2027ಕ್ಕೆ ದೇಶದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರೆ ಕರ್ನಾಟಕದ ನ್ಯಾ. ಬಿ.ವಿ.ನಾಗರತ್ನ

Public TV
2 Min Read

– ಒಂಭತ್ತು ಮಂದಿ ನ್ಯಾಯಾಧೀಶರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಕರ್ನಾಟಕದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಸೇರಿದಂತೆ 9 ನ್ಯಾಯಮೂರ್ತಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಾಗರತ್ನ ಅವರೊಂದಿಗೆ ಎ.ಎಸ್. ಓಕಾ, ವಿಕ್ರಮ್ ನಾಥ್, ಜೆ.ಕೆ. ಮಹೇಶ್ವರಿ, ಹಿಮಾ ಕೊಹ್ಲಿ, ಸಿ.ಟಿ. ರವೀಂದ್ರಕುಮಾರ್, ಎಂ.ಎಂ. ಸುಂದರೇಶ್, ಬೇಲಾ ತ್ರಿವೇದಿ ಹಾಗೂ ಪಿ.ಎಸ್. ನರಸಿಂಹ ಅವರಿಗೆ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣಾ ಪ್ರಮಾಣ ವಚನ ಬೋಧಿಸಿದರು.

ಇದೇ ಮೊದಲ ಬಾರಿಗೆ ಮೂವರು ಮಹಿಳಾ ನ್ಯಾಯಮೂರ್ತಿಗಳು ಏಕಕಾಲಕ್ಕೆ ಪ್ರಮಾಣ ವಚನ ಸ್ವೀಕರಿಸಿರೋದು ಇತಿಹಾಸವಾಗಿದೆ. ಈ 9 ಜನರೊಂದಿಗೆ ಸುಪ್ರೀಂಕೋರ್ಟ್ ನ್ಯಾಯ ಮೂರ್ತಿಗಳ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಕರ್ನಾಟಕದ ಬಿ.ವಿ. ನಾಗರತ್ನ ಅವರು 2027ರಲ್ಲಿ ದೇಶದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಇತಿಹಾಸ ಸೃಷ್ಟಿಸುವ ಸಾಧ್ಯತೆಗಳು ದಟ್ಟವಾಗಿವೆ.

ಸುಪ್ರೀಂಕೋರ್ಟ್ ಹೊಸ ಕಟ್ಟಡಗಳ ಸಂಕೀರ್ಣದಲ್ಲಿ ನಡೆದ ಸರಳವಾಗಿ ಪ್ರಮಾಣವಚನ ಕಾರ್ಯಕ್ರಮ ನಡೆಯಿತು. ನ್ಯಾ.ಅಭಯ್ ಶ್ರೀನಿವಾಸ್ ಓಕಾ ಸಹ ಕರ್ನಾಟಕದವರು. ಇಂದು ಇಬ್ಬರು ಕರ್ನಾಟಕವರು ಸುಪ್ರಿಂಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ಇನ್ನುಳಿದ ಏಳು ನ್ಯಾಯಾಮೂರ್ತಿಗಳ ಮಾಹಿತಿ ಇಲ್ಲಿದೆ.

* ನ್ಯಾ.ವಿಕ್ರಮ್ ನಾಥ್ ( ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದರು)
* ನ್ಯಾ.ಜಿತೇಂದ್ರ ಕುಮಾರ್ ಮಹೇಶ್ವರಿ (ಸಿಕ್ಕಿಂ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದರು)
* ನ್ಯಾ. ಹಿಮಾ ಕೊಹ್ಲಿ ( ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ)
* ನ್ಯಾ. ಸಿ.ಟಿ.ರವಿಕುಮಾರ್ (ಕೇರಳ ಹೈಕೋರ್ಟ್ ನ್ಯಾಯಾಧೀಶರಾಗಿದ್ದರು)
* ನ್ಯಾ. ಎಂ.ಎಂ.ಸುಂದ್ರೇಶ್ (ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶರಾಗಿದ್ದರು)
* ನ್ಯಾ.ಬೇಲಾ ಎಂ ತ್ರಿವೇದಿ ( ಗುಜರಾತ್ ಹೈಕೋರ್ಟ್ ನ್ಯಾಯಾಧೀಶರಾಗಿದ್ದರು)
* ಪಿ.ಎಸ್. ನರಸಿಂಹ ( ಹಿರಿಯ ವಕೀಲ ಮತ್ತು ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು)

2027ರಲ್ಲಿ ಹಿರಿತನ ಆಧಾರದ ಮೇಲೆ ನ್ಯಾ.ಬಿ.ವಿ.ನಾಗರತ್ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಬಡ್ತಿ ಪಡೆಯಲಿದ್ದಾರೆ. ಮುಖ್ಯ ನ್ಯಾಯಮೂರ್ತಿಯಾಗಿ ಒಂದು ತಿಂಗಳು ಸೇವೆ ಸಲ್ಲಿಸುವ ಅವಕಾಶ ಸಿಗಲಿದೆ. 1989ರಲ್ಲಿ ನ್ಯಾ. ಬಿ.ವಿ ನಾಗರತ್ನ ತಂದೆ ದಿ. ನ್ಯಾ.ಇ.ಎಸ್ ವೆಂಕಟರಾಮಯ್ಯ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಈ ಸ್ಥಾನ ಅಲಂಕರಿಸಿದ್ದ ಮೊದಲ ಕನ್ನಡಿಗರು ಎಂಬ ಹಿರಿಮೆಗೆ ಪಾತ್ರರಾಗಿದ್ದರು. ಇದನ್ನೂ ಓದಿ: ಜೆಡಿಎಸ್ ಮುಳುಗುತ್ತಿದೆ, ಬಿಜೆಪಿ ಬೆಳೆಯುತ್ತಿದೆ : ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

Share This Article
Leave a Comment

Leave a Reply

Your email address will not be published. Required fields are marked *