ಹೈದರಾಬಾದ್: ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಮಾಜಿ ಸಿಎಂ ಕೆಸಿಆರ್ ಪುತ್ರಿ ಹಾಗೂ ಎಂಎಲ್‌ಸಿ ಕೆ.ಕವಿತಾ (K.Kavitha) ಅವರನ್ನು ಬಿಆರ್‌ಎಸ್‌ನಿಂದ (BRS) ಅಮಾನತು ಮಾಡಲಾಗಿದೆ.
ಕೆಸಿಆರ್ ವಿರುದ್ಧದ ಫೆಡರಲ್ ತನಿಖೆಗೆ ತಮ್ಮ ಸೋದರಸಂಬಂಧಿ, ಹಿರಿಯ ಬಿಆರ್‌ಎಸ್ ನಾಯಕ ಟಿ.ಹರೀಶ್ ರಾವ್ ಅವರನ್ನು ಕವಿತಾ ಸಾರ್ವಜನಿಕವಾಗಿ ದೂಷಿಸಿದ್ದರು. ತೆಲಂಗಾಣದ ಕಾಂಗ್ರೆಸ್ ನೇತೃತ್ವದ ಸರ್ಕಾರವು ಕಾಲೇಶ್ವರಂ ಯೋಜನೆಗೆ ಸಂಬಂಧಿಸಿದ ಅಕ್ರಮಗಳ ತನಿಖೆಯನ್ನು ಸಿಬಿಐಗೆ ವಹಿಸಿದ ಬೆನ್ನಲ್ಲೇ ಈ ಆರೋಪ ಮಾಡಿದ್ದರು. ಇದನ್ನೂ ಓದಿ: ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಕ್ರಮ್-32 ಬಿಟ್ ಪ್ರೊಸೆಸರ್ ಚಿಪ್ ಅನಾವರಣ
2014 ರಲ್ಲಿ ಬಿಆರ್‌ಎಸ್ ಅಧಿಕಾರದಲ್ಲಿದ್ದಾಗ ನೀರಾವರಿ ಸಚಿವರಾಗಿದ್ದ ಹರೀಶ್ ರಾವ್ ಅವರು ಅಪಾರ ಆಸ್ತಿಗಳಿಸಿದ್ದಾರೆ. ಪ್ರಸ್ತುತ ಮುಖ್ಯಮಂತ್ರಿ ಕಾಂಗ್ರೆಸ್‌ನ ಎ.ರೇವಂತ್ ರೆಡ್ಡಿ ಅವರೊಂದಿಗೆ ಕೈಜೋಡಿಸಿದ್ದಾರೆ ಎಂದು ಕವಿತಾ ಗಂಭೀರ ಆರೋಪ ಮಾಡಿದ್ದರು.
ಮಾಜಿ ರಾಜ್ಯಸಭಾ ಸಂಸದ ಜೆ.ಸಂತೋಷ್ ಕುಮಾರ್ ಅವರ ಹೆಸರನ್ನು ಸಹ ಉಲ್ಲೇಖಿಸಿದ್ದಾರೆ. ಕೆಸಿಆರ್ ಅವರಿಗೆ ಭ್ರಷ್ಟಾಚಾರದ ಕಳಂಕ ಏಕೆ ಬಂತು ಎಂಬುದರ ಕುರಿತು ನಾವು ಯೋಚಿಸಬೇಕು. ಕೆಸಿಆರ್ ಅವರಿಗೆ ಹತ್ತಿರವಿರುವ ಕೆಲವರು ಅವರ ಹೆಸರನ್ನು ಬಳಸಿಕೊಂಡು ಹಲವು ರೀತಿಯಲ್ಲಿ ಲಾಭ ಪಡೆದಿದ್ದಾರೆ. ಅವರ ದುಷ್ಕೃತ್ಯಗಳಿಂದಾಗಿ ಇಂದು ಕೆಸಿಆರ್ ಅವರ ಹೆಸರು ಅಪಖ್ಯಾತಿಗೆ ಒಳಗಾಗುತ್ತಿದೆ ಎಂದು ಕವಿತಾ ಆರೋಪಿಸಿದ್ದರು. ಇದನ್ನೂ ಓದಿ: 232 ಕೋಟಿ ವಂಚನೆ ಪ್ರಕರಣ – ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಮ್ಯಾನೇಜರ್ ಅರೆಸ್ಟ್