ನವದೆಹಲಿ: ತಮ್ಮ ಮನೆಯ ಕೊಠಡಿಯಲ್ಲೇ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಜಡ್ಜ್ (Delhi Judge ಶವ ಪತ್ತೆಯಾಗಿರುವ ಘಟನೆ ದೆಹಲಿಯ ಸಫ್ದರ್ಜಂಗ್ (Safdarjung) ಪ್ರದೇಶದಲ್ಲಿ ನಡೆದಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ಅಮನ್ ಕುಮಾರ್ ಶರ್ಮಾ (30) ಮೃತ ದುರ್ದೈವಿ. ಅವರ ಸೋದರ ಮಾವ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇದನ್ನೂ ಓದಿ: ನಿಷ್ಕ್ರಿಯಗೊಳಿಸುವ ವೇಳೆ ಐಇಡಿ ಸ್ಫೋಟ – ಡಿಆರ್‌ಜಿಯ 3 ಸಿಬ್ಬಂದಿ ಸಾವು

ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ, ಜೊತೆಗೆ ಯಾವುದೇ ಡೆತ್ ನೋಟ್ ಕೂಡ ಪತ್ತೆಯಾಗಿಲ್ಲ, ಒಟ್ಟಿನಲ್ಲಿ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು
ಪುಣೆಯ ಸಿಂಬಿಯೋಸಿಸ್ ಕಾನೂನು ಶಾಲೆಯಿಂದ ಪದವಿ ಪಡೆದ ಅಮನ್ ಕುಮಾರ್ ಶರ್ಮಾ 2018 ರಲ್ಲಿ ಬಿಎಎಲ್‌ಎಲ್‌ಬಿ ಪೂರ್ಣಗೊಳಿಸಿದರು. 2021ರ ಜೂನ್ 19 ರಂದು ದೆಹಲಿಯ ನ್ಯಾಯಾಂಗ ಸೇವೆಗೆ ಸೇರಿದ್ದರು. ಜಡ್ಜ್ ಹುದ್ದೆಗೇರುವ ಜೊತೆಗೆ ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ (DLSA) ಕಾರ್ಯದರ್ಶಿಯಾಗಿಯೂ ನೇಮಿಸಲಾಗಿತ್ತು.
ಸ್ಥಳಕ್ಕೆ ಫೋರೆನ್ಸಿಕ್ ತಂಡ ಭೇಟಿ
ಇನ್ನೂ ಘಟನೆ ಬಗ್ಗೆ ಮಾಹಿತಿ ಪಡೆದ ಕೂಡಲೇ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ವಿಧಿವಿಜ್ಞಾನ ತಂಡಗಳು ಸ್ಥಳಕ್ಕೆ ಧಾವಿಸಿವೆ. ದೆಹಲಿ ಪೊಲೀಸರು ಇದು ಆತ್ಮಹತ್ಯೆ ಎಂದು ಶಂಕಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮತ್ತೊಂದು ಕಡೆ ಅಮನ್ ಶರ್ಮಾ ಅವರ ಹಠಾತ್ ಸಾವು ನ್ಯಾಯಂಗ ವಲಯದಲ್ಲಿ ಆತಂಕ ಮೂಡಿಸಿದೆ. ಇದನ್ನೂ ಓದಿ: ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಫೋಟೋಗ್ರಾಫರ್ ಆತ್ಮಹತ್ಯೆ

