ಜೈಪುರ್: ರಾಜಸ್ಥಾನದ (Rajasthan) ಜೋಧ್‌ಪುರದಲ್ಲಿ (Jodhpur) ಶಾಲಾ ಶಿಕ್ಷಕಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ (Dowry Harassment) ಬೇಸತ್ತು ತಮ್ಮ ಮೂರು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಶರಣಾದವರನ್ನು ಸಂಜು ಬಿಷ್ಣೋಯಿ ಹಾಗೂ 3 ವರ್ಷದ ಮಗು ಯಶಸ್ವಿ ಯಶಸ್ವಿ ಎಂದು ಗುರುತಿಸಲಾಗಿದೆ. ಬೆಂಕಿಯಲ್ಲಿ ಬೆಂದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಮಹಿಳೆ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮನೆಯಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿ ವರದಕ್ಷಿಣೆಗಾಗಿ ಪತಿ, ಅತ್ತೆ-ಮಾವ, ಅತ್ತಿಗೆ ಕಿರುಕುಳ ನೀಡುತ್ತಿದ್ದರು ಎಂದು ಉಲ್ಲೇಖಿಸಲಾಗಿದೆ. ಡೆತ್‌ನೋಟ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಅಮ್ಮನ ಕೆನ್ನೆಗೆ ಹೊಡೆದು ಬೆಂಕಿ ಹಚ್ಚಿದ್ರು – ವರದಕ್ಷಿಣೆ ಕೊಲೆಗೆ ಸಾಕ್ಷಿಯಾದ ಪುಟ್ಟ ಕಂದ
ಡೆತ್‌ನೋಟ್‌ನಲ್ಲಿ ಗಣಪತ್ ಸಿಂಗ್ ಎಂಬ ವ್ಯಕ್ತಿಯ ಮೇಲೂ ಕಿರುಕುಳ ಆರೋಪ ಮಾಡಿದ್ದು, ಆತ ಸಹ ಪತಿ ಜೊತೆ ಸೇರಿ ಕಿರುಕುಳ ಕೊಡುತ್ತಿದ್ದ ಎಂದು ಉಲ್ಲೇಖಿಸಲಾಗಿದೆ. ಪೊಲೀಸರು ಆತನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಶುಕ್ರವಾರ ಮಧ್ಯಾಹ್ನ ಶಾಲೆಯಿಂದ ಬಂದ ಮಹಿಳೆ ತನ್ನ ಮಗಳ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ. ಈ ವೇಳೆ ಪತಿ, ಅತ್ತೆ-ಮಾವ ಮನೆಯಲ್ಲಿ ಇರಲಿಲ್ಲ. ನೆರೆಹೊರೆಯವರು ಮನೆಯಿಂದ ಹೊಗೆ ಹೊಗೆ ಬರುವುದನ್ನು ನೋಡಿ ಪೊಲೀಸರು ಮತ್ತು ಕುಟುಂಬಕ್ಕೆ ಮಾಹಿತಿ ನೀಡಿದ್ದರು. ಬಳಿಕ ಬಾಗಿಲು ತೆಗೆದು ನೋಡುವಾಗ ಮಗು ಸಾವನ್ನಪ್ಪಿತ್ತು. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಸಹ ಚಿಕಿತ್ಸೆ ವೇಳೆ ಸಾವನ್ನಪ್ಪಿದರು. ಮರಣೋತ್ತರ ಪರೀಕ್ಷೆ ಬಳಿಕ ತಾಯಿ ಮತ್ತು ಮಗಳನ್ನು ಒಟ್ಟಿಗೆ ಅಂತ್ಯಕ್ರಿಯೆ ಮಾಡಲಾಯಿತು.
ಮಹಿಳೆಯ ತಂದೆ ಒಮರಮ್ ಬಿಷ್ಣೋಯ್ ನೀಡಿದ ದೂರಿನ ಅನ್ವಯ, ಪತಿ ಮತ್ತು ಆತನ ಕುಟುಂಬಸ್ಥರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ; ಬೆಂಕಿ ಹಚ್ಚಿ ಮಹಿಳೆ ಕೊಂದ ಪತಿ, ಅತ್ತೆ-ಮಾವ