ಕಲಬುರಗಿ: ಕೊರೊನಾ ಸೋಂಕು ತಗುಲಿದ್ದ ಕಲಬುರಗಿ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಸಚಿವ ಕೆ.ಸುಧಾಕರ್ ದೃಢಪಡಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಆಳಂದ ನಿವಾಸಿಯಾಗಿದ್ದ 54 ವರ್ಷದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸೋಂಕಿತ ವ್ಯಕ್ತಿ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಕಲಬುರಗಿಯಲ್ಲಿ ಕೊರೊನಾಗೆ ಐದನೇ ಸಾವು ಇದಾಗಿದೆ. ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೋವಿಡ್ 19 ಸೋಂಕಿತ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. 57ವರ್ಷದ ಅಳಂದದ ನಿವಾಸಿಯಾಗಿದ್ದ ಇವರಲ್ಲಿ ಏಪ್ರಿಲ್ 21ರಂದು ಕೊರೋನಾ ಪಾಸಿಟಿವ್ ಬಂದಿತ್ತು. ಉಸಿರಾಟದ ತೊಂದರೆಯಿಂದ GIMSಗೆ ದಾಖಲಾಗಿದ್ದು, ತೀವ್ರ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು. ಇದರೊಂದಿಗೆ ಕಲ್ಬುರ್ಗಿ ಜಿಲ್ಲೆಯಲ್ಲಿ ಒಟ್ಟು 5 ಕೋವಿಡ್ ಮರಣ ಸಂಭವಿಸಿದಂತಾಗಿದೆ
— Dr Sudhakar K (@mla_sudhakar) April 27, 2020
ಸುಧಾಕರ್ ಟ್ವೀಟ್: ರಾಜ್ಯದಲ್ಲಿ ಕೋವಿಡ್ 19 ಸೋಂಕಿತ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. 57 ವರ್ಷದ ಅಳಂದದ ನಿವಾಸಿಯಾಗಿದ್ದ ಇವರಲ್ಲಿ ಏಪ್ರಿಲ್ 21ರಂದು ಕೊರೊನಾ ಪಾಸಿಟಿವ್ ಬಂದಿತ್ತು. ಉಸಿರಾಟದ ತೊಂದರೆಯಿಂದ ಜಿಮ್ಸ್ ಗೆ ದಾಖಲಾಗಿದ್ದು, ತೀವ್ರ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು. ಇದರೊಂದಿಗೆ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 5 ಕೋವಿಡ್ ಮರಣ ಸಂಭವಿಸಿದಂತಾಗಿದೆ.
ಇಂದು 9 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 512ಕ್ಕೆ ಏರಿದ್ದು, ಸಾವಿನ ಸಂಖ್ಯೆ 20ಕ್ಕೆ ತಲುಪಿದೆ. ಇದುವರೆಗೂ ಕೊರೊನಾದಿಂದ 193 ಮಂದಿ ಗುಣಮುಖರಾಗಿದ್ದಾರೆ. ಇಂದು ಒಟ್ಟು 11 ಮಂದಿ ಆಸತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.