‘ಕಾಣದಂತೆ ಮಾಯವಾದನು’ ಚಿತ್ರದ ಮತ್ತೊಂದು ಟೀಸರ್ ಝಲಕ್!

Public TV
1 Min Read

ಗಾಗಲೇ ಟ್ರೈಲರ್ ಹಾಗೂ ಹಾಡುಗಳ ಮೂಲಕ ಸ್ಯಾಂಡಲ್‍ವುಡ್ ನಲ್ಲಿ ಟಾಕ್ ಆಫ್ ದಿ ಟೌನ್ ಆಗಿರುವ ಚಿತ್ರ ಕಾಣದಂತೆ ಮಾಯವಾದನು. ಜಯಮ್ಮನ ಮಗ ಖ್ಯಾತಿಯ ನಿರ್ದೇಶಕ ವಿಕಾಸ್ ನಾಯಕ ನಟನಾಗಿ ಅಭಿನಯಿಸಿರುವ ಈ ಚಿತ್ರದಲ್ಲಿ ನಟಿ ಸಿಂಧು ಲೋಕನಾಥ್ ವಿಕಾಸ್‍ಗೆ ಜೋಡಿಯಾಗಿ ಸ್ಕ್ರೀನ್ ಶೇರ್ ಮಾಡಿದ್ದಾರೆ.

ರಾಜ್ ಪಾತಿಪಾಟಿ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ಮತ್ತೊಂದು ಮಾಸ್ ಟೀಸರ್ ಈಗ ರಿಲೀಸ್ ಆಗಿದ್ದು, ಈ ಸ್ಯಾಂಪಲ್‍ಗು ಕೂಡ ಸೋಶಿಯಲ್ ಮೀಡಿಯಾದಲ್ಲಿ ಒಳ್ಳೆಯ ರೆಸ್ಪಾನ್ಸ್ ಸಿಗುತ್ತಿದೆ. ಬಿಡುಗಡೆಯ ಹೊಸ್ತಿಲಲ್ಲಿರುವ ಈ ಚಿತ್ರದ ಟ್ರೈಲರ್ ಹಾಗೂ ಹಾಡುಗಳು ಬೊಂಬಾಟ್ ರೆಸ್ಪಾನ್ಸ್ ಪಡೆದುಕೊಂಡಿವೆ. ಗ ಮತ್ತೊಂದು ಟೀಸರ್ ರಿಲೀಸ್ ಮಾಡಿ ಚಿತ್ರ ಮೇಲಿನ ಕ್ಯೂರಿಯಾಸಿಟಿಯನ್ನು ಇನ್ನಷ್ಟು ಹೆಚ್ಚಿಸಿದೆ ಚಿತ್ರತಂಡ.

 

ಲವ್, ಥ್ರಿಲ್, ಹಾರಾರ್, ಆ್ಯಕ್ಷನ್ ಸೀಕ್ವೆನ್ಸ್ ಹೀಗೆ ಎಲ್ಲಾ ಎಲಿಮೆಂಟ್‍ಗಳು ಚಿತ್ರದಲ್ಲಿದ್ದು ಪ್ರೇಕ್ಷಕನಿಗೆ ಭರಪೂರ ಮನೋರಂಜನೆ ಸಿಗೋದು ಗ್ಯಾರಂಟಿ ಅಂತ ಕಾಣದಂತೆ ಮಾಯವಾದನು ಟೀಂ ಹೇಳುತ್ತಿದೆ. ಸೆನ್ಸಾರ್ ಅಂಗಳದಲ್ಲಿ ಯು/ಎ ಸರ್ಟಿಫಿಕೇಟ್ ಪಡೆದು ಪಾಸ್ ಆಗಿರೋ ಕಾಣದಂತೆ ಮಾಯವಾದನು ಸಿನಿಮಾ ಜನವರಿ 31ಕ್ಕೆ ಸಿನಿ ಪ್ರೇಕ್ಷಕರ ಎದುರಿಗೆ ಬರಲಿದ್ದಾನೆ. ಗುಮ್ಮಿನೇನಿ ವಿಜಯ್ ಮ್ಯೂಸಿಕ್, ಸುಜ್ಞಾನ್ ಕ್ಯಾಮೆರಾ ಕೈಚಳಕ ಚಿತ್ರಕ್ಕಿದೆ. ಚಿತ್ರದಲ್ಲಿ ದೊಡ್ಡ ತಾರಾಬಳಗದವಿದ್ದು ಅಚ್ಯುತ್ ಕುಮಾರ್, ಭಜರಂಗಿ ಲೋಕಿ, ರಾಘವ್ ಉದಯ್ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *