ಕಲಬುರಗಿ: ಕಳೆದ ಸೋಮವಾರ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಕುರಿಕೋಟ ಹೊಸ ಸೇತುವೆ ಮೇಲಿಂದ ಬೆಣ್ಣೆತೋರ ಹಿನ್ನೀರಿಗೆ ಜಿಗಿದು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಯುವತಿಯ ಮೃತದೇಹ ಪತ್ತೆಯಾಗಿದೆ.
ಜಿಲ್ಲೆಯ ಕಮಲಾಪುರ ತಾಲೂಕಿನ ಕುರಿಕೋಟ ಬಳಿ ಘಟನೆ ನಡೆದಿದ್ದ, ಅಗ್ನಿಶಾಮಕ ದಳದ ಸತತ ಕಾರ್ಯಾಚರಣೆ ಬಳಿಕ ಕೊನೆಗೂ ಭುಸಣಗಿ ಗ್ರಾಮದ ಯುವತಿ ಸಾಕ್ಷಿ (22) ಮೃತದೇಹ ಪತ್ತೆಯಾಗಿದೆ.
ಅಭಿಷೇಕ ಎಂಬಾತನ ಕಿರುಕುಳಕ್ಕೆ ಬೇಸತ್ತು ಬೆಣ್ಣೆತೋರ ಹಿನ್ನೀರಿಗೆ ಬಿದ್ದು ಸಾಕ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಕುರಿತು ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.