ನಾನು ಗೆದ್ದೆತ್ತಿನ ಬಾಲ ಹಿಡಿಯಲ್ಲ, ‘ಕಾಟೇರ 2’ ಬರಲ್ಲ: ದರ್ಶನ್ ಮಾತು

Public TV
1 Min Read

ಒಂದು ಸಿನಿಮಾ ಗೆದ್ದಾಕ್ಷಣ ಅದರ ಸಿಕ್ವೇಲ್ಮಾ (Sequel) ಡೋಕೆ ಹೊರಡೋದು ಸಾಮಾನ್ಯ ಸಂಗತಿಯಾಗಿದೆ. ಎಷ್ಟೋ ಸಿನಿಮಾಗಳು ಮೊದಲ ಚಿತ್ರ ಗೆದ್ದ ನಂತರವೇ ಭಾಗ 2 ಚಿತ್ರವನ್ನು ಮಾಡಿದ್ದೂ ಇದೆ. ಆದರೆ, ನಾನು ಆ ರೀತಿ ಮಾಡುವುದಿಲ್ಲ ಎಂದು ಹೇಳುವ ಮೂಲಕ ನಟ ದರ್ಶನ್ (Darshan) ಅಚ್ಚರಿ ಮೂಡಿಸಿದ್ದಾರೆ.

ಕಾಟೇರ ಸಿನಿಮಾ ಸೂಪರ್ ಹಿಟ್ ಆಗಿದೆ. ಶತದಿನೋತ್ಸವ ಕೂಡ ಆಚರಿಸಿಕೊಂಡಿದೆ. ಹಾಗಾಗಿ ಕಾಟೇರ 2 (Kaatera 2) ಸಿನಿಮಾ ಬರತ್ತಾ ಎನ್ನುವ ಕೆಟ್ಟ ಕುತೂಹಲ ಅವರ ಅಭಿಮಾನಿಗಳಲ್ಲಿ ಇತ್ತು. ಅದಕ್ಕೆ ದರ್ಶನ್ ಸ್ಪಷ್ಟನೆ ನೀಡಿದ್ದಾರೆ. ನಾನು ಗೆದ್ದಿತ್ತಿನ ಬಾಲ ಹಿಡಿಯೋದಿಲ್ಲ. ಹಾಗಾಗಿ ಕಾಟೇರ 2 ಬರಲ್ಲ ಅಂದಿದ್ದಾರೆ.

ಕಾಟೇರ ಸಿನಿಮಾ ಕನ್ನಡದ ನೆಲದ ಸಿನಿಮಾ. 1970ರ ಕಾಲಘಟ್ಟದ ಕಥೆಯನ್ನು ಚೆಂದವಾಗಿ ತೆರೆಮೇಲೆ ತಂದಿದ್ದರು ನಿರ್ದೇಶಕ ತರುಣ್ ಸುಧೀರ್. ಮಾಲಾಶ್ರೀ ಪುತ್ರಿ ಆರಾಧನಾ ರಾಮ್ಗೂ ಕಾಟೇರ ದೊಡ್ಡ ಹಿಟ್ ನೀಡಿತ್ತು. ಕಥೆ ಬರೆದ ಜಡೇಶ್ ಕುಮಾರ್ ಹಂಪಿ, ಡೈಲಾಗ್ ಬರೆದ ಮಾಸ್ತಿಗೂ ಕಾಟೇರ ಸಿನಿಮಾ ಮರೆಯಲಾಗದ ಯಶಸ್ಸು ನೀಡಿತ್ತು. ಚಿತ್ರ ಶತದಿನೋತ್ಸವ ಕಂಡ ಬೆನ್ನಲ್ಲೇ ಬರಹಗಾರರಿಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

ಈ ಹಿಂದೆ ‘ಕಾಟೇರ’ ಸಿನಿಮಾ ನೂರು ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ನಿರ್ದೇಶಕ ತರುಣ್ ಸುಧೀರ್ ಮತ್ತು ತಂಡ ಕೇಕ್ ಕತ್ತರಿಸಿ ಸಂಭ್ರಮಿಸಿತ್ತು. ಈ ಸಂಭ್ರಮದಲ್ಲಿ ದರ್ಶನ್ ಕಾಣಿಸಿದೇ ಇದ್ದರೂ, ನೂರು ದಿನ ಖುಷಿಯನ್ನು ಅಭಿಮಾನಿಗಳಿಗಾಗಿ ಚಿತ್ರತಂಡ ಹಂಚಿಕೊಂಡಿತ್ತು. ನೂರು ದಿನಗಳನ್ನು (Hundred Days) ಪೂರೈಸಿದ ಬೆನ್ನಲ್ಲೇ ಕಾಟೇರ ಸಿನಿಮಾ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಂಡಿತ್ತು.

 

ಕಾಟೇರ (Kaatera) ಸಿನಿಮಾ ಥಿಯೇಟರ್ ನಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದರೂ, ಒಟಿಟಿಯಲ್ಲೂ (OTT) ಸ್ಟ್ರೀಮಿಂಗ್ ಆಗುತ್ತಿದೆ. ಒಟಿಟಿಯಲ್ಲಿ ಕಾಟೇರ ಪ್ರದರ್ಶನ ಕಾಣುತ್ತಿರುವುದಕ್ಕೆ ಹುಬ್ಬಳ್ಳಿಯ ಅಭಿಮಾನಿಗಳು ವಿಶೇಷ ರೀತಿಯಲ್ಲಿ ಬರಮಾಡಿಕೊಂಡಿದ್ದರು. ಆಳೆತ್ತರದ ಕಟೌಟ್ ಹಾಕಿ ಕಾಟೇರನನ್ನು ಸ್ವಾಗತಿಸಿದ್ದರು.

Share This Article