ಪತ್ರಕರ್ತ ಪ್ರಸಾದ್ ಹೆಗ್ಡೆ ನಿಧನ

Public TV
1 Min Read

ಬೆಂಗಳೂರು: ಪತ್ರಕರ್ತ ಪ್ರಸಾದ್ ಹೆಗ್ಡೆ (Prasad Hegde) (45) ಶನಿವಾರ ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆ (Apollo Hospital) ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದರು. ಮೃತರ ಅಂತ್ಯಕ್ರಿಯೆ ಇಂದು ಸಂಜೆ ಸಿರಸಿಯ ಸದ್ಗತಿ ನೆಮ್ಮದಿ ಕುಟೀರದಲ್ಲಿ ನೆರವೇರಲಿದೆ.

ಮೂಲತಃ ಉತ್ತರಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಬೆಳಗುಂದ್ಲಿಯವರಾದ ಪ್ರಸಾದ್ ಹೆಗ್ಡೆ ಪ್ರಸ್ತುತ ರಾಜ್ ನ್ಯೂಸ್ ಔಟ್ ಪುಟ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮುಗಿಸಿದ್ದ ಪ್ರಸಾದ್, ರಂಗಭೂಮಿಯಲ್ಲಿ ಅಪಾರ ಆಸಕ್ತಿ ಹೊಂದಿದ್ದರು. ಇದನ್ನೂ ಓದಿ: ಅಕಾಲಿಕ ಮಳೆಗೆ ಮಹಾರಾಷ್ಟ್ರದಲ್ಲಿ 5 ಸಾವು- ಹಿಮಾಚಲ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮೈಸೂರಿನ ಹಿರಿಯ ಕಲಾವಿದರು, ಸಾಹಿತಿಗಳ ಪ್ರಭಾವಕ್ಕೆ ಒಳಗಾಗಿದ್ದ ಪ್ರಸಾದ್ ಹೆಗ್ಡೆ, ರಂಗಭೂಮಿಯಲ್ಲಿ ತನ್ನ ಭವಿಷ್ಯವನ್ನು ರೂಪಿಸಿಕೊಳ್ಳುವ ಇಚ್ಛೆ ಹೊಂದಿದ್ದರು. ಆದರೆ ಪದವಿ ಬಳಿಕ ಮಾಧ್ಯಮದೆಡೆಗೆ ವಾಲಿದರು. ಮೈಸೂರು ದಿಗಂತ ಪತ್ರಿಕೆಯಲ್ಲಿ ಪತ್ರಕರ್ತ ವೃತ್ತಿಯನ್ನು ಆರಂಭಿಸಿದ ಪ್ರಸಾದ್, ಬಳಿಕ ಹಲೋ ಮೈಸೂರು ಮತ್ತು ಮೈಸೂರು ಮಿತ್ರ ಪತ್ರಿಕೆಯಲ್ಲಿ ಕೆಲ ಮಾಡಿದ್ದಾರೆ. ನಂತರ ರಾಜಧಾನಿ ಬೆಂಗಳೂರಿಗೆ ಬಂದು ದೃಶ್ಯ ಮಾಧ್ಯಮದಲ್ಲಿ ತನ್ನ ವೃತ್ತಿಯನ್ನು ಮುಂದುವರಿಸಿದರು, ಕಸ್ತೂರಿ ಟಿವಿಯಲ್ಲಿ ರಾಜಕೀಯ ವರದಿಗಾರರಾಗಿ, ನಿರೂಪಕರಾಗಿ, ರಾಜಕೀಯ ವಿಶ್ಲೇಷಕರಾಗಿ ಹಲವು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದರು. ಬಳಿಕ ಪ್ರಜಾ ಟಿವಿ, ದಿಗ್ವಿಜಯ ನ್ಯೂಸ್, ನ್ಯೂಸ್ ಫಸ್ಟ್ ಸಂಸ್ಥೆಗಳಲ್ಲಿಯೂ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು.

ಹೆಗ್ಡೆ ನಿಧನಕ್ಕೆ ಗಣ್ಯರು, ಹಿರಿಯ ಪತ್ರಕರ್ತರು ಸಂತಾಪ ಸೂಚಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *