ಬೆಂಗಳೂರು: ಇಡೀ ದೇಶದ ಚುನಾವಣೆಯಲ್ಲಿ ಅಕ್ರಮಗಳು ನಡೆಯುತ್ತಿವೆ. ಇದನ್ನ ನಮ್ಮ ನಾಯಕ ರಾಹುಲ್ ಗಾಂಧಿ ಮಾತಾಡಿದ್ದು, ಕೇಂದ್ರ ಚುನಾವಣಾ ಆಯೋಗ (Election Commission) ಗಮನ ಹರಿಸಬೇಕು ಎಂದು ಸಚಿವ ಕೆ.ಜೆ. ಜಾರ್ಜ್ (K.J. George) ಒತ್ತಾಯಿಸಿದ್ದಾರೆ.
ಕರ್ನಾಟಕದ ಲೋಕಸಭೆ ಚುನಾವಣೆಯಲ್ಲಿ ಅಕ್ರಮ ಆಗಿದೆ ಅನ್ನೋ ರಾಹುಲ್ ಗಾಂಧಿ (Rahul Gandhi) ಆರೋಪ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಗಾಂಧಿ ಅವರು ಕರ್ನಾಟಕ (Karanataka) ಮಾತ್ರವಲ್ಲ, ಇಡೀ ದೇಶದಲ್ಲಿ ನಡೆಯುತ್ತಿರೋ ಅಕ್ರಮದ ಬಗ್ಗೆ ಮಾತಾಡಿದ್ದಾರೆ. ಇಡೀ ರಾಷ್ಟ್ರದಲ್ಲಿ ಚುನಾವಣೆಗಳು ಸರಿಯಾಗಿ ನಡೆಯುತ್ತಿಲ್ಲ. ಚುನಾವಣಾ ಆಯೋಗ ಸರಿಯಾಗಿ ಕೆಲಸ ಮಾಡ್ತಿಲ್ಲ ಅಂತ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಮಹಾದಾಯಿಗೆ ಕೇಂದ್ರ ಅನುಮತಿ ಕೊಡಲ್ಲ – ಗೋವಾ ಸಿಎಂ ಹೇಳಿಕೆಗೆ ಡಿಕೆಶಿ ಕೆಂಡಾಮಂಡಲ
ಈಗ ಬಿಹಾರದಲ್ಲಿ ಚುನಾವಣೆ (Bihar Election) ಆಗ್ತಿದೆ. ಅಲ್ಲೂ ಕೂಡಾ ಇದೇ ಆಗ್ತಿದೆ. ಈ ಬಗ್ಗೆ ರಾಹುಲ್ ಗಾಂಧಿ ಮಾತಾಡಿದ್ದಾರೆ. ಇದರ ಬಗ್ಗೆ ಆಯೋಗ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.