ನವದೆಹಲಿ: ಭಾರತದ ಸುಪ್ರೀಂ ಕೋರ್ಟ್ (Supreme Court) 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ ಚಂದ್ರಚೂಡ್ (DY Chandrachud) ಇಂದು ಪ್ರಮಾಣವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ದ್ರೌಪದಿ ಮುರ್ಮು (Droupadi Murmu) ಅವರು ಪ್ರಮಾಣವಚನ ಬೋಧಿಸಿದರು. ಇದನ್ನೂ ಓದಿ: ಪಾಕ್-ಕಿವೀಸ್ ಸೆಮಿಫೈನಲ್ – T20 ವಿಶ್ವಕಪ್ ಕ್ರಿಕೆಟ್‌ನಲ್ಲಿಂದು ಬಿಗ್ ಫೈಟ್
ನಿವೃತ್ತ ನ್ಯಾಯಮೂರ್ತಿ ಎನ್.ವಿ ರಮಣ (NV Ramana) ಅವರ ನಿವೃತ್ತಿಯ ನಂತರ 49ನೇ ಸಿಜೆಐ ಆಗಿ ಅಧಿಕಾರ ಸ್ವೀಕರಿಸಿದ್ದ ಯು.ಯು ಲಲಿತ್ (UU Lalit) ಮಂಗಳವಾರ (ನವೆಂಬರ್ 8) ತಮ್ಮ ಕರ್ತವ್ಯ ಮುಕ್ತಾಗೊಳಿಸಿದರು. ಇಂದು 50ನೇ ನ್ಯಾಯಮೂರ್ತಿಯಾಗಿ ಚಂದ್ರಚೂಡ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಹಿಂದೆಯೇ ಚಂದ್ರಚೂಡ್ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು. ಇದನ್ನೂ ಓದಿ: ಗುಡ್ಡ ಹತ್ತಿ ಆಯುಷ್ಮಾನ್ ಕಾರ್ಡ್ ನೋಂದಣಿ – ಧರ್ಮಸ್ಥಳ ಸಂಘದ ಕಾರ್ಯಕ್ಕೆ ಭಾರೀ ಮೆಚ್ಚುಗೆ
ಯಾರಿದು ಚಂದ್ರಚೂಡ್:
1959 ನವೆಂಬರ್ 11 ರಂದು ಜನಿಸಿದ ಡಿ.ವೈ ಚಂದ್ರಚೂಡ್ ಸುಪ್ರೀಂ ಕೋರ್ಟ್ ಮತ್ತು ಬಾಂಬೆ ಹೈಕೋರ್ಟ್ನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡಿದ್ದರು. ನಂತರ ಬಾಂಬೆ ಹೈಕೋರ್ಟ್ ಅವರಗೆ 1998ರ ಜೂನ್‌ನಲ್ಲಿ ಹಿರಿಯ ವಕೀಲರಾಗಿ ಪದೋನ್ನತಿ ನೀಡಿತ್ತು. 2000 ದಲ್ಲಿ ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕವಾಗುವುದಕ್ಕೂ ಮೊದಲು 1998ರಿಂದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಅವರು ಕೆಲಸ ಮಾಡಿದ್ದರು. 2013ರ ಅಕ್ಟೋಬರ್ 31ರಂದು ನ್ಯಾ. ಚಂದ್ರಚೂಡ್ ಅವರನ್ನು ಅಲಾಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿತ್ತು. 2016ರ ಮೇ 13ರಂದು ನ್ಯಾ. ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದರು.