ಜುಲೈ 12ಕ್ಕೆ ಸೆಂಚುರಿ ಸ್ಟಾರ್ ಬರ್ತ್‌ಡೇಗೆ ಸಿದ್ಧತೆ ಹೇಗಿದೆ ಗೊತ್ತಾ?

Public TV
2 Min Read

ವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar)  ಅವರ ನಿಧನದ ಕಾರಣದಿಂದ ಶಿವಣ್ಣ ಕಳೆದ ವರ್ಷ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರಲಿಲ್ಲ. ಈ ವರ್ಷ ಜುಲೈ 12ರಂದು ಅಭಿಮಾನಿಗಳ ಜೊತೆ ಅದ್ದೂರಿಯಾಗಿ ಬರ್ತ್‌ಡೇಯನ್ನ ಆಚರಿಸಿಕೊಳ್ತಿದ್ದಾರೆ. ಫ್ಯಾನ್ಸ್‌ಗಾಗಿ ತಮ್ಮ ಸಮಯವನ್ನ ಮೀಸಲಿಡುತ್ತಿದ್ದಾರೆ. ನಾಳೆ ಏನೆಲ್ಲಾ ಸರ್ಪ್ರೈಸ್ ಇರಲಿದೆ ಇಲ್ಲಿದೆ ಡಿಟೈಲ್ಸ್.

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar) ಅವರು ಜೂನ್ 12ರಂದು 61ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ‘ಆನಂದ’ ಸಿನಿಮಾದಿಂದ ವೃತ್ತಿ ಬದುಕು ಆರಂಭಿಸಿದ ನಟ, 100ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. 60ರ ವಯಸ್ಸಿನಲ್ಲೂ ಯಂಗ್ & ಎನರ್ಜಿಟಿಕ್ ಆಗಿ ಶಿವಣ್ಣ ಕಾಣಿಸಿಕೊಳ್ಳುತ್ತಾರೆ.

ಇದೀಗ ಶಿವಣ್ಣ ಹುಟ್ಟುಹಬ್ಬಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಶಿವರಾಜ್ ಕುಮಾರ್ ಬರ್ತಡೇಗೆ ಫ್ಯಾನ್ಸ್ ಕಡೆಯಿಂದ ಸಿದ್ಧತೆ ನಡೆಯುತ್ತಿದೆ. ಇಂದು ರಾತ್ರಿ 11:30ಕ್ಕೆ ನಾಗವಾರದ ಮನೆಯಲ್ಲಿ ಆಪ್ತರ ಜೊತೆ ಆಚರಣೆ ಶಿವಣ್ಣ, ಬರ್ತ್‌ಡೇ ಸೆಲೆಬ್ರೆಟ್ ಮಾಡಲಿದ್ದಾರೆ. ಬೆಳಗ್ಗೆ 8ರಿಂದ 10ಗಂಟೆಯವರೆಗೆ ಅಭಿಮಾನಿಗಳಿಗೆ ಸಮಯ ಮೀಸಲಿಟ್ಟಿದ್ದಾರೆ. ಬಳಿಕ 10:30ಕ್ಕೆ ಡಾ.ರಾಜ್‌ಕುಮಾರ್ ಪುಣ್ಯಭೂಮಿಯಲ್ಲಿ ಪೂಜೆ ಇರಲಿದೆ. ಇದಾದ ನಂತರ ಶಿವಣ್ಣ ನಟನೆಯ ಘೋಸ್ಟ್ ಸಿನಿಮಾದ ಟೀಸರ್ 11:45ಕ್ಕೆ ಸಂತೋಷ್ ಚಿತ್ರಮಂದಿರದಲ್ಲಿ ಲಾಂಚ್ ಆಗಲಿದೆ. ಮತ್ತೆ ಸಂಜೆ ನಾಗವಾರದ ಮನೆಯಲ್ಲಿ ಅಭಿಮಾನಿಗಳ ಜೊತೆ ಸಂಭ್ರಮಾಚರಣೆ ಮಾಡಲಿದ್ದಾರೆ. ಅಭಿಮಾನಿಗಳಿಗಾಗಿ ಚಿಕನ್ ಬಿರಿಯಾನಿಯನ್ನ ಶಿವಣ್ಣನ ಆಪ್ತಬಳಗ ಮಡಿಸುತ್ತಿದ್ದಾರೆ.

ಶಿವರಾಜ್‌ಕುಮಾರ್ ಅವರು ಕನ್ನಡ ಸಿನಿಮಾಗಳ ಜೊತೆ ಪರಭಾಷೆಯ ಸಿನಿಮಾಗಳಲ್ಲೂ ಮಿಂಚ್ತಿದ್ದಾರೆ. ಕೈತುಂಬಾ ಸಿನಿಮಾಗಳಿವೆ. ಸದ್ಯ ‘ಘೋಸ್ಟ್’ ಸಿನಿಮಾದ ಲುಕ್‌ನಿಂದ ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ. ಬಿಗ್ ಡ್ಯಾಡಿ ಎಂಬ ಪೋಸ್ಟರ್ ಲುಕ್‌ನಿಂದ ಶಿವಣ್ಣ ಕಿಕ್ ಕೊಟ್ಟಿದ್ದಾರೆ. ಅದರ ಜೊತೆಗೆ ಈ ಬಿಗ್ ಡ್ಯಾಡಿ ಅಂದರೆ ಎಂಬ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಕೌತುಕ ಮೂಡುವ ಹಾಗೇ ಮಾಡಿದ್ದಾರೆ.

ಶಿವಣ್ಣ ಬರ್ತ್‌ಡೇ ಸಂಭ್ರಮವನ್ನು ಮತ್ತಷ್ಟು ಹೆಚ್ಚು ಮಾಡಲು ‘ಘೋಸ್ಟ್’ (Ghost Film) ಸಿನಿಮಾ ತಂಡದಿಂದ ಬಿಗ್ ಡ್ಯಾಡಿ ವೀಡಿಯೋ ರಿಲೀಸ್ ಆಗಲಿದೆ. ಅಂದು ಬೆಳಗ್ಗೆ 11:45ಕ್ಕೆ ಬಿಗ್ ಡ್ಯಾಡಿ ಪರಿಚಯ ಆಗಲಿದೆ. ಈ ಮೂಲಕ ಬಿಗ್ ಡ್ಯಾಡಿ ಅಂದರೆ ಏನು ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ. ಇದನ್ನೂ ಓದಿ:ಸ್ಟೈಲೀಶ್‌ ಆಗಿ ಕಾಣಿಸಿಕೊಂಡ ‘ಅಮೃತಧಾರೆ’ ಸಾರಾ- ಕಾವ್ಯಾ ಗೌಡ

ಈ ಪೋಸ್ಟರ್‌ನಲ್ಲಿ ಶಿವಣ್ಣ ಅವರು ರೈಫಲ್ ಹಿಡಿದು ನಿಂತಿದ್ದಾರೆ. ಈ ಸಿನಿಮಾ ಸಖತ್ ಮಾಸ್ ಆಗಿರಲಿದೆ ಎಂಬುದಕ್ಕೆ ಸುಳಿವು ಸಿಕ್ಕಿದೆ. ನಿರ್ದೇಶಕ ಎಂ.ಜಿ. ಶ್ರೀನಿವಾಸ್ ಅವರ ಬರ್ತ್‌ಡೇಯಂದು ಪೋಸ್ಟರ್ ರಿವೀಲ್ ಆಗಿರುವುದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಕನ್ನಡ ಚಿತ್ರರಂಗದಲ್ಲಿ ಶ್ರೀನಿ ಅವರು ನಟನಾಗಿ, ನಿರ್ದೇಶಕನಾಗಿ ಹೆಸರು ಮಾಡಿದ್ದಾರೆ. ‘ಘೋಸ್ಟ್’ ಚಿತ್ರದಲ್ಲಿ ಅವರು ಶಿವಣ್ಣ ಜೊತೆ ಕೈ ಜೋಡಿಸಿರುವುದರಿಂದ ಫ್ಯಾನ್ಸ್‌ಗೆ ನಿರೀಕ್ಷೆ ಮೂಡಿಸಿದೆ. ಘೋಸ್ಟ್ ಸಿನಿಮಾದ ಜೊತೆ ಶಿವಣ್ಣ ನಟಿಸಿರುವ ಪರಭಾಷಾ ಸಿನಿಮಾಗಳ ಲುಕ್ ಕೂಡ ರಿವೀಲ್ ಆಗಲಿದೆ.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್