ಹೆಜ್ಜೇನು ದಾಳಿಗೆ ಜ್ಯೂನಿಯರ್ ಎನ್.ಟಿ.ಆರ್ ಟೀಮ್ ತತ್ತರ: ಆಸ್ಪತ್ರೆಗೆ ದಾಖಲು

Public TV
2 Min Read

ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ನಟನೆಯ ದೇವರ ಸಿನಿಮಾದ ಶೂಟಿಂಗ್ ವೈಜಾಗ್ ನ ಕಾಡೊಂದರಲ್ಲಿ ನಡೆಯುತ್ತಿತ್ತು. ಈ ಸಮಯದಲ್ಲಿ ಹೆಜ್ಜೇನು ದಾಳಿ ನಡೆದಿದ್ದು, 20ಕ್ಕೂ ಹೆಚ್ಚು ಚಿತ್ರತಂಡದ ಸದಸ್ಯರು ಹೆಜ್ಜೇನು ದಾಳಿಗೆ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಅಕ್ಟೋಬರ್ 10 ರಂದು ದೇವರ ಸಿನಿಮಾ ವಿಶ್ವದಾದ್ಯಂತ ರಿಲೀಸ್ ಆಗುವ ಕಾರಣದಿಂದಾಗಿ ಬಿಡುವಿಲ್ಲದೇ ಚಿತ್ರತಂಡ ಶೂಟಿಂಗ್ ನಲ್ಲಿ ತೊಡಗಿದೆ. ಈ ಸಮಯದಲ್ಲಿ ಹೆಜ್ಜೇನು ದಾಳಿ ನಡೆದಿದೆ. ಈ ನಡುವೆ ದೇವರ (Devara) ಸಿನಿಮಾ ಟೀಮ್ ನಿಂದ ಮತ್ತೊಂದು ಅಪ್ ಡೇಟ್ ಸಿಕ್ಕಿದ್ದು, ಈ ಸಿನಿಮಾವನ್ನು ಕನ್ನಡಕ್ಕೂ ಡಬ್ ಮಾಡಿ ರಿಲೀಸ್ ಮಾಡಲಾಗುತ್ತಿದೆ. ತಮ್ಮ ಪಾತ್ರಕ್ಕೆ ಕನ್ನಡದಲ್ಲಿ ಜ್ಯೂನಿಯರ್ ಅವರೇ ಡಬ್ ಮಾಡುವ ಸಾಧ್ಯತೆ ಇದೆ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ.

ಆರ್ ಆರ್ ಆರ್ ಚಿತ್ರದ ನಂತರ ಎನ್ಟಿಆರ್ (Jr NTR) ಅವರು ಕೊರಟಾಲ ಶಿವ (Koratala Shiva) ನಿರ್ದೇಶನದ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಜ್ಯೂನಿಯರ್‌ ಹುಟ್ಟುಹಬ್ಬಕ್ಕೆ ಪೋಸ್ಟರ್ ರಿಲೀಸ್ ಮಾಡಲಾಗಿತ್ತು. ಆ ಪೋಸ್ಟರ್ನಲ್ಲಿ ಜ್ಯೂನಿಯರ್ ಎನ್.ಟಿ.ಆರ್ ಕಪ್ಪು ಬಣ್ಣದ ಲುಂಗಿ ಮತ್ತು ಶರ್ಟ್ ತೊಟ್ಟು,  ಸಮುದ್ರದ ಬಂಡೆಗಳ ಮೇಲೆ ಕೊಡಲಿ ಹಿಡಿದು ನಿಂತು ತೀಕ್ಷ್ಣವಾಗಿ ನೋಡುತ್ತಿದ್ದಾರೆ. ಕಳೆಗೆ ಹೆಣಗಳ ರಾಶಿ ಇದೆ. ಪಕ್ಕದಲ್ಲಿ ಮುರಿದು ಬಿದ್ದ ದೋಣಿಯೊಂದನ್ನೂ ಕಾಣಬಹುದು. ಈ ಪೋಸ್ಟರ್ ಈಗಾಗಲೇ ಜ್ಯೂನಿಯರ್ ಎನ್.ಟಿ.ಆರ್ ಅವರ ಅಭಿಮಾನಿಗಳಲ್ಲಿ ಚಿತ್ರದ ಬಗ್ಗೆ ತೀವ್ರ ಕುತೂಹಲ ಮೂಡಿಸಿದ್ದು, ಅವರ ಮಾಸ್ ಲುಕ್ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿತ್ತು.

 

‘ದೇವರ ಚಿತ್ರದ ಮೂಲಕ ಶ್ರೀದೇವಿ ಮಗಳು ಜಾಹ್ನವಿ ಕಪೂರ್ (Jahnavi Kapoor) ಇದೇ ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಜೊತೆಗೆ ಬಾಲಿವುಡ್‌ನ ಖ್ಯಾತ ನಟ ಸೈಫ್ ಅಲಿ ಖಾನ್ ಸಹ ಖಳನಟನಾಗಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ ಪ್ರಕಾಶ್ ರೈ, ಶ್ರೀಕಾಂತ್ ಮುಂತಾದ ಪ್ರತಿಭಾವಂತ ಕಲಾವಿದರ ದಂಡೇ ಈ ಚಿತ್ರದಲ್ಲಿದೆ. ಯುವಸುಧಾ ಆರ್ಟ್ಸ್ ಮತ್ತು ಎನ್ಟಿಆರ್ ಆರ್ಟ್ಸ್ನಡಿ ಮಿಕ್ಕಿಲಿನೇನಿ ಸುಧಾಕರ್ ಮತ್ತು ಹರಿಕೃಷ್ಣ ನಿರ್ಮಿಸುತ್ತಿರುವ ಈ ಚಿತ್ರವನ್ನು ಖ್ಯಾತ ನಟ ನಂದಮೂರಿ ಕಲ್ಯಾಣರಾಮ್ ನಿರ್ಮಿಸುತ್ತಿದ್ದಾರೆ.

Share This Article