ಲಸಿಕೆ ಮೇಲೆ ಜನರಿಗೆ ನಂಬಿಕೆ ಬಂದಿದೆ: ಡಾ.ಕೆ.ಸುಧಾಕರ್

Public TV
2 Min Read

ಕೋಲಾರ: ಲಸಿಕೆ ಮೇಲೆ ಜನರಿಗೆ ನಂಬಿಕೆ ಬಂದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಕೋಲಾರದಲ್ಲಿ ಮುದುವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟಿಸಿ ಮಾತನಾಡಿದ ಸಚಿವರು, ಕೋವಿಡ್ ಲಸಿಕೆ ಬಗ್ಗೆ ಕೆಲವರು ತಪ್ಪು ತಿಳಿವಳಿಕೆ ಮೂಡಿಸುತ್ತಿದ್ದರೂ, ಜನರಿಗೆ ಲಸಿಕೆ ಮೇಲೆ ಸಂಪೂರ್ಣ ನಂಬಿಕೆ ಬಂದಿದೆ. ಲಸಿಕೆ ಪಡೆಯಲು ಜನರು ಸಾಲುಸಾಲಾಗಿ ಬರುತ್ತಿದ್ದು, ಇದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ:ಚಾಮರಾಜನಗರ ಡಿಸಿ ವಿರುದ್ಧ ಡಿಕೆಶಿ ಕಿಡಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ 35 ಸಾವಿರ ಕೋಟಿ ರೂ. ಮೀಸಲಿಟ್ಟು ಎಲ್ಲ ರಾಜ್ಯಗಳಿಗೆ ಲಸಿಕೆ ಪೂರೈಸಿದೆ. ರಾಜ್ಯದಲ್ಲಿ ಲಸಿಕೆ ಮೇಳ ಮಾಡುತ್ತಿದ್ದು, ಜನರಿಗೆ ಅದರ ಮೇಲೆ ನಂಬಿಕೆ ಬಂದಿದೆ. ಇದನ್ನು ಬಿಜೆಪಿ ಲಸಿಕೆ, ಮೋದಿ ಲಸಿಕೆ ಎಂದು ಹೇಳಿದರೂ, ಜನರು ಸಾಲುಸಾಲಾಗಿ ಬಂದು ಲಸಿಕೆ ಪಡೆಯುತ್ತಿದ್ದಾರೆ. ಈ ಸಾಲು ತಪ್ಪಿಸಲು ಯಾರಿಗೂ ಸಾಧ್ಯವಿಲ್ಲ. ಇನ್ನೂ ಕೆಲವರಲ್ಲಿ ಲಸಿಕೆ ಬಗ್ಗೆ ಆತಂಕ ಇದೆ. ಸ್ಥಳೀಯ ಪ್ರತಿನಿಧಿಗಳು, ಅಧಿಕಾರಿಗಳು ಈ ಬಗ್ಗೆ ಅರಿವು ಮೂಡಿಸಬೇಕು. ಪ್ರತಿ ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ಇದ್ದು, ಇದರ ಮೂಲಕ ಅರಿವು ಮೂಡಿಸಬಹುದು ಎಂದಿದ್ದಾರೆ.ಇದನ್ನೂ ಓದಿ:ಪ್ರತಿ ಬುಧವಾರ 10 ಲಕ್ಷ ಲಸಿಕೆ ಗುರಿ: ಸುಧಾಕರ್

ಮುಂದಿನ ವರ್ಷದಿಂದ ಇನ್ನಷ್ಟು ಉತ್ತಮವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುವುದು. ಈಗ 2 ಕೋಟಿ ರೂ. ವೆಚ್ಚದಲ್ಲಿ ಪಿಎಚ್‍ಸಿ ನಿರ್ಮಿಸುತ್ತಿದ್ದು, ಮುಂದೆ 7-8 ಕೋಟಿ ರೂ. ವೆಚ್ಚದಲ್ಲಿ ಪಿಎಚ್‍ಸಿ ನಿರ್ಮಾಣವಾಗಲಿದೆ. 6 ರಿಂದ 12 ಹಾಸಿಗೆಗಳು, ಐಸಿಯು, 24 ಗಂಟೆ ಕಾರ್ಯನಿರ್ವಹಿಸುವ ಮೂರು ವೈದ್ಯರು ಮೊದಲಾದ ವ್ಯವಸ್ಥೆ ಹೊಸ ಪಿಎಚ್‍ಸಿಗಳಲ್ಲಿ ಇರಲಿದೆ ಎಂದು ತಿಳಿಸಿದ್ದಾರೆ.

ಸರ್ಕಾರದಿಂದ ಅನೇಕ ಕ್ರಾಂತಿಕಾರಿ ಸುಧಾರಣೆ ಕೈಗೊಂಡಿದ್ದು, ಕೇವಲ ಐದಾರು ತಿಂಗಳಲ್ಲಿ ಸುಮಾರು 4 ಸಾವಿರ ವೈದ್ಯರನ್ನು ನೇಮಕ ಮಾಡಲಾಗಿದೆ. ಕೋವಿಡ್‍ಗೆ ಮುನ್ನ ಸರ್ಕಾರಿ ಆಸ್ಪತ್ರೆಗಳಲ್ಲಿ 4-5 ಸಾವಿರ ಆಕ್ಸಿಜನ್ ಹಾಸಿಗೆ ಇದ್ದರೆ, ಈಗ 45 ಸಾವಿರ ಆಕ್ಸಿಜನ್ ಸಹಿತ ಹಾಸಿಗೆಗಳಿವೆ ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ:ಸಾರ್ವಜನಿಕ ಗಣೇಶೋತ್ಸವ ಸೆಪ್ಟೆಂಬರ್ 5 ರಂದು ತೀರ್ಮಾನ : ಬೊಮ್ಮಾಯಿ

ಪ್ರತ್ಯೇಕ ಹಾಲು ಒಕ್ಕೂಟ ಜನತೆಯ ಬೇಡಿಕೆಯಾಗಿದೆ. ಇದನ್ನು ರಚನಾತ್ಮಕವಾಗಿ ನೋಡಬೇಕೇ ಹೊರತು ರಾಜಕೀಯದಿಂದ ನೋಡಬಾರದು. ಒಕ್ಕೂಟ ಪ್ರತ್ಯೇಕವಾಗುವುದರಿಂದ ಸ್ಪರ್ಧೆ ಹೆಚ್ಚುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.ಇದನ್ನೂ ಓದಿ:ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ ನೀಡುತ್ತೇನೆ: ಶ್ರೀಮಂತ ಪಾಟೀಲ್

ಎಲ್ಲಾ ಆಸ್ಪತ್ರೆಗಳ ಮುಂಭಾಗ ‘ಸರ್ಕಾರದ ಕೆಲಸ ದೇವರ ಕೆಲಸ’ ಎಂದು ಬರೆಸಲಾಗುವುದು. ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಎಲ್ಲ ಉಪಕರಣ ಬಳಕೆಗೆ ಕ್ರಮ ವಹಿಸಲಾಗಿದೆ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಹಗುರವಾಗಿ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ. ಗ್ರಾಮಗಳಲ್ಲಿ 24 ಗಂಟೆ ಆರೋಗ್ಯ ಕೇಂದ್ರಗಳನ್ನು ಆರಂಭಿಸುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *