ್ಲಿನ ಏಕೈಕ ನಿಜವಾದ 5ಜಿ ನೆಟ್‌ವರ್ಕ್ ಆಗಿದೆ.

1. 4ಜಿ ನೆಟ್‌ವರ್ಕ್‌ನ ಮೇಲೆ ಯಾವುದೇ ಅವಲಂಬನೆ ಇಲ್ಲದೆ ಸುಧಾರಿತ 5ಜಿ ನೆಟ್‌ವರ್ಕ್‌ನೊಂದಿಗೆ ಅದ್ವಿತೀಯ 5ಜಿ ಆರ್ಕಿಟೆಕ್ಚರ್.
2. 700 MHz, 3500 MHz, ಮತ್ತು 26 GHz ಬ್ಯಾಂಡ್‌ಗಳಾದ್ಯಂತ 5ಜಿ ಸ್ಪೆಕ್ಟ್ರಮ್‌ನ ದೊಡ್ಡ ಮತ್ತು ಉತ್ತಮ ಮಿಶ್ರಣ.
3. ಕ್ಯಾರಿಯರ್ ಅಗ್ರಿಗೇಷನ್ ಎಂಬ ಸುಧಾರಿತ ತಂತ್ರಜ್ಞಾನ ಬಳಸಿಕೊಂಡು ಈ 5ಜಿ ಫ್ರೀಕ್ವೆನ್ಸಿಗಳನ್ನು ಏಕರೂಪದ ‘ಡೇಟಾ ಹೈವೇ’ ಆಗಿ ಯಾವುದೇ ಅಡೆತಡೆ ಇಲ್ಲದೆ ಸಂಯೋಜಿಸುತ್ತದೆ.

ನವೆಂಬರ್ 10ರಿಂದ ಬೆಂಗಳೂರು ಮತ್ತು ಹೈದರಾಬಾದ್‌ನಲ್ಲಿರುವ ಜಿಯೋ ಬಳಕೆದಾರರನ್ನು ಜಿಯೋ ವೆಲ್‌ಕಮ್ ಆಫರ್‌ಗೆ ಆಹ್ವಾನಿಸಲಾಗುತ್ತಿದೆ. ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಈ ಮೂಲಕ ಪಡೆಯಬಹುದಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *