ಜೋಗಿ ನಿರ್ಮಾಪಕರಿಂದ ಮತ್ತೊಂದು ಹೊಸ ಸಾಹಸದ ಸಂಕಲ್ಪ

Public TV
2 Min Read

ಳೆದ 40 ವರ್ಷಗಳಿಂದ ಅಶ್ವಿನಿ ಆಡಿಯೋ ಕಂಪನಿ ನಡೆಸಿಕೊಂಡು ಬರುತ್ತಿರುವ ಅಶ್ವಿನಿ ರಾಮಪ್ರಸಾದ್ (Ashwini Ramprasad) ಅವರೀಗ ಕಿರುತೆರೆ ಕ್ಷೇತ್ರಕ್ಕೂ ಎಂಟ್ರಿ ಕೊಟ್ಟಿದ್ದಾರೆ.

ದಶಕಗಳ ಹಿಂದೆ ಸಾವಿರಾರು ಜಾನಪದ, ಭಕ್ತಿಗೀತೆಗಳನ್ನು ತಮ್ಮ ಆಡಿಯೋ ಕಂಪನಿ ಮೂಲಕ ಜನರಿಗೆ ಕೇಳಿಸಿದ ರಾಮ್ ಪ್ರಸಾದ್ ಅವರಿಗೆ ಮೊದಲಿಂದಲೂ ಕಿರುತೆರೆ ಬಗ್ಗೆ ಆಸಕ್ತಿಯಿತ್ತು. ಆದಕ್ಕೆ ಸುವರ್ಣ ವಾಹಿನಿ (Star Suvarna) ಒಂದು ವೇದಿಕೆ ಕಲ್ಪಿಸಿಕೊಟ್ಟಿದೆ. ಇದನ್ನೂ ಓದಿ: ನಟಿ ಭಾವನಾ ರಾಮಣ್ಣ ಸೀಮಂತ ಶಾಸ್ತ್ರ

ಶಿವಣ್ಣ, ಪ್ರೇಮ್ ಕಾಂಬಿನೇಶನ್‌ನ ಜೋಗಿ ಚಿತ್ರ ನಿರ್ಮಿಸುವ ಮೂಲಕ ದಾಖಲೆ ಬರೆದ ಅಶ್ವಿನಿ ರಾಮ್ ಪ್ರಸಾದ್ ಅನಂತರವೂ ಹಲವಾರು ಯಶಸ್ವಿ ಚಲನಚಿತ್ರಗಳನ್ನು ನಿರ್ಮಿಸಿದ್ದರು. ಅಲ್ಲದೆ ಘಾರ್ಗ ಚಿತ್ರದ ಮೂಲಕ ತಮ್ಮ ಪುತ್ರನನ್ನೂ ಹೀರೋ ಮಾಡುತ್ತಿದ್ದಾರೆ. ಇದನ್ನೂ ಓದಿ: ಕನ್ನಡ, ತೆಲುಗಿನಲ್ಲಿ ಏಕಕಾಲದಲ್ಲಿ ಚಿತ್ರೀಕರಣವಾಗಲಿದೆ ರಿಷಬ್ ಶೆಟ್ಟಿ ಹೊಸ ಚಿತ್ರ

ಇದೆಲ್ಲದರ ನಡುವೆ ಇದೀಗ ಧಾರ್ಮಿಕ ಹಾಗೂ ವಾಸ್ತುಶಾಸ್ತ್ರದ ಹಿನ್ನೆಲೆಯ `ಸುವರ್ಣ ಸಂಕಲ್ಪ ಅಮೃತಘಳಿಗೆ’ (Suvarna Sankalpa Amrutha Ghalige) ಕಾರ್ಯಕ್ರಮ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಈ ಕಾರ್ಯಕ್ರಮವನ್ನು ಕರ್ನಾಟಕ ಜ್ಯೋತಿಷ್ಯರತ್ನ ಪ್ರಶಸ್ತಿ ಪುರಸ್ಕೃತರಾದ ವಿಶ್ವನಾಥ ಭಾಗವತ ಗುರೂಜಿಯವರು ನಡೆಸಿಕೊಡಲಿದ್ದಾರೆ. ಗಾಯಕಿಯೂ ಆದ ಅಖಿಲಾ ಪಜಿಮಣ್ಣು ನಿರೂಪಣೆಯ ಜವಾಬ್ದಾರಿ ಹೊತ್ತಿದ್ದಾರೆ. ಆಗಸ್ಟ್ 4ರಿಂದ ಪ್ರತಿದಿನ ಬೆಳಗ್ಗೆ 7:30ಕ್ಕೆ ಸುವರ್ಣ ಸಂಕಲ್ಪ ಅಮೃತಘಳಿಗೆ ಪ್ರಸಾರವಾಗಲಿದೆ. ಇದನ್ನೂ ಓದಿ: ಟೀಕೆಯಿಂದ ಖಿನ್ನತೆಗೆ ಜಾರಿದ್ದೆ, ಆತ್ಮಹತ್ಯೆಗೆ ಯೋಚಿಸಿದ್ದೆ – ಮೌನ ಮುರಿದ ಚಹಲ್‌

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ರಾಮ್ ಪ್ರಸಾದ್ ಅವರು ಮಾತನಾಡಿ, ಈಗಾಗಲೇ 6 ವರ್ಷಗಳಿಂದ ನಡೆದುಕೊಂಡು ಬಂದಿರುವ ಕಾರ್ಯಕ್ರಮವಿದು. ಇದರ ನಂತರ ನಾವೇನು ಮಾಡಬೇಕು ಅಂತ ಪ್ಲಾನ್ ಮಾಡುತ್ತಿದ್ದೇವೆ. ರಾಜ್ಯದ, ದೇಶದ ಎಲ್ಲಾ ಪ್ರಖ್ಯಾತ ದೇವಸ್ಥಾನಗಳಿಗೂ ಭೇಟಿ ನೀಡಬೇಕೆಂದು ಯೋಜನೆಯಿದೆ. ಅಲ್ಲದೆ ನಮಗೆ ಯಾರೇ ಕರೆ ಮಾಡಿದರೂ ಬಡವ, ಬಲ್ಲಿದ ಅಂತ ನೋಡದೆ ಅವರ ಮನೆಗಳಿಗೆ ಹೋಗಿ ವಾಸ್ತು ಪರಿಹಾರ ಸೂಚಿಸುತ್ತೇವೆ ಎಂದು ಹೇಳಿದ್ದಾರೆ.

ಇದರ ಜೊತೆಗೆ ಸಂಜೀವಿನಿ ಸಂಕಲ್ಪ, ಯೋಗ ಸಂಕಲ್ಪ, ಮಂತ್ರ ಸಂಕಲ್ಪ ಹೀಗೆ ಅನೇಕ ಶೀರ್ಷಿಕೆಯಡಿ ಈ ಕಾರ್ಯಕ್ರಮ ನಡೆಯಲಿದೆ. ವೇದಿಕೆಯಲ್ಲಿ ವಿಶ್ವನಾಥ ಗುರೂಜಿ, ನಿರೂಪಕಿ ಅಖಿಲಾ ಪಜಿಮಣ್ಣು ಹಾಗೂ ಸುವರ್ಣ ವಾಹಿನಿಯ ಮುಖ್ಯಸ್ಥರೂ ಸುವರ್ಣ ಸಂಕಲ್ಪ ಅಮೃತಘಳಿಗೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ.

Share This Article